ನವರಾತ್ರಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ಹಿಂದಿರುಗುತ್ತಿದ್ದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಗುಜರಾತಿನಲ್ಲಿ ಘಟನೆ

Please follow and like us:
ವಡೋದರಾ: ನವರಾತ್ರಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ಹಿಂದಿರುಗುತ್ತಿದ್ದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಗುಜರಾತಿನ ವಡೋದರಾ ನಗರದ ಹೊರವಲಯದಲ್ಲಿ ನಡೆದಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ನವರಾತ್ರಿಯ ಆಚರಣೆ ವೇಳೆ ಗಾರ್ಬಾ ನೃತ್ಯ ಕಾರ್ಯಕ್ರಮದಲ್ಲಿ ಭಾಗಿಯಾಗಿ ವಾಪಸ್‌ ಆಗುತ್ತಿದ್ದ ವೇಳೆ ಈ ಘಟನೆ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ.

ಇದನ್ನು ಓದಿ : ಕೋಲ್ಕತ್ತಾ| 10 ವರ್ಷದ ಬಾಲಕಿ ಮೇಲೆ ಅತ್ಯಾಚಾರ; ಮೃತ ಶವ ಪತ್ತೆ

‘ನಿನ್ನೆ ತಡರಾತ್ರಿ ನನ್ನ ಬಾಲ್ಯದ ಸ್ನೇಹಿತ ಹಾಗೂ ನಾನು ದ್ವಿಚಕ್ರ ವಾಹನದಲ್ಲಿ ಹಿಂದಿರುಗುತ್ತಿದ್ದೇವು. ಈ ವೇಳೆ ಐವರು ನಮ್ಮನ್ನು ತಡೆದರು. ಸ್ವಲ್ವ ವಾಗ್ವಾದದ ನಂತರ ಇಬ್ಬರು ಹೊರಟು ಹೋದರು. ಆದರೆ ಇನ್ನಿಬ್ಬರು ನನ್ನ ಮೇಲೆ ಅತ್ಯಾಚಾರ ಎಸಗಿದರೆ, ಇನ್ನೋರ್ವ ನನ್ನ ಸ್ನೇಹಿತನ ಮೇಲೆ ಹಲ್ಲೆ ನಡೆಸಿದ್ದಾನೆ’ ಎಂದು ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಭೇಟಿ ನೀಡಿ ಪೊಲೀಸರು ಸಾಕ್ಷ್ಯ ಸಂಗ್ರಹಿಸಿದ್ದಾರೆ. ಹತ್ತಿರದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ, ಆರೋಪಿಗಳ ಪತ್ತೆಗೆ ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇದನ್ನು ನೋಡಿ :  ಸಾವರ್ಕರ್ ಗೋಮಾಂಸ ತಿನ್ನುತ್ತಿದ್ದರು – ಸಚಿವ ದಿನೇಶ್‌ ಗುಂಡೂರಾವ್‌

Please follow and like us:
Donate Janashakthi Media

Leave a Reply

Your email address will not be published. Required fields are marked *