ಬೆಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವ ಹೂತು ಹಾಕಿದ ಪ್ರಕರಣ ಅಂತಿಮಘಟ್ಟ ತಲುಪಿದ್ದು, ಮಧ್ಯಂತರ ವರದಿ ಬದಲು ಪೂರ್ಣ ವರದಿಗೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ನಗರದಲ್ಲಿ ಮಾತನಾಡಿ ಸೂಚನೆ ನೀಡಿದ್ದಾರೆ. ಈ ತಿಂಗಳಾಂತ್ಯಕ್ಕೆ ಪೂರ್ಣ ವರದಿ ಸಲ್ಲಿಸಲು ಸರ್ಕಾರ ನಿರ್ದೇಶನ ನೀಡಿದೆ.
ಧರ್ಮಸ್ಥಳ S.I.T ಅಧಿಕಾರಿಗಳಿಗೆ ಪರಮೇಶ್ವರ್ ಸೂಚನೆ ನೀಡಿದ್ದು, ಡಿಸೆಂಬರ್ 8 ರಿಂದ ಬೆಳಗಾವಿಯಲ್ಲಿ ವಿಧಾನಸಭೆ ಅಧಿವೇಶನ ಆರಂಭವಾಗಲಿದೆ. ಈ ಹಿನ್ನೆಲೆ ಅಧಿವೇಶನ ಮೊದಲು ವರದಿ ನೀಡಲು ಸರ್ಕಾರ ಸೂಚನೆ ನೀಡಿದ್ದಾರೆ.
ಧರ್ಮಸ್ಥಳ ಪ್ರಕರಣ ಸಂಬಂಧ ಸರ್ಕಾರಕ್ಕೂ ವಿಶೇಷ ತನಿಖಾ ತಂಡ (ಎಸ್‌ಐಟಿ) ವರದಿ ನೀಡಲಿದೆ. ಬೆಳಗಾವಿ ಅಧಿವೇಶನದಲ್ಲಿ ಅದರಲ್ಲಿನ ಅಂಶಗಳನ್ನು ತಿಳಿಸುತ್ತೇವೆ’ ಎಂದು ಗೃಹ ಸಚಿವ ಜಿ. ಪರಮೇಶ್ವರ್ ತಿಳಿಸಿದ್ದಾರೆ.
ಇದನ್ನೂ ಓದಿ: ನೀರಿನ ಸೋರಿಕೆ ಹಾಗೂ ಅಕ್ರಮ ಬಳಕೆದಾರರ ಮೇಲೆ ಕ್ರಮ: ಡಿಕೆಶಿ
‘ಧರ್ಮಸ್ಥಳ ಪ್ರಕರಣ ಸಂಬಂಧ ಎಸ್‌ಐಟಿ ಅಧಿಕಾರಿಗಳು ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಲಿದ್ದಾರೆ. ಅದರಲ್ಲಿ ಏನಿದೆ, ಸತ್ಯ ಏನು ಎಲ್ಲವೂ ಗೊತ್ತಾಗಲಿದೆ’ ಎಂದರು.
‘ಸರ್ಕಾರವೇ ಎಸ್‌ಐಟಿ ರಚಿಸಿರುವುದಲ್ಲವೇ? ಹೀಗಾಗಿ ಸರ್ಕಾರಕ್ಕೂ ಅವರು ವರದಿ ಕೊಡುತ್ತಾರೆ. ವರದಿ ಬಂದ ಬಳಿಕ ಈ ಪ್ರಕರಣದಲ್ಲಿ ಏನು ಷಡ್ಯಂತ್ರ ನಡೆದಿದೆ, ಯಾರೆಲ್ಲಾ ಕಾರಣ ಎಂಬುದು ಗೊತ್ತಾಗಲಿದೆ’ ಎಂದರು. ಇಂದೇ ಸಲ್ಲಿಕೆಯಾಗಲಿದೆ ಮೊದಲ ಹಂತದ ವರದಿ.
