ಸರ್ಕಾರಿ ಶಾಲಾ ಕಾಲೇಜುಗಳನ್ನು ವಿಲೀನಗೊಳಿಸಲು ಮುಂದಾಗಿರುವ ಸರ್ಕಾರದ ಕ್ರಮ ಖಂಡಿಸಿ ಎಸ್ಎಫ್ಐ ಮನವಿ

ರಾಣೇಬೆನ್ನೂರ : 700 ಪಂಚಾಯತಿಗಳ ಮಟ್ಟದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ ಉನ್ನತೀಕರಿಸಿ ಸುತ್ತಮುತ್ತಲಿನ ಸರ್ಕಾರಿ ಶಾಲೆ / ಪದವಿ ಪೂರ್ವ ಕಾಲೇಜುಗಳನ್ನು ವಿಲೀನಗೊಳಿಸಲು ಮುಂದಾಗಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಸರ್ಕಾರಿ ಶಾಲೆಗಳ ಉಳಿವಿಗಾಗಿ ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ರಾಣೇಬೆನ್ನೂರ ತಾಲ್ಲೂಕು ಸಮಿತಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಕ್ಷೇತ್ರ ಶಿಕ್ಷಣಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಸಿದ್ಧಾರಾಮಯ್ಯ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಇದನ್ನೂ ಓದಿ : ಹಾಸ್ಟೆಲ್ ಮುಂದೆ ಬಸ್ ನಿಲ್ಲಿಸದ ಸಾರಿಗೆ ಸಿಬ್ಬಂದಿಗಳ ಮೇಲೆ ಕ್ರಮಜರುಗಿಸಿ: ವಿದ್ಯಾರ್ಥಿನಿಯರ ಆಗ್ರಹ

ರಾಜ್ಯದಲ್ಲಿ ಪ್ರಸ್ತುತ ಸುಮಾರು 47,493 ಸರ್ಕಾರಿ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿವೆ. ಇವುಗಳಲ್ಲಿ 19,603 ಪ್ರಾಥಮಿಕ ಶಾಲೆಗಳು, 21,676 ಹಿರಿಯ ಪ್ರಾಥಮಿಕ ಶಾಲೆಗಳು, 4,895 ಪ್ರೌಢಶಾಲೆಗಳು ಮತ್ತು 1,319 ಪದವಿಪೂರ್ವ ಕಾಲೇಜುಗಳಿರುತ್ತವೆ. ಹಾಗೂ 309 ಕರ್ನಾಟಕ ಪಬ್ಲಿಕ್ ಶಾಲೆಗಳಿವೆ.

ಈ ಸಂದರ್ಭದಲ್ಲಿ ಎಸ್ಎಫ್ಐ ಜಿಲ್ಲಾ ಮುಖಂಡ ಅರುಣ್ ನಾಗವತ್ ಮಾತನಾಡಿ, ಖಾಸಗಿ ಶಾಲಾ ಕಾಲೇಜುಗಳಿಗೆ ಕಡಿವಾಣ ಹಾಕುವ ಬದಲಾಗಿ ಸರ್ಕಾರಿ ಶಾಲೆಗಳನ್ನು ವಿಲೀನದ ಹೆಸರಿನಲ್ಲಿ ಬಂದ್ ಮಾಡಲು ಮುಂದಾಗುತ್ತಿರುವುದು ನಾಚಿಕೆಗೆಡಿನ ಸಂಗತಿ. ರಾಜ್ಯ ಸರ್ಕಾರಕ್ಕೆ ತಕತ್ತು ಇದ್ದರೆ ಸರ್ಕಾರಿ ಶಾಲೆಯ ಹತ್ತು ಕಿಲೋಮೀಟರ್ ವ್ಯಾಪ್ತಿಯಲ್ಲಿರುವ ಖಾಸಗಿ ಶಾಲಾ ಕಾಲೇಜುಗಳನ್ನು ಬಂದ್ ಮಾಡಲಿ ಎಂದು ಆಗ್ರಹಿಸಿದರು.

