ಮೂರು ರಾಜ್ಯಗಳ ಚುನಾವಣಾ ದಿನಾಂಕ ಘೋಷಣೆ; ಫೆ.16ಕ್ಕೆ ತ್ರಿಪುರಾ, ಫೆ.27ಕ್ಕೆ ನಾಗಾಲ್ಯಾಂಡ್- ಮೇಘಾಲಯದಲ್ಲಿ ಮತದಾನ

ನವದೆಹಲಿ: ತ್ರಿಪುರ, ಮೇಘಾಲಯ ಮತ್ತು ನಾಗಾಲ್ಯಾಂಡ್‌ ರಾಜ್ಯಗಳ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದ್ದು, ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಫೆಬ್ರವರಿ 16ರಂದು ತ್ರಿಪುರಾ ರಾಜ್ಯಕ್ಕೆ ಹಾಗೂ ಫೆಬ್ರವರಿ 27ಕ್ಕೆ ನಾಗಾಲ್ಯಾಂಡ್‌ ಮತ್ತು ಮೇಘಾಲಯ ರಾಜ್ಯಗಳಿಗೆ ಚುನಾವಣೆ ನಡೆಯಲಿದೆ.

ಇಂದು(ಜನವರಿ 19) ವೇಳಾಪಟ್ಟಿಯನ್ನು ಬಿಡುಗಡೆ ಮಾಡಿರುವ ಕೇಂದ್ರ ಚುನಾವಣಾ ಆಯೋಗ ಮಾಡಿದೆ. ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಮಾತನಾಡಿದ ಭಾರತದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಚುನಾವಣಾ ದಿನಾಂಕಗಳನ್ನು ತಿಳಿಸಿದ್ದು, ಮಾರ್ಚ್ 2 ರಂದು ಮೂರು ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ ಎಂದರು.

ನಾಗಾಲ್ಯಾಂಡ್, ಮೇಘಾಲಯ ಮತ್ತು ತ್ರಿಪುರಾದಲ್ಲಿ ಒಟ್ಟು 62.8 ಲಕ್ಷಕ್ಕೂ ಹೆಚ್ಚು ಮತದಾರರಿದ್ದಾರೆ. ಪ್ರತಿ ರಾಜ್ಯದಲ್ಲಿ 60 ವಿಧಾನಸಭೆ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ನಾಗಾಲ್ಯಾಂಡ್-ಮಾರ್ಚ್‌ 12, ಮೇಘಾಲಯ-ಮಾರ್ಚ್‌ 15, ಮತ್ತು ತ್ರಿಪುರಾ- ಮಾರ್ಚ್‌ 22ರಂದು ಕೊನೆಗೊಳ್ಳಲಿದೆ.

ದಿನಾಂಕ ಘೋಷಣೆಗೂ ಮೊದಲು ಚುನಾವಣಾ ಸಿದ್ಧತೆಗಳನ್ನು ಪರಿಶೀಲಿಸಲು ಚುನಾವಣಾ ಆಯೋಗದ ತಂಡವು ರಾಜ್ಯಗಳಿಗೆ ಭೇಟಿ ನೀಡಿತ್ತು ಮತ್ತು ಭದ್ರತಾ ವ್ಯವಸ್ಥೆಗಳ ಪರಿಶೀಲನೆಯ ಜೊತೆಗೆ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಸಭೆಗಳನ್ನು ನಡೆಸಿದ್ದರು.

2023ರಲ್ಲಿ ದೇಶದ 9 ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆಗಳು ನಡೆಯಲಿದೆ. ವಿವಿಧ ರಾಜ್ಯಗಳಲ್ಲಿ ರಾಜಕೀಯ ಪಕ್ಷಗಳು ಈಗಾಗಲೇ ಚುನಾವಣಾ ಸಿದ್ದತೆಯಲ್ಲಿವೆ. 2024ರಲ್ಲಿ ಲೋಕಸಭೆ ಚುನಾವಣೆಗೆ ಪೂರ್ವದಲ್ಲಿ ನಡೆಯುವ ಚುನಾವಣೆಗಳು ಕುತೂಹಲಕ್ಕೆ ಕಾರಣವಾಗಿವೆ.

2023ರಲ್ಲಿ ಕರ್ನಾಟಕ, ಛತ್ತೀಸ್‌ಗಢ, ಮಧ್ಯಪ್ರದೇಶ, ಮಿಜೋರಾಂ, ರಾಜಸ್ಥಾನ ಮತ್ತು ತೆಲಂಗಾಣದಲ್ಲಿಯೂ ಈ ವರ್ಷ ವಿಧಾನಸಭೆ ಚುನಾವಣೆ ನಡೆಯಲಿದೆ.

Donate Janashakthi Media

Leave a Reply

Your email address will not be published. Required fields are marked *