ಕೊಪ್ಪಳ: 2024-25ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆ ಯಡಿಯಲ್ಲಿ ಎಫ್.ಎ.ಕ್ಯೂ. ಗುಣಮಟ್ಟದ ತೊಗರಿ ಖರೀದಿ ಪ್ರಕ್ರಿಯೆಗೆ ಸರ್ಕಾರ ಆದೇಶಿಸಿದ್ದು, ಈ ಬಗ್ಗೆ ರೈತರಿಗೆ ಜಾಗೃತಿ ಮೂಡಿಸಲು ಕೃಷಿ ಮಾರಾಟ ಇಲಾಖೆ, ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿ ವತಿಂದ ಸಿದ್ದಪಡಿಸಿದ ಪೋಸ್ಟರ್-ಗಳನ್ನು ಜಿಲ್ಲಾಧಿಕಾರಿ ನಲಿನ್ ಅತುಲ್ ಅವರು ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ಬಿಡುಗಡೆ ಮಾಡಿದರು.
ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಎಫ್.ಎ.ಕ್ಯೂ. ಗುಣಮಟ್ಟದ ತೊಗರಿ ಖರೀದಿಗಾಗಿ ರಾಜ್ಯದ ಪ್ರಮುಖ ಜಿಲ್ಲೆಗಳಾದ ಕಲಬುರಗಿ, ಬೀದರ್, ಯಾದಗಿರಿ, ರಾಯಚೂರು, ವಿಜಯಪುರ, ಬಾಗಲಕೋಟೆ, ಬಳ್ಳಾರಿ, ವಿಜಯನಗರ, ಕೊಪ್ಪಳ, ಬೆಳಗಾವಿ, ಚಿತ್ರದುರ್ಗ, ಚಿಕ್ಕಬಳ್ಳಾಪೂರ ಹಾಗೂ ಕೋಲಾರ ಜಿಲ್ಲೆಗಳ ವ್ಯಾಪ್ತಿಯಲ್ಲಿ ತೆರೆದಿರುವ ಖರೀದಿ ಕೇಂದ್ರಗಳಲ್ಲಿ ಬೆಂಬಲ ಬೆಲೆ ಪ್ರತಿ ಕ್ವಿಂಟಾಲ್ ರೂ.7,550 ಹಾಗೂ ರಾಜ್ಯ ಸರ್ಕಾರದ ಪ್ರೋತ್ಸಾಹ ಧನ ರೂ. 450 ಸೇರಿ ಒಟ್ಟು ರೂ. 8,000 ಗಳನ್ನು ನಿಗದಿಪಡಿಸಲಾಗಿರುತ್ತದೆ. ರೈತರು ಎಫ್.ಎ.ಕ್ಯೂ. ಗುಣ ಮಟ್ಟದ ತೊಗರಿ ಮಾರಾಟ ಮಾಡಿ ಬೆಂಬಲ ಬೆಲೆ ಯೋಜನೆಯ ಹಾಗೂ ರಾಜ್ಯ ಸರ್ಕಾರದ ಪ್ರೋತ್ಸಾಹ ಧನದ ಸದುಪಯೋಗ ಪಡೆದುಕೊಳ್ಳಲು ಕೋರಲಾಗಿದೆ.
ಇದನ್ನು ಓದಿ :- ಯುವ ಕಾಂಗ್ರೆಸ್ ಚುನಾವಣೆಯಲ್ಲಿ ಮೋಸ ತನಿಖೆ ನಡೆಸಿ ಮರು ಚುನಾವಣೆ ಆಗಲಿ: ಸಮೀರ್ ಪಾಷಾ ಆಗ್ರಹ
ಪ್ರತಿ ಎಕರೆಗೆ 04 ಕ್ವಿಂಟಲ್‌ರಂತೆ ಗರಿಷ್ಠ 40 ಕ್ವಿಂಟಲ್‌ವರೆಗೆ ಪ್ರತಿ ರೈತರಿಂದ ಖರೀದಿಸಲಾಗುವುದು. ರೈತ ಬಾಂಧವರು ತಮ್ಮ ಹತ್ತಿರದ ಪಿಎಸಿಎಸ್, ಎಫ್.ಪಿ.ಓ. ಟಿ.ಎ.ಪಿ.ಎಂ.ಸಿ.ಗಳಲ್ಲಿ ತಮ್ಮ ಫೂಟ್ಸ್ ಎಫ್.ಐ.ಡಿ. ಸಂಖ್ಯೆ ನೀಡಿ ನೋಂದಣಿ ಮಾಡಿಕೊಂಡು ಎಫ್.ಎ.ಕ್ಯೂ, ಗುಣಮಟ್ಟದ ತೊಗರಿ ಮಾರಾಟ ಮಾಡಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಉಚಿತ ದೂರವಾಣಿ ಸಂಖ್ಯೆ: 1800 4251552 ಯನ್ನು ಕಛೇರಿಯ ಸಮಯದಲ್ಲಿ ಸಂಪರ್ಕಿಸಬಹುದು.