ನವದೆಹಲಿ : ಕಾಂಗ್ರೆಸ್ ಪಕ್ಷದ ವಿರುದ್ಧ ತೀವ್ರ ಅಸಮಾಧಾನ ಹೊಂದಿದ್ದ ಜಮ್ಮು ಕಾಶ್ಮೀರದ ಹಿರಿಯ ನಾಯಕ ಗುಲಾಂ ನಬಿ ಆಜಾದ್ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವ ಸೇರಿದಂತೆ ಎಲ್ಲಾ ಸ್ಥಾನಗಳಿಗೂ ಸಲ್ಲಿಸಿದ್ದಾರೆ. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ ಎನ್ನಲಾಗಿದೆ.
ಕಾಂಗ್ರೆಸ್ ನಾಯಕತ್ವದ ವಿರುದ್ಧ ಹಿರಿಯ ನಾಯಕ ಗುಲಾಂ ನಬಿ ಆಜಾದ್ ಅಸಮಾಧಾನ ವ್ಯಕ್ತಪಡಿಸಿದ್ದರು. ಅಲ್ಲದೆ ಇತ್ತೀಚೆಗೆ ಕಾಂಗ್ರೆಸ್ ನ ಪ್ರಚಾರ ಸಮಿತಿಯ ಅಧ್ಯಕ್ಷರನ್ನಾಗಿ ಗುಲಾಂ ನಬಿ ಆಜಾದ್ ಅವರನ್ನು ನೇಮಿಸಲಾಗಿತ್ತು. ಆದರೆ ಕೆಲವೇ ಸಮಯದಲ್ಲಿ ಅವರು ಆ ಹುದ್ದೆಗೆ ರಾಜೀನಾಮೆ ನೀಡಿದ್ದರು. ಅವರು ಜಮ್ಮು ಮತ್ತು ಕಾಶ್ಮೀರ ಕಾಂಗ್ರೆಸ್ ರಾಜಕೀಯ ವ್ಯವಹಾರಗಳ ಸಮಿತಿ ಸ್ಥಾನಕ್ಕೂ ರಾಜೀನಾಮೆ ನೀಡಿದ್ದರು. ಪಕ್ಷವನ್ನು ತೊರೆಯುವ ಬೃಹತ್ ನಿರ್ಧಾರ ಮಾಡಿದ್ದಾರೆ.
ಮುಂಬರುವ ಜಮ್ಮು ಕಾಶ್ಮೀರ ವಿಧಾನಸಭೆ ಚುನಾವಣೆ ಸೇರಿದಂತೆ ವಿವಿಧ ರಾಜ್ಯಗಳ ಚುನಾವಣೆಗಳ ಸಿದ್ಧತೆಯಲ್ಲಿ ತೊಡಗಿರುವ ಕಾಂಗ್ರೆಸ್ ಪಕ್ಷಕ್ಕೆ ಇದು ದೊಡ್ಡ ಆಘಾತವಾಗಿದೆ. ಅಂದಾಜು ನಾಲ್ಕು ಪುಟಗಳ ರಾಜೀನಾಮೆ ಪತ್ರದಲ್ಲಿ ರಾಹುಲ್ ಗಾಂಧಿ ವಿರುದ್ಧ ತೀವ್ರ ಅಕ್ರೋಶ ಹೊರಹಾಕಿದ್ದಾರೆ. ರಾಹುಲ್ ಗಾಂಧಿಯವರ ವರ್ತನೆ ಚಿಕ್ಕ ಮಕ್ಕಳಂತೆ ಇದೆ. ಅದಲ್ಲದೆ, ಸ್ವಪಕ್ಷದಲ್ಲಿಯೇ ತಮ್ಮನ್ನು ಮೂಲೆಗುಂಪು ಮಾಡಿರುವ ಭಾವನೆ ತಮಗೆ ವ್ಯಕ್ತವಾಗಿದೆ ಎಂದು ಗುಲಾಂ ನಬಿ ಆಜಾದ್ ತಮ್ಮ ರಾಜೀನಾಮೆ ಪತ್ರದಲ್ಲಿ ಬರೆದಿದ್ದಾರೆ.