ಉತ್ತರ ಕನ್ನಡ: ದಾಂಡೇಲಿ ನಗರದಲ್ಲಿ ನಡೆದ ಅಘಾತಕಾರಿ ಘಟನೆಯೊಂದರಲ್ಲಿ 14 ಮಂದಿ ಪ್ರೌಢಶಾಲಾ ವಿದ್ಯಾರ್ಥಿನಿಯರು ಸಾಮೂಹಿಕವಾಗಿ ಕೈ ಕೊಯ್ದುಕೊಂಡ ಪ್ರಕರಣ ನಡೆದಿದೆ. ಜನತಾ ವಿದ್ಯಾಲಯದ 9ನೇ ತರಗತಿ ವಿದ್ಯಾರ್ಥಿನಿಯರು ಹೀಗೆ ಸಾಮೂಹಿಕವಾಗಿ ಕೈ ಕೊಯ್ದುಕೊಂಡಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ಇದನ್ನೂ ಓದಿ:ರಾಮನಗರದ ರಾಮದೇವರ ಬೆಟ್ಟದಲ್ಲಿ ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ
ಯಾವ ಕಾರಣಕ್ಕೆ ವಿದ್ಯಾರ್ಥಿನಿಯರು ಈ ರೀತಿ ಮಾಡಿಕೊಂಡಿದ್ದಾರೆ ಎಂಬ ಸಂಗತಿ ಬಹಿರಂಗವಾಗಿಲ್ಲ. ಶುಕ್ರವಾರ ಸೆ-15 ಸಂಜೆ ಈ ಮಾಹಿತಿ ಬಹಿರಂಗವಾದ ಬಳಿಕ ಶನಿವಾರ ಪೊಲೀಸರು ಶಾಲೆಗೆ ಭೇಟಿ ನೀಡಿದ್ದು, ಇಂತಹ ಘಟನೆ ನಡೆದರೂ ಈವರೆಗೆ ಏಕೆ ಪೊಲೀಸರಿಗೆ ಮಾಹಿತಿ ನೀಡಿಲ್ಲ ಎಂದು ಮುಖ್ಯೋಪಾಧ್ಯಾಯರನ್ನು ಪ್ರಶ್ನಿಸಿದ್ದಾರೆ. ಅಲ್ಲದೆ ವಿದ್ಯಾರ್ಥಿನಿಯರ ಕುರಿತು ಗಮನ ನೀಡುವಂತೆ ಸೂಚಿಸಿದ್ದಾರೆ.
ಕೈ ಕೊಯ್ದುಕೊಂಡ ಕುರಿತು ವಿದ್ಯಾರ್ಥಿನಿಯರನ್ನು ಶಿಕ್ಷಕರು ಪ್ರಶ್ನಿಸಿದ ವೇಳೆ ಒಬ್ಬೊಬ್ಬರು ಒಂದೊಂದು ರೀತಿಯಲ್ಲಿ ಉತ್ತರಿಸಿದ್ದಾರೆ ಎನ್ನಲಾಗಿದ್ದು, ನಿಖರ ಮಾಹಿತಿ ಈವರೆಗೂ ತಿಳಿದು ಬಂದಿಲ್ಲ. ಈ ಘಟನೆಯಿಂದ ಪೋಷಕರು ಸಹ ಆತಂಕಗೊಂಡಿದ್ದಾರೆ ಎನ್ನಲಾಗಿದೆ.
ಶಾಲಾ ಆಡಳಿತ ಮಂಡಳಿಯು ದೈಹಿಕವಾಗಿ, ಮಾನಸಿಕವಾಗಿ ಹಿಂಸೆ ನೀಡುತ್ತಿತ್ತುಎಂಬ ಆರೋಪವೂ ಕೇಳಿ ಬರುತ್ತಿದೆ. ವಿದ್ಯಾರ್ಥಿಗಳು ಆಡಳಿತ ಮಂಡಳಿಗೆ ಹೆದರಿ, ಪೋಷಕರಿಗೂ ಹೇಳಲಾಗಿದೆ ತಮಗೆ ತಾವೇ ಶಿಕ್ಷೆ ಕೊಟ್ಟುಕೊಂಡಿದ್ದಾರೆ. ಇನ್ನಷ್ಟು ತನಿಖೆಯಾಗಬೇಕು ಎಂದು ಹೆಸರು ಹೇಳಲಿಚ್ಚಿಸದ ಪೋಷಕರು ಜನಶಕ್ತಿ ಮೀಡಿಯಾಗೆ ತಿಳಿಸಿದ್ದಾರೆ.
ವಿಡಿಯೋ ನೋಡಿ:ಬುದ್ದಿ ಹೇಳಿದ ಉಪನ್ಯಾಸಕನಿಗೆ ಲಾಂಗ್ ತೋರಿಸಿದ ವಿದ್ಯಾರ್ಥಿ!Janashakthi Media