ಜಾಗತಿಕ ಹೂಡಿಕೆದಾರರ ಸಮಾವೇಶ: ಸಚಿವರಿಂದ ಸಿದ್ಧತೆ ಪರಿಶೀಲನೆ

ಫೆ.11ರಿಂದ 14ರವರೆಗೆ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಆಗಿರುವ ಸಿದ್ಧತೆಗಳನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ ಶನಿವಾರ ಕೂಲಂಕಷವಾಗಿ ವೀಕ್ಷಿಸಿದರು.

ಅರಮನೆ ಮೈದಾನಕ್ಕೆ ಭೇಟಿ ನೀಡಿದ ಅವರು, ಸಮಾವೇಶದಲ್ಲಿ ಪ್ರತಿಯೊಂದು ಸೌಕರ್ಯವೂ ಪರಿಪೂರ್ಣವಾಗಿರಬೇಕು. ಆದರಾತಿಥ್ಯಗಳಲ್ಲಿ ಸಣ್ಣ ಲೋಪವೂ ಆಗಬಾರದು.
ಇದರಿಂದ ರಾಜ್ಯದ ವರ್ಚಸ್ಸು ಹೆಚ್ಚಾಗುವಂತೆ ನೋಡಿಕೊಳ್ಳಬೇಕು. ಮುಖ್ಯವಾಗಿ ನಾನಾ ಇಲಾಖೆಗಳ ನಡುವೆ ಒಳ್ಳೆಯ ಸಮನ್ವಯತೆ ಇರಬೇಕು ಎಂದು ಸೂಚಿಸಿದ್ದಾರೆ.

ಪ್ರಮುಖ ಕಾರ್ಯಕ್ರಮ ನಡೆಯುವ ಪ್ರಧಾನ ವೇದಿಕೆ ಹಾಗೂ ವಿವಿಧ ವಸ್ತು ಪ್ರದರ್ಶನ ಪ್ರದೇಶಕ್ಕೂ ಭೇಟಿ ನೀಡಿ ಸಿದ್ಧತೆಗಳನ್ನು ಪರಿಶೀಲಿಸಿದರು.

ಜತೆಯಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತೆ ಗುಂಜನ್ ಕೃಷ್ಣ, ಕೆಐಎಡಿಬಿ ಸಿಇಒ ಡಾ.ಮಹೇಶ್,
ಕರ್ನಾಟಕ ಉದ್ಯೋಗ ಮಿತ್ರದ ವ್ಯವಸ್ಥಾಪ ನಿರ್ದೇಶಕ ದೊಡ್ಡ ಬಸವರಾಜ, ಐಕೆಎಫ್ ಸಿಒಒ ಜಗದೀಶ ಸೇರಿದಂತೆ ಇತರ ಉನ್ನತ ಅಧಿಕಾರಿಗಳು ಇದ್ದರು.

Donate Janashakthi Media

Leave a Reply

Your email address will not be published. Required fields are marked *