ಧಾರವಾಡ | ಖಾಲಿ ಹುದ್ದೆ ಭರ್ತಿ ಮಾಡದ ಸರ್ಕಾರ : ಪ್ರತಿಭಟನಾಕಾರರನ್ನೂ ವಶಕ್ಕೆ ಪಡೆದ ಪೋಲಿಸರು

ಧಾರವಾಡ: ಧಾರವಾಡದಲ್ಲಿ ನಡೆಯಬೇಕಿದ್ದ ಹೋರಾಟಕ್ಕೆ ಪೊಲೀಸರು ಬ್ರೇಕ್ ಹಾಕಿದ್ದಾರೆ. ಖಾಲಿ ಇರುವ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡುವಂತೆ ಆಗ್ರಹಿಸಿ ಇಂದು ಪ್ರತಿಭಟನೆಗೆ ,ಮುಂದಾಗಿದ್ದರು ಅದನ್ನೂ ಪೋಲಿಸರು ತಡೆದಿದ್ದಾರೆ. ಕಳೆದ ಬಾರಿ ನಡೆದಿದ್ದ ಉದ್ಯೋಗಾಕಾಂಕ್ಷಿಗಳ ಹೋರಾಟದ ವೇಳೆ ಕೆಲ ಅಹಿತಕರ ಘಟನೆ ನಡೆದಿದ್ದ ಹಿನ್ನೆಲೆಯಲ್ಲಿ ಪೊಲೀಸರು, ಪ್ರತಿಭಟನೆಗೆ ಅನುಮತಿ ನೀಡಿರಲಿಲ್ಲ. ಆದರೂ ಪ್ರತಿಭಟನೆಗೆ ಮುಂದಾದ ಹೋರಾಟಗಾರರನ್ನು ಪೊಲೀಸರು ಬಂಧಿಸಿದ್ದಾರೆ.

ಸರ್ಕಾರದ ವಿರುದ್ಧ ಘೋಷಣೆ ಹಾಕುತ್ತಿರುವ ಯುವಕರನ್ನು ಪೊಲೀಸರು ಸಮಾಧಾನಪಡಿಸಲು ಯತ್ನಿಸಿದರು. ಆದರೂ ಸಮಾಧಾನವಾಗದ ಪ್ರತಿಭಟನಾನಿರತ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದುಕೊಂಡರು. ಈ ವೇಳೆ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ತಳ್ಳಾಟ ನೂಕಾಟ ನಡೆಯಿತು.

ಇದನ್ನೂ ಓದಿ : ಬೆಂಗಳೂರು | ಹಾಸ್ಯ ನಟ ಉಮೇಶ್ ನಿಧನ : ಅಂತಿಮ ದರ್ಶನಕ್ಕೆ | ರವೀಂದ್ರ ಕಲಾಕ್ಷೇತ್ರದಲ್ಲಿ ವ್ಯವಸ್ಥೆ

ಸರ್ಕಾರದ ವಿರುದ್ಧ ಜನಸಾಮಾನ್ಯ ವೇದಿಕೆ ವತಿಯಿಂದ ಈ ಹೋರಾಟವನ್ನು ಹಮ್ಮಿಕೊಳ್ಳಲಾಗಿತ್ತು. ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುತ್ತಿಲ್ಲ. ಇದರಿಂದಾಗಿ ಹಲವಾರು ವರ್ಷಗಳಿಂದ ಕಾದು ಕುಳಿತಿರುವ ಉದ್ಯೋಗಾಕಾಂಕ್ಷಿಗಳಿಗೆ ನಿರಾಶೆಯಾಗಿದೆ.  ಇದಕ್ಕೆ ಅನೇಕ ಸಂಘಟನೆಗಳು ಕೂಡ ಸಾಥ್ ನೀಡಿದ್ದವು. ಆದರೆ ಸೆಪ್ಟಂಬರ್ 25 ರಂದು ನಡೆದಿದ್ದ ಉದ್ಯೋಗಾಕಾಂಕ್ಷಿಗಳ ಹೋರಾಟದ ವೇಳೆ ಕೆಲ ಅಹಿತಕರ ಘಟನೆಗಳು ನಡೆದಿದ್ದ ಹಿನ್ನೆಲೆಯಲ್ಲಿ ಪೊಲೀಸರು ಅನುಮತಿ ನೀಡಿರಲಿಲ್ಲ. ಆದರೂ ನಗರದ ಶ್ರೀನಗರ ವೃತ್ತದ ಬಳಿ ಜಮಾಯಿಸಿದ ಹೋರಾಟಗಾರರು ಪ್ರತಿಭಟನೆಗೆ ಮುಂದಾಗಿದ್ದರು.