KPS ಶಾಲೆಯಿಂದ ವಿಲೀನವಾಗುತ್ತಿರುವ ಶಾಲೆಗಳು ಸುಮಾರು 2 ರಿಂದ 6 ಕಿ ಮಿ ದೂರದಲ್ಲಿದೆ. ರಾಜ್ಯದಲ್ಲಿ ವರ್ಷದಿಂದ ವರ್ಷಕ್ಕೆ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಪ್ರಮಾಣ ಕಡಿಮೆಯಾಗುತ್ತಿದೆ ಎಂದು ಸರ್ಕಾರ ಒಪ್ಪಿಕೊಂಡಿದೆ. ಹಾಗೂ ದಾಖಲಾತಿ ನೆಪಹೇಳಿ ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಿದೆ. ಸರ್ಕಾರಿ ಶಾಲೆಯಲ್ಲಿ ದಾಖಲಾತಿ ಯಾಕೆ ಕಡಿಮೆಯಾಗುತ್ತಿದೆ ಎಂದು ಅಧ್ಯಯನ ಮಾಡದೇ ಸರ್ಕಾರಿ ಶಾಲೆಗಳಿಗೆ ಮೂಲಭೂತ ಸೌಕರ್ಯ, ಶಿಕ್ಷಕರ ನೇಮಕಾತಿ, ಸರಿಯಾದ ಸಮಯಕ್ಕೆ ಪಠ್ಯ ಪುಸ್ತಕ ನೀಡದೆ ಹಾಗೂ ಸೈಕಲ್ ಯೋಜನೆ ನಿಲ್ಲಿಸಿರುವುದು ಹೀಗೆ ಯಾವುದೇ ಸೌಲಭ್ಯ ನೀಡದೆ ಸರ್ಕಾರ ಖಾಸಗಿಯವರ ಲಾಬಿಗೆ ಇಂದು ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ನಾಶಮಾಡಲು ಸರ್ಕಾರ ಮುಂದಾಗಿರುವುದುದನ್ನು ಭಾರತ ವಿದ್ಯಾರ್ಥಿ ಫೆಡರೇಷನ್ ಖಂಡಿಸುತ್ತದೆ.

700 ಪಂಚಾಯತಿಗಳ ಮಟ್ಟದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ ಉನ್ನತೀಕರಿಸಿ ಸುತ್ತಮುತ್ತಲಿನ ಸರ್ಕಾರಿ ಶಾಲೆ / ಪದವಿ ಪೂರ್ವ ಕಾಲೇಜುಗಳನ್ನು ವಿಲೀನಗೊಳಿಸಲು ಮುಂದಾಗಿರುವ ಸರ್ಕಾರದ ಕ್ರಮವನ್ನು ಭಾರತ ವಿದ್ಯಾರ್ಥಿ ಫೆಡರೇಷನ್ ಬಲವಾಗಿ ವಿರೋಧಿಸುತ್ತದೆ. ವಿಲೀನದ ಹೆಸರಿನಲ್ಲಿ ಹಳ್ಳಿಗಳ ಸರ್ಕಾರಿ ಶಾಲೆಗಳನ್ನು ಮುಚ್ಚಬಾರದು ಎಂದು ಭಾರತ ವಿದ್ಯಾರ್ಥಿ ಫೆಡರೇಷನ್ ಒತ್ತಾಯ ಮಾಡುತ್ತದೆ. ಹಾಗೂ ರಾಜ್ಯದಲ್ಲಿರುವ ಸರ್ಕಾರಿ ಶಾಲೆಗಳಿಗೆ ಮೂಲಭೂತ ಸೌಕರ್ಯ ಒದಗಿಸಬೇಕು ಹಾಗೂ ಖಾಲಿ ಇರುವ 59,000 ಶಿಕ್ಷಕರ ನೇಮಕಾತಿ ಮಾಡಿಕೊಳ್ಳಬೇಕು ಎಂದು ಎಸ್ಎಫ್ಐ ಆಗ್ರಹ ಮಾಡುತ್ತಿದೆ.

ಈ ಸಂದರ್ಭದಲ್ಲಿ ಎಸ್ಎಫ್ಐ ಮಾಜಿ ಅಧ್ಯಕ್ಷ ಶ್ರೀಧರ ಸಿ, ಮುಖಂಡರಾದ ಪ್ರದೀಪ್ ಲಮಾಣಿ, ನಯನ ಕೆ, ಈಶ್ವರ ದೊಡ್ಡಮನಿ, ನಾರಾಯಣ ಎಸ್ ಕೆ, ಪವನ್ ಎಸ್ ಕೆ, ಕಲ್ಯಾಣಿ ಎಮ್, ಬಸವರಾಜ ಡಿ ಆರ್, ಗಗನ ಎನ್ ಕೆ, ಮಲ್ಲಿಕಾರ್ಜುನ ಸೇರಿದಂತೆ ಅನೇಕ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಇದನ್ನೂ ನೋಡಿ : ಸಂಪತ್ತಿಗೆ ಸವಾಲ್ ನಾಟಕ ‘ಸಿನಿಮಾ’ ಆಗಿದ್ದು ಹೇಗೆ?Janashakthi Media

Donate Janashakthi Media

Leave a Reply

Your email address will not be published. Required fields are marked *