ಪರಿಷತ್ ಸದಸ್ಯ ಗೋ.ಮಧುಸೂಧನ್ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಕೋರ್ಟ್ ಆದೇಶ

ಮೈಸೂರು: ಸುಳ್ಳು ಆರೋಪ ಮಾಡಿ‌ ಅಪಪ್ರಚಾರ ಮಾಡಿದ್ದಾರೆ ಎಂಬ ಕಾರಣಕ್ಕೆ, ಬಿಜೆಪಿ ಮುಖಂಡ ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯ ಗೋ.ಮಧುಸೂಧನ್ ವಿರುದ್ಧ ವಿಶ್ರಾಂತ ಕುಲಪತಿ ಪ್ರೊ.ಕೆ.ಎಸ್ ರಂಗಪ್ಪ ಅವರು ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು.

ಈ ಸಂಬಂಧ ವಿಚಾರಣೆ ನಡೆಸಿದ್ದ ಮೈಸೂರಿನ 3ನೇ ಜೆಎಂಎಫ್‌ಸಿ ನ್ಯಾಯಾಲಯ ಮಧುಸೂಧನ್‌ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸುವಂತೆ ಸೂಚಿಸಿದೆ.

ಈ ದಾವೆಯನ್ನು ಪರಿಶೀಲಿಸಿ ವಿಚಾರಣೆ ನಡೆಸಿದ ನ್ಯಾಯಾಲಯ ಐಪಿಸಿ ಸೆಕ್ಷನ್ 499, 500,501, ಅಡಿ ಕ್ರಿಮಿನಲ್ ಕೇಸ್ ದಾಖಲಿಸುವಂತೆ ಆದೇಶ ನೀಡಿದೆ. ಹಾಗೆಯೇ ಸಮನ್ಸ್ ಜಾರಿಗೂ ಅಸ್ತು ಎಂದಿದೆ.

ಈ ಸಂಬಂಧ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಕೆ.ಎಸ್‌.ರಂಗಪ್ಪ ಅವರು, ಗೋ.ಮಧುಸೂದನ್ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲು (PCR.55/2021) ನ್ಯಾಯಾಲಯವು ಆದೇಶಿಸಿದೆ.

ʻ2020ರ ಜನವರಿಯಲ್ಲಿ ಬೆಂಗಳೂರಿನಲ್ಲಿ ಆಯೋಜಿಸಿದ್ದ ಇಂಡಿಯನ್ ಸೈನ್ಸ್ ಕಾಂಗ್ರೆಸ್ ಸಮಾವೇಶದ ಅಧ್ಯಕ್ಷನಾಗಿದ್ದ ವೇಳೆ ದೇಶದ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ನಾನು ವೇದಿಕೆ ಹಂಚಿಕೊಳ್ಳದಂತೆ ಸಂಚು ರೂಪಿಸಿ ನನ್ನ ವಿರುದ್ಧ ಸುಳ್ಳು ಆರೋಪಗಳ ಮೂಲಕ ಗೋ.ಮಧುಸೂದನ್ ಅಪಪ್ರಚಾರ ಮಾಡಿದ್ದರು.

ಈ ಬಗ್ಗೆ ನಾನು ನ್ಯಾಯಾಲದ ಮೊರೆ ಹೋಗಿದ್ದೆ. ಇದೀಗ ನ್ಯಾಯಾಲಯವು ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನ ಪರಿಷತ್ ಮಾಜಿ ಸದಸ್ಯರಾದ ಗೋ.ಮಧುಸೂದನ್ ವಿರುದ್ಧ ಕ್ರಿಮಿನಲ್ ಕೇಸು ದಾಖಲಿಸಲು ಆದೇಶಿಸಿದೆ. ಇದು ಸತ್ಯಕ್ಕೆ ಸಂದ ಜಯವಾಗಿದೆ ಎಂದು ರಂಗಪ್ಪ ತಿಳಿಸಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *