ಅಣ್ಣಾಮಲೈ ನಾಯಕತ್ವದಲ್ಲಿ ಮಹಿಳೆಯರು ಸುರಕ್ಷಿತರಲ್ಲ: ಬಿಜೆಪಿ ಪಕ್ಷ ತೊರೆದ ಮಹಿಳಾ ನಾಯಕಿ ಗಾಯತ್ರಿ ರಘುರಾಮ್‌

ಚೆನ್ನೈ: ತಮಿಳುನಾಡು ಬಿಜೆಪಿ ಅಧ್ಯಕ್ಷ ಮಾಜಿ ಪೊಲೀಸ್ ಅಧಿಕಾರಿ ಕೆ. ಅಣ್ಣಾಮಲೈ ವಿರುದ್ಧ ನಟಿ ಗಾಯತ್ರಿ ರಘುರಾಮ್‌ ಗಂಭೀರ ಆರೋಪ ಮಾಡಿದ್ದು, ಶಿಸ್ತಿನ ಪಕ್ಷವಾದ ಬಿಜೆಪಿಯಲ್ಲಿ ಮಹಿಳೆಯರಿಗೆ ಗೌರವ, ಸಮಾನ ಅವಕಾಶಗಳು ಸಿಗುತ್ತಿಲ್ಲ. ಭಾರವಾದ ಹೃದಯದಿಂದ ಪಕ್ಷಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದಿದ್ದಾರೆ.

ನಟಿ ಹಾಗೂ ತಮಿಳುನಾಡು ಬಿಜೆಪಿ ಮಹಿಳಾ ಘಟಕದ ನಾಯಕಿಯಾಗಿದ್ದ ಗಾಯತ್ರಿ ರಘುರಾಮ್ ಅವರು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಅಣ್ಣಾಮಲೈ ನಾಯಕತ್ವದಲ್ಲಿ ಮಹಿಳೆಯರಿಗೆ ಸುರಕ್ಷತೆ ಇಲ್ಲ. ಇದೇ ಕಾರಣಕ್ಕೆ ನಾನು ಪಕ್ಷ ತೊರೆಯಲು ನಿರ್ಧರಿಸಿದ್ದೇನೆ ಎಂದು ಟ್ವೀಟ್‌ ಮಾಡಿದ್ದಾರೆ.

ಇಲ್ಲಿ ಕ್ಲಿಕ್‌ ಮಾಡಿ : ಜನಶಕ್ತಿ ಮೀಡಿಯಾ ವಾಟ್ಸ್‌ಪ್‌ ಗುಂಪು ಸೇರಲು ಈ ಲಿಂಕ್‌ ಕ್ಲಿಕ್‌ ಮಾಡಿ

ಗಾಯತ್ರಿ ರಘುರಾಮ್‌ ಅವರು ಪಕ್ಷದ ಶಿಸ್ತು ಉಲ್ಲಂಘನೆ, ಪಕ್ಷಕ್ಕೆ ಮುಜುಗರ ಉಂಟುಮಾಡುವುದು, ಪಕ್ಷದ ನಿಯಮಗಳನ್ನು ಮೀರುತ್ತಿದ್ದಾರೆ ಎಂಬ ದೂರುಗಳು ಕೇಳಿ ಬಂದಿದ್ದರಿಂದ ಅವರನ್ನು ಪಕ್ಷದಿಂದ 6 ತಿಂಗಳವರೆಗೆ ಅಮಾನತ್ತು ಮಾಡಲಾಗಿತ್ತು.

ಅಣ್ಣಾಮಲೈ ನನ್ನ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿದ್ದಾರೆ, 6 ತಿಂಗಳು ಅಮಾನತು ಮಾಡಿ ಪಕ್ಷದಿಂದ ದೂರವಿರಿಸಿದ್ದಾರೆ ಎಂದು ಬಿಜೆಪಿ ಪಕ್ಷದಿಂದ ಅಮಾನತುಗೊಳಿಸಿದ ನಲವತ್ತು ದಿನಗಳ ನಂತರ, ಗಾಯತ್ರಿ ರಘುರಾಮ್ ಹೇಳಿದ್ದಾರೆ. ಇವರು ಮಹಿಳಾ ಘಟಕದ ಅಧ್ಯಕ್ಷೆ ಮಾತ್ರವಲ್ಲದೇ ಸಾಗರೋತ್ತರ ತಮಿಳು ಅಭಿವೃದ್ಧಿ ವಿಭಾಗದ ಅಧ್ಯಕ್ಷೆಯಾಗಿಯೂ ಕೆಲಸ ಮಾಡಿದ್ದರು.

Donate Janashakthi Media

Leave a Reply

Your email address will not be published. Required fields are marked *