ಈ ವೇಳೆ ಸ್ಥಳಕ್ಕಾಗಮಿಸಿದ ಹುಬ್ಬಳ್ಳಿ-ಧಾರವಾಡ ಅವಳಿ ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್, ಪ್ರತಿಭಟನಾಕಾರರ ಮನವೊಲಿಸುವ ಯತ್ನ ಮಾಡಿದರು. ನಾವು ಪರಿಸ್ಥಿತಿ ಅವಲೋಕನ ಮಾಡಿದ್ದೇವೆ. ನಾವು ಕೆಲವು ಪ್ರಶ್ನೆ ಕೇಳಿದ್ದೆವು. ಆದರೆ ಆಯೋಜಕರಿಂದ ಸರಿಯಾದ ಮಾಹಿತಿ ಬರಲಿಲ್ಲ. ಹೀಗಾಗಿ ನಾವು ಅನುಮತಿ ನೀಡಿಲ್ಲ. ನಿಮ್ಮ ಮನವಿಯನ್ನು ನಮಗೆ ಕೊಡಿ, ನಾವು ಡಿಸಿ ಮೂಲಕ ಸರ್ಕಾರಕ್ಕೆ ಆ ಮನವಿಯನ್ನು ಕಳಿಸಿಕೊಡುತ್ತೇವೆ. ಅನುಮತಿ ಇಲ್ಲದೇ ಪ್ರತಿಭಟನೆ, ಮೆರವಣಿಗೆ ಮಾಡೋದು ಬೇಡ ಅಂತಾ ಮನವೊಲಿಸಲು ಯತ್ನಿಸಿದರು.

ಆದರೆ ಆಯುಕ್ತರ ಮಾತಿಗೆ ಹೋರಾಟಗಾರರು ಜಗ್ಗಲಿಲ್ಲ. ಪೊಲೀಸರು ನಮ್ಮ ಹೋರಾಟವನ್ನು ಹತ್ತಿಕ್ಕಲು ಯತ್ನಿಸುತ್ತಿದ್ದಾರೆ. ಸರ್ಕಾರ ಪೊಲೀಸರ ಮೂಲಕ ಈ ಕೆಲಸವನ್ನು ಮಾಡಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಸರ್ಕಾರ ಹಾಗೂ ಪೊಲೀಸರ ವಿರುದ್ಧ ಘೋಷಣೆ ಕೂಗಿದರು.

ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಸಂಘರ್ಷವೂ ನಡೆಯಿತು. ಕೊನೆಗೆ ಪ್ರತಿಭಟನಾ ಮೆರವಣಿಗೆ ಶುರು ಮಾಡಲು ಮುಂದಾದಾಗ ಪೊಲೀಸರು ಸುಮಾರು 50 ಹೋರಾಟಗಾರರನ್ನು ವಶಕ್ಕೆ ಪಡೆದು, ಬಸ್ಸಿಗೆ ಹತ್ತಿಸಿದರು. ಈ ವೇಳೆ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಇದು ಪ್ರಜಾಪ್ರಭುತ್ವ ವಿರೋಧಿ ನಡೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ನೋಡಿ : ಜನಸಾಮಾನ್ಯರ ಬದುಕಿನಲ್ಲಿ ಪರಿವರ್ತನೆ ತಂದ ನಾಟಕಕಾರ ಪಿ.ಬಿ.ಧುತ್ತರಗಿ Janashakthi Media

Donate Janashakthi Media