6 ಜನರ ವಿರುದ್ಧ ದೋಷಾರೋಪ ಪಟ್ಟಿ
ಎಸ್‌ಐಟಿ ಮುಖ್ಯ ತನಿಖಾಧಿಕಾರಿ ಜಿತೇಂದ್ರ ಕುಮಾರ್ ದಯಾಮ ಅವರು ಸಿ.ಎನ್.ಚಿನ್ನಯ್ಯ, ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್ ಟಿ.ಜಯಂತ್, ವಿಠ್ಠಲಗೌಡ ಸೇರಿ ಒಟ್ಟು 6 ಜನರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಲಿದ್ದಾರೆ. ಚಾರ್ಜ್ಶೀಟ್‌ನಲ್ಲಿ ತಲೆಬುರುಡೆ ತಂದಿದ್ದ ಸಿ.ಎನ್.ಚಿನ್ನಯ್ಯ, ಅದನ್ನು ತಂದುಕೊಟ್ಟವರ ಬಗ್ಗೆ ಸಂಪೂರ್ಣ ವಿವರ ಉಲ್ಲೇಖ ಮಾಡಲಾಗಿದೆ.
ಧರ್ಮಸ್ಥಳದ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಳ್ತಂಗಡಿ ಕೋರ್ಟ್‌ಗೆ ವರದಿ ಸಲ್ಲಿಸಲಾಗುತ್ತದೆ. ಚಿನ್ನಯ್ಯ ಕೊಟ್ಟ ದೂರಿನ ಆಧಾರದಲ್ಲಿ ತನಿಖೆಯ ವರದಿ ಈಗಾಗ್ಲೆ ಸಿದ್ಧಗೊಂಡಿದೆ. ಬೆಳ್ತಂಗಡಿ ಎಸ್‌ಐಟಿ ಕಛೇರಿಗೆ ಜಿತೇಂದ್ರ ಕುಮಾರ್ ದಯಾಮ ಆಗಮಿಸಿದ್ದು, ಎಸ್ ಐ ಟಿ ತನಿಖಾಧಿಕಾರಿಗಳು ಇಂದು ಬೆಳ್ತಂಗಡಿ ಕೋರ್ಟ್‌ಗೆ ಮೊದಲ ಹಂತದ ತನಿಖಾ ವರದಿ ಸಲ್ಲಿಸಲಿದ್ದಾರೆ.
4,000 ಪುಟಗಳ ದೂರು ವರದಿ
ಅನಾಮಿಕ ವ್ಯಕ್ತಿಯ ಹೇಳಿಕೆ, 17ಕ್ಕೂ ಹೆಚ್ಚು ಜಾಗದಲ್ಲಿ ನಡೆದ ಸಮಾಧಿ ಶೋಧ, ತನಿಖೆ ಸಂದರ್ಭದ ವಿಚಾರಣೆ, ಅನಾಮಿಕ ವ್ಯಕ್ತಿಗೆ ಸಂಬಂಧಿಸಿದಂತೆ ಆತನ ಸಂಪರ್ಕದಲ್ಲಿದ್ದವರ ವಿಚಾರಣೆ ಚಾರ್ಜ್ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ. ಪೂರಕ ಸಾಕ್ಷಿಗಳು ಫೋಟೋ ವಿಡಿಯೋ ಹೇಳಿಕೆಗಳು ದೋಷಾರೋಪಣಾ ಪಟ್ಟಿಯಲ್ಲಿದೆ. ಎಲ್ಲರ ಪ್ರತ್ಯೇಕ ಹೇಳಿಕೆ ದಾಖಲು ಮಾಡಿಕೊಂಡಿರುವ ಎಸ್‌ಐಟಿ ಜೂನ್ 22ರಿಂದ ಎರಡು ತಿಂಗಳುಗಳ ಕಾಲ ನಡೆದ ದೂರು ಪ್ರಕ್ರಿಯೆ, ನಾಲ್ಕು ತಿಂಗಳ ಪೊಲೀಸರ ತನಿಖೆ ಸಂಬಂಧಿಸಿದಂತೆ ಎಲ್ಲಾ ಡಿಟೇಲ್‌ಗಳನ್ನು 4,000 ಪುಟಗಳ ದೂರು ವರದಿ ನೀಡಲಿದೆ ಎಂದು ತಿಳಿದು ಬಂದಿದೆ.
ಇದನ್ನೂ ನೋಡಿ: ಧರ್ಮಸ್ಥಳ ನಿಗೂಢ : ಹೊಸ ಅಪ್ಡೇಟ್ ಏನು? Janashakthi Media
