ಬೆಂಗಳೂರು: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಕಾರ್ಯಕರ್ತರು ತೆರಳುವ ಸಂದರ್ಭದಲ್ಲಿ ಗೋದ್ರಾ ಮಾದರಿ ಹತ್ಯಾಕಾಂಡ ನಡೆಯಬಹುದು. ಈ ನಿಟ್ಟಿನಲ್ಲಿ ಸರ್ಕಾರ ರಕ್ಷಣೆ ಕೊಡಬೇಕು ಎಂದು ವಿಧಾನಪರಿಷತ್ ಸದಸ್ಯ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಬಿ.ಕೆ ಹರಿಪ್ರಸಾದ್ ಅವರನ್ನು ಸಿಸಿಬಿ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಗೋದ್ರಾ
ರಾಮಮಂದಿರದ ಪ್ರಾಣ ಪ್ರತಿಷ್ಠಾಪನೆಯ ಸಂದರ್ಭದಲ್ಲಿ ಗೋದ್ರಾ ಮಾದರಿ ಹತ್ಯಾಕಾಂಡ ನಡೆಯಬಾರದು ಎಂದು ಬಿ.ಕೆ ಹರಿಪ್ರಸಾದ್ ನೀಡಿದ್ದ ಹೇಳಿಕೆ ವಿವಾದಕ್ಕೆ ಕಾರಣವಾಗಿತ್ತು. ಬಿಜೆಪಿ ನಾಯಕರು ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಕುಮಾರಕೃಪ ಅತಿಥಿಗೃಹದಲ್ಲಿರುವ ಹರಿಪ್ರಸಾದ್‌ರವನ್ನು ಸಿಸಿಬಿ ಎಸಿಪಿ ಮತ್ತು ಇತರ ಅಧಿಕಾರಿಗಳು ತೀವ್ರ ವಿಚಾರಣೆ ನಡೆಸಿದ್ದಾರೆ. ಈ ಹೇಳಿಕೆ ಕುರಿತು ವಿವರವಾದ ಮಾಹಿತಿಗಳನ್ನು ನೀಡಿ ಎಂದು ಒತ್ತಡ ಹೇರಿದ್ದಾರೆ ಎಂದು ಹರಿಪ್ರಸಾದ್ ಆಪ್ತರೊಬ್ಬರು ಹೇಳಿದ್ದಾರೆ.
ಇದನ್ನೂ ಓದಿ : ʼರಾಮಮಂದಿರ ಉದ್ಘಾಟನೆʼಗೆ ಹೋಗುವವರಿಗೆ ಸರ್ಕಾರ ರಕ್ಷಣೆ ನೀಡಬೇಕು; ಬಿ.ಕೆ ಹರಿಪ್ರಸಾದ್
ಈ ಕುರಿತು ಬಿ.ಕೆ ಹರಿಪ್ರಸಾದ್ ಪ್ರತಿಕ್ರಿಯೆ ನೀಡಿದ್ದು, ವಿಚಾರಣೆಗೆ ಒಳಪಡಿಸುವಂತೆ ನಿರ್ದೇಶನ ನೀಡಿರುವ ಸರ್ಕಾರದ ನಡೆಗೆ ಹರಿಪ್ರಸಾದ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಇದೇನು ಕಾಂಗ್ರೆಸ್ ಸರ್ಕಾರವೇ?, RSS ಸರ್ಕಾರವೇ?.. ನನಗೆ ವಿವಿಐಪಿ ಟ್ರೀಟ್ಮೆಂಟ್ ಬೇಡ, ಬೇಕಿದ್ದರೆ ಅರೆಸ್ಟ್ ಮಾಡಿ ಎಂದು ಕಿಡಿಕಾರಿದ್ದಾರೆ. ನಾನು ಯಾವ ಸರ್ಕಾರದಲ್ಲಿ ಇದ್ದೇನೆ ಎಂದು ಅರ್ಥವಾಗುತ್ತಿಲ್ಲ. ಬೇಕಿದ್ದರೆ ಮಂಪರು ಪರೀಕ್ಷೆ ಮಾಡಿ ಎಂದು ಪೊಲೀಸರಿಗೆ ಹೇಳಿದ್ದೇನೆ. ಸ್ಟೇಷನ್ಗೆ ಕರೆದುಕೊಂಡು ಹೋಗಿ ವಿಚಾರಣೆ ನಡೆಸಲಿ. ನನ್ನ ಜತೆಗೆ ವಿಜಯೇಂದ್ರ ಅವರನ್ನು ಕೂಡ ಮಂಪರು ಪರೀಕ್ಷೆಗೆ ಒಳಪಡಿಸಲಿ. ನನ್ನ ಪರಿಸ್ಥಿತಿಯೇ ಹೀಗಾದರೆ ಕಾಂಗ್ರೆಸ್ ಕಾರ್ಯಕರ್ತರ ಕಥೆ ಏನು? ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿಕೆ ವಿರುದ್ಧ, ಅನಂತ್ ಕುಮಾರ ಹೆಗಡೆ ವಿರುದ್ಧ ಸರ್ಕಾರ ಕ್ರಮ ಕೈಗೊಂಡಿಲ್ಲ. ನಾನು ಇವರ ಬೆದರಿಕೆಗಳಿಗೆಲ್ಲ ಜಗ್ಗಲ್ಲ. ಅಂದು ಕೊಟ್ಟ ಹೇಳಿಕೆಗೆ ನಾನು ಬದ್ಧನಾಗಿದ್ದೇನೆ. ರಾಮ ಮಂದಿರಕ್ಕೆ ಹೋಗುವವರಿಗೆ ಸೂಕ್ತ ರಕ್ಷಣೆ ನೀಡಬೇಕು’ ಎಂದು ಹರಿಪ್ರಸಾದ್ ಹೇಳಿದರು. ಗೋದ್ರಾ
ಈ ವಿಡಿಯೋ ನೋಡಿ : ಮನೆ ಮನೆಗೆ ಬರುತ್ತಿರುವುದು ಮಂತ್ರಾಕ್ಷತೆಯೇ? ಬಿಜೆಪಿ ಪ್ರಣಾಳಿಕೆಯೇ? ಆರೆಸ್ಸೆಸ್ ಸಿದ್ಧಾಂತವೇ? Janashakthi Media