ಬೆಂಗಳೂರು: ಮಾಜಿ ಸಚಿವ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಮನೆ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿ ರಾತ್ರಿಯಿಡೀ ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರಿನ ಡಾಲರ್ಸ್ ಕಾಲೊನಿಯಲ್ಲಿರುವ ವಿನಯ್ ಕುಲಕರ್ಣಿ ನಿವಾಸದ ಮೇಲೆ ದಾಳಿ ಮಾಡಿದ ಇಡಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.
ಚಿನ್ನ ಹಾಗೂ ಕೆಲ ವ್ಯವಹಾರದಲ್ಲಿ ಐಶ್ವರ್ಯಾ ಗೌಡ ಹಾಗೂ ಶಿಲ್ಪಾ ಗೌಡ ಎಂಬುವವರು ವಂಚನೆ ಮಾಡಿದ್ದರು ಎಂಬ ಆರೋಪ ಕೆಲವು ದಿನಗಳ ಹಿಂದೆ ಕೇಳಿ ಬಂದಿತ್ತು. ತನಿಖೆ ವೇಳೆ ಕೋಟ್ಯಾಂತರ ರೂಪಾಯಿ ವ್ಯವಹಾರ ನಡೆಸಿರುವುದು ಪತ್ತೆಯಾಗಿತ್ತು.
ಇದನ್ನು ಓದಿ : ಜೆಎನ್‌ಯುಎಸ್‌ಯು ಚುನಾವಣೆ| ಒಗ್ಗಟ್ಟಿನ ಬಲ ಯಾರಿಗೆ ? ಜೆಎನ್‌ಯು ಚುನಾವಣೆಗೆ ಯಾಕಿಷ್ಟು ಮಹತ್ವ? ಚಿನ್ನ
ಚಿನ್ನ ವಂಚನೆ ಪ್ರಕರಣದಲ್ಲಿ ಕೋಟ್ಯಾಂತರ ರೂಪಾಯಿ ಬೇನಾಮಿ ವ್ಯವಹಾರ ನಡೆಸಿದ್ದಾರೆ ಎಂದು ಪೊಲೀಸರು ಇಡಿಗೆ ಮಾಹಿತಿ ನೀಡಿದ್ದರು. ಪೊಲೀಸರ ಮಾಹಿತಿ ಆಧರಿಸಿ ಇಸಿಐಆರ್ ದಾಖಲಿಸಿಕೊಂಡಿದ್ದ ಇಡಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ ಹಲವರ ಮನೆಯ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದೆ.
ಐಶ್ವರ್ಯಗೌಡ, ಕಾಂಗ್ರೆಸ್ ಮುಖಂಡ ತಿಬ್ಬೇಗೌಡ, ಮಾಜಿ ಸಚಿವ ವಿನಯ್ ಕುಲಕರ್ಣಿ ನಿವಾಸದ ಮೇಲೆ ಇಡಿ ದಾಳಿ ನಡೆದಿದೆ. ಇಡಿ ಅಧಿಕಾರಿಗಳು ಐಶ್ವರ್ಯಗೌಡ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಐಶ್ವರ್ಯಾ ಗೌಡ ಅವರ ಮಂಡ್ಯದ ಕಿರುಗಾವಲು ನಿವಾಸ ಮತ್ತು ಗೊರಗುಂಟೆಪಾಳ್ಯದಲ್ಲಿರುವ ಪ್ಲಾಟ್ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿಯ ಸಂದರ್ಭದಲ್ಲಿ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡು, ಐಶ್ವರ್ಯಗೌಡ ಅವರನ್ನು ವಶಕ್ಕೆ ಪಡೆದಿದ್ದಾರೆ.
ಇದನ್ನೂ ನೋಡಿ : ಪಹಲ್‍ಗಾಂಮ್ ಹತ್ಯಾಕಾಂಡ|ಭರತ್ ಭೂಷಣ್ ಅಂತಿಮ ದರ್ಶನ ಪಡೆದ ಸಿಎಂ Janashakthi Media