ಬೆಂಗಳೂರು: ಜಯದೇವ ಆಸ್ಪತ್ರೆಯಲ್ಲಿರುವ ಮಾದರಿಯಲ್ಲಿ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲೂ ರಾಜ್ಯದ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ಸಿಗಬೇಕು ಎನ್ನವುದು ಗುರಿ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯನವರು ಹೇಳಿದರು.
ಗುರುವಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ಸ್ ಬಳಿ ನೂತನ 262 ಅಂಬುಲೆನ್ಸ್‍ಗಳ ಲೋಕಾರ್ಪಣೆ ಮಾಡಿದ ಬಳಿಕ ಮಾತನಾಡಿದ ಅವರು ಚಿಕಿತ್ಸೆ ಸಿಗದೇ ಯಾರೂ ಪ್ರಾಣಕಳೆದುಕೊಳ್ಳುವಂತೆ ಆಗಬಾರದ. ಅಪಘಾತ ವೇಳೆ, ಹೆರಿಗೆ ವೇಳೆ ಚಿಕಿತ್ಸೆ, ಹೃದಯಾಘಾತ ಹೀಗೆ ಆದಾಗ ಚಿಕಿತ್ಸೆ ಸಿಗದೇ ಸಾಯಬಾರದು. ಅದಕ್ಕಾಗಿಯೇ 2008 ರಲ್ಲಿ ತುರ್ತು ಆರೋಗ್ಯಸೇವೆ ತರಲಾಯ್ತು. 236 ತಾಲೂಕುಗಳಿದ್ದು, ತಲಾ ನಾಲ್ಕರಂತೆ ಕನಿಷ್ಟ 840 ಅಂಬುಲೆನ್ಸ್ ಇರಬೇಕು. ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಸಿಕ್ಕಿದರೆ ಬಹಳ ಅನುಕೂಲ ಆಗುತ್ತೆ ಎಂದು ಹೇಳಿದರು.
ಹೆಚ್ಚುವರಿ ಅಂಬುಲೆನ್ಸ್ ಖರೀದಿಗೆ ಹಣಕಾಸು ಒದಗಿಸ್ತೇವೆ. ಎಲ್ಲ ಜಿಲ್ಲೆಗಳಲ್ಲಿ ಎಂಆರ್‌ಐ ಸ್ಕ್ಯಾನಿಂಗ್ ಸೌಲಭ್ಯ ಇರಬೇಕಿತ್ತು. ವಿವಿಧ ಸ್ಕ್ಯಾನ್‍ಗಳಿಗೆ ಬಡವರು ವೆಚ್ಚ ಭರಿಸಲು ಆಗಲ್ಲ. ಇಲ್ಲಿಯವರೆಗೆ 25 ಕೋಟಿ ಜನರಿಗೆ ಸಿಎಂ ನಿಧಿಯಡಿ ಪರಿಹಾರ ಕೊಡುವ ಕೆಲಸ ಆಗಿದೆ. ನಾನು ಸಿಎಂ ನಿಧಿಯಡಿ 1/4 ವೆಚ್ಚ ಭರಿಸ್ತೇನೆ. ಜನರಿಗೆ ಖಾಸಗಿ ಆಸ್ಪತ್ರೆಯಲ್ಲಿ ಉತ್ತಮ ಚಿಕಿತ್ಸೆ ಕೊಡುತ್ತಾರೆ ಅನ್ನೋ ಭಾವನೆ ಇದೆ.
ಇದನ್ನೂ ಓದಿ: ಹಾಸನ| ಆಟವಾಡುವ ವೇಳೆ ಮೆಟ್ಟಿಲಿನಿಂದ ಕೆಳಗೆ ಬಿದ್ದ ಮಗು, ಜೀರೋ ಟ್ರಾಫಿಕ್ ಮೂಲಕ ಬೆಂಗಳೂರಿಗೆ ರವಾನೆ
ಜಯದೇವ ಆಸ್ಪತ್ರೆಯಲ್ಲಿ ಉತ್ತಮಸೇವೆ ಸಾಧ್ಯ ಆಗಿರುವಾಗ ಇತರ ಕಡೆಗಳಲ್ಲೂ ಅದೇ ಗುಣಮಟ್ಟದ ಸೇವೆ ಒದಗಿಸಲು ಸಾಧ್ಯವಿದೆ. ರಾಜ್ಯ ಸರ್ಕಾರ ಆ ದಿಕ್ಕಿನಲ್ಲಿ ಶ್ರಮಿಸುತ್ತಿದೆ ಎಂದ ಅವರು, ಉತ್ತರ ಕರ್ನಾಟಕದ ಕಡೆ ಹೆಚ್ಚಿನ ಗಮನ ನೀಡುವಂತೆ ಆರೋಗ್ಯ ಸಚಿವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಸಲಹೆ ನೀಡಿದರು.
ಆರೋಗ್ಯ ಸಚಿವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ತುರ್ತು ಸಂದರ್ಭದಲ್ಲಿ 108 ಆಂಬ್ಯಲೆನ್ಸ್‌ಗಳ ಸೇವೆ ಬಹಳ ಮುಖ್ಯ ಆದರೆ, ಈ ಸೇವೆಯ ಗುಣಮಟ್ಟದಲ್ಲಿ ಕೆಲವು ಸಮಸ್ಯೆಗಳಿವೆ. ಈ ಸೇವೆಗೆ ಹೊಸ ರೂಪ ಕೊಡಬೇಕಿದೆ ಎಂದರು.
ವಿಡಿಯೋ ನೋಡಿ: ದುಡಿಯುವ ಜನರ ಐಕ್ಯ ಹೋರಾಟ ರೂಪಗೊಂಡಿದ್ದು ಹೇಗೆ? – ಎಚ್.ಆರ್. ನವೀನ್ ಕುಮಾರ್ ಜೊತೆ ಮಾತುಕತೆ Janashakthi Media