ಬಳ್ಳಾರಿ: ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಅವರಿಂದಲೇ 884 ಕೋಟಿ ನಷ್ಟ ವಸೂಲಿ ಮಾಡುವಂತೆ ಟಪಾಲ್ ಗಣೇಶ್ ಪತ್ರ ಬರೆದಿದ್ದು, ಸರ್ಕಾರ ವರದಿ ತರಿಸಿಕೊಳ್ಳಲು ಮುಂದಾಗಿದೆ ಎಂದು ತಿಳಿದುಬಂದಿದೆ.
ಸಿಬಿಐ ವಿಶೇಷ ನ್ಯಾಯಾಲಯದಲ್ಕಿ ಜನಾರ್ದನ ರೆಡ್ಡಿ ಅಕ್ರಮ ಗಣಿಗಾರಿಕೆ ನಡೆಸಿರೋದು ಸಾಬೀತಾಗಿದ್ದು, ಅಕ್ರಮವಾಗಿ 29 ಲಕ್ಷ ಮೆಟ್ರಿಕ್ ಟನ್ ಕಬ್ಬಿಣದ ಅದಿರು ಸಾಗಾಟದ ಮೂಲಕ ಸರ್ಕಾರದ ಬೊಕ್ಕಸಕ್ಕೆ 884 ಕೋಟಿ ನಷ್ಟ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಆ ಹಣವನ್ನು ಅವರಿಂದಲೇ ವಸೂಲಿ ಮಾಡುವಂತೆ ಟಪಾಲ್ ಗಣೇಶ್ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.
ಇದನ್ನೂ ಓದಿ: ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT
ಈ ಪತ್ರದ ಹಿನ್ನೆಲೆಯಲ್ಲಿ ಸರ್ಕಾರ ವರದಿ ತರಿಸಿಕೊಳ್ಳಲು ಮುಂದಾಗಿದೆ. ಸಂಡೂರು ಕ್ಲಸ್ಟರ್‌ನಲ್ಲಿ ರೆಡ್ಡಿ ನಡೆಸಿರುವ ಗಣಿಗಾರಿಕೆ ಕುರಿತು ವರದಿ ನೀಡಲು ಅರಣ್ಯ, ಜೀವಿ ಪರಿಸ್ಥಿತಿ ಮತ್ತು ಪರಿಸರ ಇಲಾಖೆಯ ಅಧೀನ ಕಾರ್ಯದರ್ಶಿ, ಬಳ್ಳಾರಿ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಈ ಮೂಲಕ ಗಾಲಿ ಜನಾರ್ಧನ ರೆಡ್ಡಿಗೆ ಮತ್ತೆ ಗಣಿ ಸಂಕಷ್ಟ ಎದುರಾಗಿದೆ.
ಇದನ್ನೂ ನೋಡಿ: “ಯು.ಎಸ್. ಸಾಮ್ರಾಜ್ಯಶಾಹಿ: ಓದುಗರ ಅಲೆ ಎಬ್ಬಿಸಿದ ಪುಸ್ತಕ” Janashakthi Media
