ಕಲಬುರಗಿ: ಬಿಸಿಲಿನ ತಾಪ ಹೆಚ್ಚುತ್ತಿರುವ ಹಿನ್ನೆಲೆ ಕಲಬುರಗಿ ವಿಭಾಗದ 7 ಜಿಲ್ಲೆ ಮತ್ತು ಬೆಳಗಾವಿ ವಿಭಾಗದ ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಯಲ್ಲಿ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಸರಕಾರಿ ಕಚೇರಿ ಸಮಯವನ್ನು ಬೆಳಿಗ್ಗೆ 8 ರಿಂದ ಮಧ್ಯಾಹ್ನ 1.30ರ ವರೆಗೆ ಬದಲಾಯಿಸಿ ಸರ್ಕಾರ ಆದೇಶ ಹೊರಡಿಸಿದೆ.
ಇದನ್ನು ಓದಿ :-ವಿಟ್ಲ ದಲಿತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ: ಏಪ್ರೀಲ್ 3ರಂದು ಪ್ರತಿಭಟನೆ
ಸರ್ಕಾರದ ಅಧೀನ ಕಾರ್ಯದರ್ಶಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ, (ಆಡಳಿತ ಸುಧಾರಣೆ-ಸ್ಟೀಮರ-ತಪಾಸಣೆ) ಆಗಿರುವ ವಿಶಾಲಾಕ್ಷಿ ಬಿ. ಅವರು ಆದೇಶ ಹೊರಡಿಸಿದ್ದು, ಕಲಬುರಗಿ ವಿಭಾಗದ ಕಲಬುರಗಿ, ಬೀದರ್, ಯಾದಗಿರಿ, ರಾಯಚೂರು, ಕೊಪ್ಪಳ, ವಿಜಯನಗರ ಮತ್ತು ಬಳ್ಳಾರಿ ಸೇರಿದಂತೆ ಬೆಳಗಾವಿ ವಿಭಾಗದ ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಿಗೆ ಅನ್ವಯವಾಗುವಂತೆ ತಿಳಿಸಲಾಗಿದೆ.
ಇದನ್ನು ಓದಿ :-ಸಿದ್ದಾಪುರ| ಆರೋಗ್ಯ ಕೇಂದ್ರಕ್ಕೆ ಖಾಯಂ ವೈದ್ಯರ ನೇಮಕಕ್ಕೆ ಆಗ್ರಹಿಸಿ ಸಿಪಿಎಂ ಮನವಿ
ಈ ಜಿಲ್ಲೆಗಳಲ್ಲಿನ ಸರ್ಕಾರಿ ನೌಕರರು ಬದಲಾದ ಸಮಯದಲ್ಲಿ ತಮ್ಮ ಕರ್ತವ್ಯವನ್ನು ಎಂದಿನಂತೆ ಯಾವುದೇ ಲೋಪ/ಅಡೆತಡೆಯಿಲ್ಲದೆ ಕರ್ತವ್ಯ ನಿರ್ವಹಿಸತಕ್ಕದ್ದು. ಸಾರ್ವಜನಿಕರಿಗೆ ಯಾವುದೇ ರೀತಿ ಅನಾನುಕೂಲತೆಯಾಗದಂತೆ ಮತ್ತು ಜಿಲ್ಲಾಧಿಕಾರಿಗಳು/ ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ತುರ್ತು ಸಂದರ್ಭದಲ್ಲಿ ಯಾವುದೇ ಕಾರ್ಯವನ್ನು ನಿರ್ವಹಿಸಲು ನಿರ್ದೇಶಿಸಿದಲ್ಲಿ ಸಮಯದ ಪರಿಮಿತಿಯಿಲ್ಲದೆ ಕರ್ತವ್ಯ ನಿರ್ವಹಿಸತಕ್ಕದ್ದು ಎಂದು ಆದೇಶದಲ್ಲಿ ತಿಳಿಸಿದ್ದಾರೆ.