ಬೆಂಗಳೂರು: ರಾಜ್ಯದಲ್ಲಿ ಕ್ರೀಡೆ ಸಂಬಂಧ ಶಿಕ್ಷಣ ನೀಡಲು ರಾಜ್ಯ ಸರ್ಕಾರ 174 ಕೋಚ್ಗಳ ನೇಮಕಕ್ಕೆ ಅನುಮೋದನೆ ನೀಡಿದ್ದು, ವೃಂದ ಮತ್ತು ನೇಮಕಾತಿ ನಿಯಮ ಅಂತಿಮಗೊಳಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ. 1486 ಕ್ರೀಡಾಪಟುಗಳಿಗೆ ಕ್ರೀಡಾ ಪ್ರೋತ್ಸಾಹಧನ ನೀಡಲಾಗಿದೆ. ಕೋಚ್
ಮುಖ್ಯಮಂತ್ರಿ ಸಿದ್ದರಾಮಯ್ಯ ಗೃಹಕಚೇರಿ ಕೃಷ್ಣಾದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ, ಬೆಂಗಳೂರಿನಲ್ಲಿ ಬಾಸ್ಕೆಟ್ ಬಾಲ್ ಹಾಗೂ ಮೈಸೂರಿನಲ್ಲಿ ಸೈಕ್ಲಿಂಗ್ ವೆಲೋಡ್ರೋಂ ಘೋಷಣೆ ಬಗ್ಗೆ ಭೂಮಿ ಗುರುತಿಸಲಾಗುತ್ತಿದೆ.
ಇದನ್ನೂ ಓದಿ: ಸಿಕ್ಕಿಂನ ಭೂಕುಸಿತ-ಪೀಡಿತ ಲಾಚುಂಗ್ನಿಂದ 79 ಪ್ರವಾಸಿಗರ ಸ್ಥಳಾಂತರ
ಕಂಠೀರವ ಕ್ರೀಡಾಂಗಣದಲ್ಲಿ ವಸ್ತುಸಂಗ್ರಹಾಲಯ ನಿರ್ಮಾಣ ಕುರಿತಂತೆ ಯಾವುದೇ ಕ್ರಮ ಆಗದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದು, ಈ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳುವಂತೆ ಆಯುಕ್ತರಿಗೆ ಸೂಚಿಸಿದ್ದಾರೆ. ಕೋಚ್
ಆಯವ್ಯಯದ ಘೋಷಣೆಗಳ ಕುರಿತಂತೆ ಕೂಡಲೇ ಆದೇಶ ಹೊರಡಿಸುವಂತೆ ಸೂಚಿಸಿದರು. ಪ್ರಸಕ್ತ ಆಯವ್ಯಯದ ಘೋಷಣೆಗಳಿಗೆ ಸಂಬಂಧಿಸಿದಂತೆ ಒಂಭತ್ತು ಘೋಷಣೆಗಳ ಪೈಕಿ ಎಂಟು ಘೋಷಣೆಗಳ ಕುರಿತು ಸರ್ಕಾರಿ ಆದೇಶವಾಗಿದ್ದು, ಒಂದು ಆದೇಶ ಮುಖ್ಯಮಂತ್ರಿಯವರ ಅನುಮೋದನೆಗೆ ಕಡತ ಸಲ್ಲಿಸಲಾಗಿದೆ .
ಹೊಸಪೇಟೆ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಹಾಗೂ 120 ತಾಲ್ಲೂಕುಗಳಲ್ಲಿ ತಾಲ್ಲೂಕು ಕ್ರೀಡಾಂಗಣಗಳಿಲ್ಲ. ಕಳೆದ ಐದು ವರ್ಷಗಳಲ್ಲಿ ಶೇ. 95 ರಷ್ಟು ಕಾಮಗಾರಿಗಳನ್ನು ಕೆ.ಆರ್.ಐ.ಡಿ.ಎಲ್. ಮೂಲಕ ಮಾಡುತ್ತಿದ್ದಾರೆ. ಟೆಂಡರ್ ಕರೆಯದೆ ಮಾಡುತ್ತಿದ್ದಾರೆ. ಎರಡು ಕೋಟಿ ಮಿತಿಯಲ್ಲಿ ಕಾಮಗಾರಿಗಳನ್ನು ಸೀಮಿತಗೊಳಿಸಿ, ಅಪೂರ್ಣವಾಗಿರುವಂತಹ ಸ್ಥಿತಿ ಒದಗಿಸದೆ ಎಂದು ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳು ಮಾಹಿತಿ ನೀಡಿದ್ದಾರೆ.
ಇಲಾಖೆಯ ಕಾಮಗಾರಿಗಳ ಯೋಜನೆ ರೂಪಿಸಲು, ಮೇಲ್ವಿಚಾರಣೆಗೆ ಲೋಕೋಪಯೋಗಿ ಇಲಾಖೆಯಿಂದ ಇಬ್ಬರು ಎಂಜಿನಿಯರುಗಳ ಸೇವೆ ಪಡೆಯುವಂತೆ ಸೂಚಿಸಿದರು. ಎಲ್ಲ ಕಾಮಗಾರಿಗಳನ್ನು ಟೆಂಡರ್ ಆಹ್ವಾನಿಸಿಯೇ ಅನುಷ್ಠಾನಗೊಳಿಸುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸಭೆಯಲ್ಲಿ ಸೂಚಿಸಿದ್ದಾರೆ.
ಸಭೆಯಲ್ಲಿ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಕೆ. ಗೋವಿಂದರಾಜು, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ಕಾರ್ಯದರ್ಶಿ ಡಾ. ಕೆ.ವಿ. ತ್ರಿಲೋಕಚಂದ್ರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಎನ್. ಮಂಜುನಾಥ ಪ್ರಸಾದ್, ಆಯುಕ್ತ ಶಶಿಕುಮಾರ್ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
ಇದನ್ನೂ ನೋಡಿ: “ನಾವು ಮಾಡಿದ ದೇವ್ರು ನೀನು, ನಮಗೆ ದೇವ್ರು ಅಂತಿಯೇನೋ” ಸಿದ್ದಯ್ಯ ಸ್ವಾಮಿ ಬನ್ಯೂ Janashakthi Media