ಬೇಡಿಕೆಗಳನ್ನು ಈಡೇರಿಸುವಂತೆ ಮಾ.11ರಿಂದ ಸರ್ಕಾರಿ ವೈದ್ಯರ ಅನಿರ್ದಿಷ್ಟಾವಧಿ ಮುಷ್ಕರ

ಬೆಂಗಳೂರು: ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಮತ್ತು ಆರೋಗ್ಯ ಇಲಾಖೆಯ ವಿವಿಧ ವೃಂದಗಳ ಸಂಘಟನೆಗಳು ಒಗ್ಗೂಡಿ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿವೆ.
ಹೋರಾಟದ ಹಂತಗಳು:

​ಫೆಬ್ರವರಿ 13ರಂದು ನಡೆದ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಈ ಕೆಳಗಿನಂತೆ ಪ್ರತಿಭಟಿಸಲು ತೀರ್ಮಾನಿಸಲಾಗಿದೆ:

1. ​ಮಾರ್ಚ್ 11 ರಿಂದ ಮಾರ್ಚ್ 15: ವೈದ್ಯರು ಮತ್ತು ಸಿಬ್ಬಂದಿ ಕಪ್ಪುಪಟ್ಟಿ ಧರಿಸಿ ಕರ್ತವ್ಯ ನಿರ್ವಹಿಸಲಿದ್ದಾರೆ. ಈ ಅವಧಿಯಲ್ಲಿ ಹೊರರೋಗಿ ಸೇವೆ (OPD) ಇರುವುದಿಲ್ಲ, ಕೇವಲ ತುರ್ತು ಸೇವೆಗಳು ಮಾತ್ರ ಲಭ್ಯವಿರುತ್ತವೆ.

ಇದನ್ನೂ ಓದಿ: ಸುಗಂಧ ದ್ರವ್ಯಗಳ ಗೋದಾಮಿನಲ್ಲಿ ಬೆಂಕಿ ಅವಘಡ; ಅಪಾರ ನಷ್ಟ

2. ಮಾರ್ಚ್ 16 ರಿಂದ: ರಾಜ್ಯಾದ್ಯಂತ ಎಲ್ಲಾ ಆರೋಗ್ಯ ಇಲಾಖೆಯ ಅಧಿಕಾರಿಗಳು ಮತ್ತು ನೌಕರರು ಕರ್ತವ್ಯಕ್ಕೆ ಗೈರುಹಾಜರಾಗುವ ಮೂಲಕ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಲಿದ್ದಾರೆ.

​ಪ್ರಮುಖ ಬೇಡಿಕೆಗಳು:

​1. ಆರೋಗ್ಯ ಇಲಾಖೆಯಲ್ಲಿನ ವ್ಯವಸ್ಥಿತ ಲೋಪದೋಷಗಳನ್ನು ಸರಿಪಡಿಸಲು ಸಂಘಟನೆಯು ಹಲವು ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿದೆ:

​2. ಸರ್ಕಾರಿ ಆಸ್ಪತ್ರೆಗಳಿಗೆ ಸರಿಯಾದ ಸಮಯಕ್ಕೆ ಔಷಧಿ ಸರಬರಾಜು ಮಾಡುವುದು.

​3. 1973ರ ವೃಂದ ಮತ್ತು ನೇಮಕಾತಿ ನಿಯಮಗಳಿಗೆ ತಿದ್ದುಪಡಿ ತರುವುದು.

​4. ಕಳೆದ 5 ವರ್ಷಗಳಿಂದ ಬಾಕಿ ಇರುವ ಬಡ್ತಿ (Promotion) ಪ್ರಕ್ರಿಯೆಯನ್ನು ಪೂರ್ಣಗೊಳಿಸುವುದು.

​5. ಖಾಲಿ ಇರುವ ವೈದ್ಯರ ಮತ್ತು ಸಿಬ್ಬಂದಿಗಳ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡುವುದು.

​6. ಗುತ್ತಿಗೆ ಹಾಗೂ ಎನ್.ಹೆಚ್.ಎಂ (NHM) ನೌಕರರಿಗೆ ಸೇವಾ ಭದ್ರತೆ ಮತ್ತು ವೇತನ ಹೆಚ್ಚಳ ಒದಗಿಸುವುದು.

​7. ವರ್ಗಾವಣೆ ಪ್ರಕ್ರಿಯೆಯಲ್ಲಿನ ನ್ಯೂನತೆಗಳನ್ನು ಸರಿಪಡಿಸುವುದು.

“ನಮ್ಮ ನ್ಯಾಯಯುತ ಬೇಡಿಕೆಗಳು ಈಡೇರುವವರೆಗೂ ಹೋರಾಟ ಮುಂದುವರಿಯಲಿದೆ” ಎಂದು ಸಂಘಟನೆಯ ಪದಾಧಿಕಾರಿಗಳು ತಿಳಿಸಿದ್ದಾರೆ. ಈ ಮುಷ್ಕರದಿಂದಾಗಿ ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳ ಸೇವೆಗೆ ಭಾರೀ ವ್ಯತ್ಯಯ ಉಂಟಾಗುವ ಆತಂಕ ಎದುರಾಗಿದೆ.

ಇದನ್ನೂ ನೋಡಿ: “ಭಾರತ ಭಾರತವಾಗಿರಲಿ – ಯಾವ ಧರ್ಮರಾಷ್ಟ್ರವಾಗಿಯೂ ಬೇಡ.” – ಬಿ.ಎಂ.ಹನೀಫ್ Janashakthi Media

Donate Janashakthi Media

Leave a Reply

Your email address will not be published. Required fields are marked *