ಹಾವೇರಿ: ಬರಗಾಲ ಸಮಯದಲ್ಲಿ ನರೇಗಾ ಯೋಜನೆಯಡಿ 150 ದಿನಗಳವರೆಗೆ ಕೆಲಸ ಕೊಡಬೇಕೆನ್ನುವ ನಿಯಮ ಇದ್ದರೂ ಕೇಂದ್ರ ಸರ್ಕಾರ ದುಡಿಮೆಯ ದಿನ ಹೆಚ್ಚಿಸಲು ಅನುಮತಿ ನೀಡುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ನರೇಗಾ ಉದ್ಯೋಗ
ಬುಧವಾರ ಕಾಗಿನೆಲೆ ಹೆಲಿಪ್ಯಾಡ್‌ನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದರ ಅವರು ಕರ್ನಾಟಕದಲ್ಲಿ ಮಾತ್ರ ಅಲ್ಲ, ದೇಶದ 12 ರಾಜ್ಯಗಳಲ್ಲಿ ಬರಗಾಲ ಅವರಿಸಿದೆ. ಇಂತಹ ಸಂದರ್ಭದಲ್ಲಿ ದುಡಿಯುವ ಜನರಿಗೆ ಹೆಚ್ಚಿನ ದುಡಿಯುವ ಅವಕಾಶಗಳನ್ನು ನೀಡಬೇಕಾಗಿದೆ. ನರೇಗಾ ಯೋಜನೆಯಡಿ ಈಗ ನೀಡಲಾಗುತ್ತಿರುವ 100 ದಿನಗಳ ಉದ್ಯೋಗವನ್ನು 150 ದಿನಗಳಿಗೆ ಹೆಚ್ಚಿಸಲು ರಾಜ್ಯ ಸರ್ಕಾರ ಸಿದ್ದವಿದೆ. ಆದರೆ, ಇದುವರೆಗೆ ಕೇಂದ್ರ ಸರ್ಕಾರ ಅನುಮತಿ ನೀಡಿಲ್ಲ ಎಂದು ಹೇಳಿದರು. ನರೇಗಾ ಉದ್ಯೋಗ
ಇದನ್ನೂ ಓದಿ: ಉತ್ತರಾಖಂಡದ ಸುರಂಗದಲ್ಲಿ ಸಿಲುಕಿದ್ದ 41 ಕಾರ್ಮಿಕರ ರಕ್ಷಣೆ| ಕಾರ್ಯಚರಣೆ ಯಶಸ್ವಿ
ಬರ ಪರಿಹಾರ ಕಾಮಗಾರಿಗಳನ್ನು ರಾಜ್ಯ ಸರ್ಕಾರ ಕೈಗೊಳ್ಳುತ್ತಿದೆ. ಆದರೆ, ಕೇಂದ್ರ ಸರ್ಕಾರ ತನ್ನ ಪಾಲಿನ ಅನುದಾನವನ್ನು ಬಿಡುಗಡೆ ಮಾಡಿಲ್ಲ. ಇದುವರೆಗೆ ಒಂದು ಪೈಸೆಯೂ ಕೊಟ್ಟಿಲ್ಲ ರಾಜ್ಯ ಕೊಟ್ಟಿರುವ ತೆರಿಗೆ ಹಣವನ್ನು ವಾಪಸ್ ನಮಗೆ ಕೊಡುತ್ತಿಲ್ಲ ಎಂದು ಹೇಳಿದರು.
ರಾಜ್ಯದಲ್ಲಿ ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಕೊರತೆಯಾಗದಂತೆ ನೋಡಿಕೊಳ್ಳಲು ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದೇನೆ. ನಿರಂತರ ಸಭೆ ನಡೆಸಿ, ಕಾಮಗಾರಿಗಳ ಮೇಲ್ವಿಚಾರಣೆ ನಡೆಸುವಂತೆ ಎಲ್ಲ ಜಿಲ್ಲೆಗಳ ಉಸ್ತುವಾರಿ ಸಚಿವರಿಗೂ ತಿಳಿಸಿದ್ದೇನೆ ಎಂದು ಹೇಳಿದರು.
ವಿಡಿಯೋ ನೋಡಿ: ನೇಜಾರು ಹತ್ಯೆ ಪ್ರಕರಣ :ಕೊಲೆಗಾರನ ಹಿನ್ನೆಲೆ ತನಿಖೆಯಾಗಲಿ, ಕೋಮುವಾದದ ವಾಸನೆಯೂ ಬಡಿಯುತ್ತಿದೆ Nejaru murder case