ಬೆಂಗಳೂರು: ಇರಾನ್ ಮತ್ತು ಇಸ್ರೇಲ್ ನಡುವಿನ ಭೀಕರ ಯುದ್ಧದಿಂದಾಗಿ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗಾಗಿ ರಾಜ್ಯ ಸರ್ಕಾರವು ಸಮರೋಪಾದಿಯಲ್ಲಿ ಕ್ರಮಗಳನ್ನು ಕೈಗೊಂಡಿದೆ ಎಂದು ವಿಧಾನಸೌಧದಲ್ಲಿ ಮಾರ್ಚ್ 2ರಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕಂದಾಯ ಸಚಿವ ಕೃಷ್ಣ ಭೈರೇಗೌಡ ತಿಳಿಸಿದ್ದಾರೆ.
ಅವರು, ‘ಯುದ್ಧ ಪೀಡಿತ ಪ್ರದೇಶದಲ್ಲಿರುವ ಕನ್ನಡಿಗರು ಅಥವಾ ಅವರ ಕುಟುಂಬದವರು ಯಾವುದೇ ಕಾರಣಕ್ಕೂ ಆತಂಕಪಡುವ ಅಗತ್ಯವಿಲ್ಲ. ರಾಜ್ಯ ಸರ್ಕಾರವು ಈಗಾಗಲೇ ಕೇಂದ್ರ ವಿದೇಶಾಂಗ ಇಲಾಖೆಯೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಸಹಾಯವಾಣಿಯ ಮೂಲಕ ಜನರ ಅಹವಾಲುಗಳನ್ನು ಸ್ವೀಕರಿಸಲಾಗುತ್ತಿದೆ.
ಸದ್ಯ ವಿಮಾನ ಸಂಚಾರ ಸ್ಥಗಿತಗೊಂಡಿರುವುದರಿಂದ ತೆರವು ಕಾರ್ಯಾಚರಣೆಗೆ ಅಡ್ಡಿಯಾಗಿದ್ದು, ಏರ್ ಟ್ರಾಫಿಕ್ ಕ್ಲಿಯರ್ ಆದ ತಕ್ಷಣ ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ಪ್ರತಿಯೊಬ್ಬ ಕನ್ನಡಿಗರನ್ನು ಸುರಕ್ಷಿತವಾಗಿ ನಾಡಿಗೆ ಕರೆತರಲಾಗುವುದು. ಅಲ್ಲಿಯವರೆಗೆ ಸಂತ್ರಸ್ತರ ಸಂಪೂರ್ಣ ಖರ್ಚು ವೆಚ್ಚಗಳನ್ನು ರಾಜ್ಯ ಸರ್ಕಾರವೇ ಭರಿಸಲಿದೆ,” ಎಂದು ಭರವಸೆ ನೀಡಿದರು.
ಇದನ್ನೂ ಓದಿ: “ಯುಎಸ್ ಜಗಳಗಂಟ ಪುಂಡನಂತೆ ವರ್ತಿಸುತ್ತಿದೆ”- ಇರಾನ್ ಮೇಲೆ ದಾಳಿಗೆ ಸಿಪಿಐ(ಎಂ) ಖಂಡನೆ
ಇರಾನ್-ಇಸ್ರೇಲ್ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ (Middle East) ಸಿಲುಕಿರುವ ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಕೈಗೊಂಡಿರುವ ಕ್ರಮಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಮಾಹಿತಿ ನೀಡಿದರು.ಯುದ್ಧ ಪೀಡಿತ ಪ್ರದೇಶದಲ್ಲಿ ಸಿಲುಕಿರುವ ಕನ್ನಡಿಗರು ಮತ್ತು ಅವರ ಕುಟುಂಬದವರು ಆತಂಕಪಡುವ ಅಗತ್ಯವಿಲ್ಲ. ರಾಜ್ಯ ಸರ್ಕಾರವು ಕೇಂದ್ರ ವಿದೇಶಾಂಗ ಇಲಾಖೆಯೊಂದಿಗೆ ನಿರಂತರ ಸಂಪರ್ಕದಲ್ಲಿದೆ ಎಂದು ಸಚಿವರು ಅಭಯ ನೀಡಿದ್ದಾರೆ.
ರಕ್ಷಣೆ ಮತ್ತು ವಾಪಸಾತಿ: ಸದ್ಯ ವಿಮಾನ ಸಂಚಾರ (Air Traffic) ಸ್ಥಗಿತಗೊಂಡಿರುವುದರಿಂದ ಕನ್ನಡಿಗರನ್ನು ತೆರವುಗೊಳಿಸಲು ಸಾಧ್ಯವಾಗುತ್ತಿಲ್ಲ. ವಿಮಾನ ಸಂಚಾರ ಪುನರಾರಂಭವಾದ ತಕ್ಷಣ ಕೇಂದ್ರ ಸರ್ಕಾರದ ಮೂಲಕ ಅವರನ್ನು ವಾಪಸ್ ಕರೆತರಲು ಕ್ರಮ ಕೈಗೊಳ್ಳಲಾಗುವುದು.
ಖರ್ಚು ವೆಚ್ಚ ಭರಿಸಲು ಸಿದ್ಧ: ಕನ್ನಡಿಗರು ವಾಪಸ್ ಬರುವವರೆಗೂ ಅಲ್ಲಿ ಅವರು ಮಾಡುವ ಖರ್ಚು ವೆಚ್ಚಗಳನ್ನು ರಾಜ್ಯ ಸರ್ಕಾರವೇ ಭರಿಸಲಿದೆ. ಕೇಂದ್ರ ಸರ್ಕಾರದ ಮೂಲಕ ಈ ಪ್ರಕ್ರಿಯೆ ನಡೆಯಲಿದ್ದು, ಬೇಕಾದ ಹಣವನ್ನು ರಾಜ್ಯ ಸರ್ಕಾರ ನೀಡಲಿದೆ.
ವೀಸಾ ಸಮಸ್ಯೆ: ವಿಮಾನ ನಿಲ್ದಾಣಗಳಲ್ಲಿ ಸಿಲುಕಿರುವವರಿಗೆ ವೀಸಾ ಸಮಸ್ಯೆ ಉಂಟಾದಲ್ಲಿ, ಸ್ಥಳೀಯ ರಾಯಭಾರಿ ಕಚೇರಿ ಅಥವಾ ಸಹಾಯವಾಣಿಗೆ ಕರೆ ಮಾಡಿದರೆ ಅಗತ್ಯ ವ್ಯವಸ್ಥೆ ಮಾಡಲಾಗುವುದು.
ಸಹಾಯವಾಣಿಗೆ ಕರೆ ಮಾಡಿ: ಸಂಕಷ್ಟದಲ್ಲಿರುವವರು ಅಥವಾ ಅವರ ಕುಟುಂಬದವರು ಹೆಚ್ಚಿನ ಮಾಹಿತಿಗಾಗಿ ರಾಜ್ಯ ಸರ್ಕಾರದ ಸಹಾಯವಾಣಿಯನ್ನು ಸಂಪರ್ಕಿಸಬಹುದು.
ಇದನ್ನೂ ನೋಡಿ: ಹೂವಾಗಬೇಕಿದ್ದದ್ದು… ಕ್ಷಿಪಣಿಯಾದದ್ದು | ಬುಷ್ ಅಧ್ಯಕ್ಷರಾಗಿದ್ದಾಗ ಕೃಷ್ಣ ನಾಯಕ ಹಿಚ್ಕಡ ಬರೆದ ಕವಿತೆ Janashakthi
