ಬೆಂಗಳೂರು: ನಿಗದಿತ ವೇಳೆಯಲ್ಲಿ ಕಚೇರಿಗೆ ಹಾಜರಾಗುವ ಕಚೇರಿ ಸಮಯದಲ್ಲಿ ಅನವಶ್ಯಕವಾಗಿ ಹೊರಗೆ ಓಡಾಡುವ ಸಿಬ್ಬಂದಿಗಳ ವಿರುದ್ದ ಕಠಿಣ ಕ್ರಮಕ್ಕೆ ರಾಜ್ಯ ಸರ್ಕಾರ ಮುಂದಾಗಿದ್ದು, ನಿಗದಿತ ವೇಳೆಯಲ್ಲಿ ಕಚೇರಿಗೆ ಹಾಜರಾಗಿ ಅಂತ ಕಂದಾಯ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಟಾರಿಯಾ ಅವರು ಆದೇಶ ಹೊರಡಿಸಿದ್ದಾರೆ. ಸರ್ಕಾರ
ಇದನ್ನೂ ಓದಿ:ಸಾರ್ವಜನಿಕ ಶಿಕ್ಷಣ ಇಲಾಖೆ ಇನ್ಮುಂದೆ ಶಾಲಾ ಇಲಾಖೆ : ಸರ್ಕಾರ ಆದೇಶ
ಸೆ-16 ರಂದು ಹೊರಡಿಸಿರುವ ಆದೇಶದಲ್ಲಿ ಅವರು ಉಲ್ಲೇಖ ಮಾಡಿರುವಂತೆ ನಿಗಧಿತ ವೇಳೆಯಲ್ಲಿ ಕಚೇರಿಗೆ ಹಾಜರಾಗುವ ಬಗ್ಗೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಕಂದಾಯ ಇಲಾಖೆಯಲ್ಲಿ ಹಲವಾರು ಬಾರಿ ಕಂದಾಯ ಇಲಾಖೆಯ ಅಧೀನ ಶಾಖೆಗಳಿಗೆ ನಾನು ಖುದ್ದಾಗಿ ಪೂರ್ವಾಹ್ನ 10.45 ಗಂಟೆಗೆ ತಪಾಸಣೆಗೆಂದು ಭೇಟಿ ನೀಡಿದಾಗಲೆಲ್ಲ ಆಫೀಸ್ ನಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಕರ್ತವ್ಯಕ್ಕೆ ಇನ್ನೂ ಹಾಜರಾಗದೆ ಇರುವುದು, ಅಲ್ಲದೇ ಸಾಯಂಕಾಲ ಕಚೇರಿ ತುರ್ತು ಕೆಲಸ ನಿರ್ವಹಣೆಗಾಗಿ ಸಿಬ್ಬಂದಿಗಳನ್ನು ಕರದಾಗಲೂ ಕಚೇರಿಯಿಂದ ಅತೀ ಬೇಗ ನಿರ್ಗಮಿಸಿರುವುದು ಕಂಡು ಬಂದಿರುತ್ತದೆ.
ಇದರಿಂದಾಗಿ ಕಚೇರಿ ಕೆಲಸಕ್ಕೆ ಅಡಚಣೆಯುಂಟಾಗುತ್ತಿರುತ್ತದೆ.ಅಲ್ಲದೇ, ಕಚೇರಿ ವೇಳೆಯಲ್ಲಿ ಸಾರ್ವಜನಿಕರು ಟಪಾಲು/ಕಡತ ಚಲನವಲನ ವಿಚಾರಣೆಗಾಗಿ ಬಂದಾಗ ವಿನಾಕಾರಣ ಅವರೊಂದಿಗೆ ಕಾಲಹರಣ ಮಾಡುತ್ತಿರುವುದು, ಗಂಟೆಗಟ್ಟಲೆ ಟೀ/ಕಾಫಿ/ಉಪಹಾರಕ್ಕೆಂದು ಕಚೇರಿ ಬಿಟ್ಟು ಹೋಗುವುದು, ಸಂತೆ ಬೀದಿಗಳಲ್ಲಿ ಓಡಾಡುತ್ತಿರುವುದು ಮುಂತಾದವುಗಳು ನನ್ನ ಗಮನಕ್ಕೆ ಬಂದಿದ್ದು, ಇನ್ನು ಮುಂದೆ ಈ ರೀತಿ ಪುನರಾವರ್ತನೆಯಾದಲ್ಲಿ ಅಂತಹ ನೌಕರರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು.
ಮುಂದುವರಿದು, ಕಂದಾಯ ಇಲಾಖೆಯ ಎಲ್ಲಾ ನೌಕಕರು ಪ್ರತಿ ದಿನ ಕಚೇರಿಗೆ ಪೂರ್ವಾಹ್ನ 10.30 ರೊಳಗಾಗಿ ಕಡ್ಡಾಯವಾಗಿ ಹಾಜರಿರುವುದು ಹಾಗೂ ಸಾಯಂಕಾಲ ಕಚೇರಿಯಿಂದ ತೆರಳುವಾಗ ತಮ್ಮ ಶಾಖೆಯ ಸಂಬಂಧಪಟ್ಟ ಜಂಟಿ/ಉಪ ಕಾರ್ಯದರ್ಶಿಯವರ ಅನುಮತಿ ಪಡೆದ ಕಚೇರಿಯಿಂದ ತೆರಳುವುದು. ಮೇಲ್ಕಂಡ ಸೂಚನೆಗಳನ್ನು ಕಂದಾಯ ಇಲಾಖೆಯ ಎಲ್ಲಾ ನೌಕರರು ಕಟ್ಟುನಿಟ್ಟಾಗಿ ಪಾಲಿಸುವುದು, ಇಲ್ಲವಾದಲ್ಲಿ ಅವರ ಮೇಲೆ ಸೂಕ್ತ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುವುದು ಅಂತ ತಿಳಿಸಿದೆ.
ವಿಡಿಯೋ ನೋಡಿ:ಖಾಲಿ ಹುದ್ದೆಗಳಿಗೆ ನಿವೃತ್ತಿ ಹೊಂದಿದವರೇ ಮರು ನೇಮಕವಾದರೆ ಯುವಕರ ಗತಿ ಏನು? ಎಂ.ಎನ್ ವೇಣುಗೋಪಾಲ್ ಜೊತೆ ಮಾತುಕತೆ