ಆನೇಕಲ್: ಗ್ಯಾಸ್ ಸಿಲಿಂಡರ್ ಸ್ಫೋಟವಾಗಿ ಮನೆ ಛಿದ್ರಗೊಂಡು ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಂಭವಿಸಿದೆ.
ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಕಿತ್ತಗಾನಹಳ್ಳಿ ಎಂಬಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟವಾಗಿ ಇಡೀ ಮನೆ ಛಿದ್ರವಾಗಿರುವ ಘಟನೆ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ.
ಇದನ್ನೂ ಓದಿ : ಗುಬ್ಬಿ | `ಜೈ ಭೀಮ್ʼ ಹಾಡು ಹಾಕಿದ್ದಕ್ಕೆ ವಾಹನ ತಡೆದು ದಲಿತ ಯುವಕರ ಮೇಲೆ ಮಾರಣಾಂತಿಕ ಹಲ್ಲೆ
ಸ್ಪೋಟದ ತೀವ್ರತೆಗೆ ಮನೆಯ ಗೋಡೆಗಳು ನೆಲಕ್ಕೆ ಉರುಳಿದ್ದು ಮನೆಯಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕೇವಲ ಸ್ಪೋಟಗೊಂಡ ಮನೆಯಲ್ಲದೆ, ಅಕ್ಕ ಪಕ್ಕದ ನಿವಾಸಿಗಳ ಮನೆಗೂ ಹಾನಿಯಾಗಿದೆ.
ಅಕ್ಕಪಕ್ಕದಲ್ಲಿ ನಿಲ್ಲಿಸಿದ್ದ ಅನೇಕ ವಾಹನಗಳು ಜಖಂ ಆಗಿದ್ದು ಸ್ಪೋಟದ ತೀವ್ರತೆಗೆ ವಾಟ ಪೈಪ್ ಕಿತ್ತು ಅಪಾರ ಪ್ರಮಾಣದ ನೀರು ಹೊರಬಂದಿದೆ. ಇನ್ನೂ ಗಾಯಾಳುಗಳನ್ನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದುಸೂರ್ಯಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ನೋಡಿ : ದಮನಿತರ ಪರವಾಗಿ ಕೆಂಬಾವುಟ ಮಾತ್ರವೇ ನಿಲ್ಲಲು ಸಾಧ್ಯ- ಎಂ.ಎ.ಬೇಬಿ