ಬೆಂಗಳೂರು: ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ನಟಿ ರನ್ಯಾರಾವ್ ಜಾಮೀನು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಕೆ ಮಾಡಿದ್ದು, ಹೈಕೋರ್ಟ್ ಏಕಸದಸ್ಯ ಪೀಠ ಆರೋಪಿ ರನ್ಯಾರಾವ್ ಹಾಗೂ ಎ2 ಆರೋಪಿ ತರುಣ್ ರಾವ್ ಜಾಮೀನು ಅರ್ಜಿ ವಜಾಗೊಳಿಸಿದೆ. ರನ್ಯಾರಾವ್ ಗೆ ಮುಂದಿನ 1 ವರ್ಷ ಪರಪ್ಪನ ಅಗ್ರಹಾರ ಫಿಕ್ಸ್ ಆಗಿದೆ.
ಸೆಷನ್ಸ್ ಕೋರ್ಟ್ ಜಾಮೀನು ಅರ್ಜಿ ತಿರಸ್ಕರಿಸಿದ ಹಿನ್ನೆಲೆ ರನ್ಯಾರಾವ್ ಪರ ವಕೀಲರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. 64ನೇ ಸೆಷನ್ಸ್ ಕೋರ್ಟ್ ನಟಿ ಬೇಲ್ ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದ ಹಿನ್ನೆಲೆ ಅವರು ಹೈಕೋರ್ಟ್ ಮೊರೆ ಹೋಗಿದ್ದರು.
ಇದನ್ನೂ ಓದಿ: ಪರ್ಯಾಯ ಬೆಳವಣಿಗೆಯ ಮಾದರಿ ಬೇಕಾಗಿದೆ
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆರೋಪಿ ರನ್ಯಾ ರಾವ್ ಅವರನ್ನು ಬಂಧಿಸಲಾಗಿತ್ತು..ರನ್ಯಾ ರಾವ್ ಬಳಿ ಒಟ್ಟು 14.8 ಕೆಜಿ ಚಿನ್ನ ಸಿಕ್ಕಿರುವ ಮಾಹಿತಿ ಇದ್ದು ರಾಜ್ಯದ ಇತಿಹಾಸದಲ್ಲಿ ಅತಿ ದೊಡ್ಡ ಚಿನ್ನದ ಅಕ್ರಮ ಸಾಗಣೆ ಪ್ರಕರಣ ಎನ್ನಲಾಗಿದೆ. ರನ್ಯಾ ರಾವ್ ಡಿಜಿಪಿ ಡಾ. ಕೆ. ರಾಮಚಂದ್ರರಾವ್ ಅವರ ಮಲಮಗಳಾಗಿದ್ದಾರೆ.
ಇದನ್ನೂ ನೋಡಿ: ಚಾಮರಾಜನಗರಕ್ಕೆ ಬರುವುದರಿಂದ ಅಧಿಕಾರ ಮತ್ತಷ್ಟು ಗಟ್ಟಿಯಾಗ್ತಿದೆ – ಸಿಎಂ ಸಿದ್ದರಾಮಯ್ಯ Janashakthi Media