ಬಿಲ್ಕಿಸ್ ಬಾನೊ ಪ್ರಕರಣದ ಅಪರಾಧಿಗಳ ಬಿಡುಗಡೆ ಕೆಟ್ಟ ಸಂಪ್ರದಾಯಕ್ಕೆ ನಾಂದಿ: ನ್ಯಾಯಮೂರ್ತಿ ಯು ಡಿ ಸಾಲ್ವಿ

ನವದೆಹಲಿ: ಗುಜರಾತ್‌ ರಾಜ್ಯ ಸರ್ಕಾರವು ಬಿಲ್ಕಿಸ್ ಬಾನೊ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಎಲ್ಲಾ 11 ಮಂದಿ ಅಪರಾಧಿಗಳನ್ನು ಕ್ಷಮಾಪಣೆ ನೀತಿ ಮೇರೆಗೆ ಬಿಡುಗಡೆಗೊಳಿಸಿದ್ದು, ಸರ್ಕಾರದ ಈ ನಿರ್ಧಾರ ಕೆಟ್ಟ ಸಂಪ್ರದಾಯಕ್ಕೆ ನಾಂದಿಯಾಗಲಿದೆ ಎಂದು ಬಾಂಬೆ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಯು ಡಿ ಸಾಲ್ವಿ ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ಗುಜರಾತ್ ರಾಜ್ಯ ಸರ್ಕಾರದ ಕ್ರಮವನ್ನು ಕಠಿಣವಾಗಿ ಖಂಡಿಸಿದ ಅವರು, “ಇಂತಹ ನಿರ್ಧಾರ ಕೈಗೊಳ್ಳುವ ಮೂಲಕ ಕೆಟ್ಟ ಸಂಪ್ರದಾಯಕ್ಕೆ ನಾಂದಿ ಹಾಡಲಾಗಿದೆ. ಇದು ತಪ್ಪು ಎಂಬುದು ನಾನು ಹೇಳುವೆ. ಇದನ್ನು ಮುಂದಿರಿಸಿಕೊಂಡು ಇತರೆ ಸಾಮೂಹಿಕ ಅತ್ಯಾಚಾರ ಪ್ರಕರಣಗಳ ಅಪರಾಧಿಗಳು ಸಹ ಇಂತಹದ್ದೇ ಪರಿಹಾರ ಕೋರಲಿದ್ದಾರೆ” ಎಂದು ತಮ್ಮ ಅಸಮ್ಮತಿ ಸೂಚಿಸಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ಮಹಿಳಾ ಸಬಲೀಕರಣದ ಬಗ್ಗೆ ಮಾತನಾಡಿದ ಸ್ವಾತಂತ್ರ್ಯ ದಿನದಂದೇ, ಅವರ ತವರು ರಾಜ್ಯದಲ್ಲಿಯೇ ಅಸಹಾಯಕ ಹೆಣ್ಣುಮಗಳೊಬ್ಬಳನ್ನು ಸಾಮೂಹಿಕ ಅತ್ಯಾಚಾರಿಗಳನ್ನು ಬಿಡುಗಡೆ ಮಾಡಿರುವುದು ವಿಷಾದನೀಯ ಎಂದಿದ್ದಾರೆ.

ನ್ಯಾಯಮೂರ್ತಿ ಸಾಲ್ವಿ ಅವರು ಬಿಲ್ಕಿಸ್ ಬಾನೊ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ವಿಶೇಷ ನ್ಯಾಯಾಲಯದ ವಿಚಾರಣಾ ನ್ಯಾಯಾಧೀಶರಾಗಿ ಕಾರ್ಯನಿರ್ವಹಿಸಿ 2008ರಲ್ಲಿ ಹನ್ನೊಂದು ಮಂದಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆಯನ್ನು ವಿಧಿಸಿದ್ದರು. ಏಳು ಮಂದಿಯನ್ನು ಆರೋಪ ಮುಕ್ತಗೊಳಿಸಿದ ಅವರು, ಪ್ರಕರಣದಲ್ಲಿ ಹನ್ನೊಂದು ಮಂದಿಗೆ ಶಿಕ್ಷೆ ನೀಡಿರುವುದನ್ನು ಬಾಂಬೆ ಹೈಕೋರ್ಟ್ 2017ರಲ್ಲಿ ಎತ್ತಿ ಹಿಡಿದಿತ್ತು. ಅಲ್ಲದೆ, ನ್ಯಾಯಮೂರ್ತಿ ಸಾಲ್ವಿ ಅವರು ಬಿಡುಗಡೆ ಮಾಡಿದ್ದ ಏಳು ಮಂದಿಗೂ ಹೈಕೋರ್ಟ್ ಶಿಕ್ಷೆ ನೀಡಿತ್ತು.

Donate Janashakthi Media

Leave a Reply

Your email address will not be published. Required fields are marked *