ಬೆಂಗಳೂರು: ಕೋವಿಡ್-19 ಸಾಂಕ್ರಾಮಿಕ ರೋಗದಿಂದ ಕುಟುಂಬದ ದುಡಿಯುವ ವ್ಯಕ್ತಿ ಮೃತಪಟ್ಟ ಬಿಪಿಎಲ್ ಕಾರ್ಡು ಹೊಂದಿರುವ ಕುಟುಂಬಕ್ಕೆ ಒಂದು ಲಕ್ಷ ರೂಪಾಯಿ ಪರಿಹಾರವನ್ನು ನೀಡುವುದಾಗಿ ಸರಕಾರ ಘೋಷಿಸಿದೆ.
ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಕೊರೊನಾದಿಂದ ಮೃತಪಟ್ಟವರ ಕುಟುಂಬಕ್ಕೆ ಪರಿಹಾರವಾಗಿ ಸರ್ಕಾರ 250 ರಿಂದ 300 ಕೋಟಿ ರೂಪಾಯಿ ಪ್ಯಾಕೇಜ್ ನೀಡಲಿದೆ. ದೇಶದಲ್ಲಿ ಇದೇ ಮೊಟ್ಟ ಮೊದಲ ಬಾರಿಗೆ ಈ ಯೋಜನೆಯನ್ನು ಜಾರಿಗೊಳಿಸಲಾಗಿದೆ ಎಂದರು.
'ಕೋವಿಡ್ ಸೋಂಕಿನಿಂದ ದುಡಿಯುವ ವ್ಯಕ್ತಿಗಳು ಮೃತಪಟ್ಟು ಅನೇಕ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿದೆ. ಇದನ್ನು ಮನಗಂಡು, ಬಿಪಿಎಲ್ ಕುಟುಂಬಗಳಲ್ಲಿ ಕೋವಿಡ್ ಸೋಂಕಿನಿಂದ ವಯಸ್ಕರು ಮೃತಪಟ್ಟಲ್ಲಿ, ಆ ಕುಟುಂಬಕ್ಕೆ 1 ಲಕ್ಷ ರೂ. ಪರಿಹಾರ ನೀಡಲು ತೀರ್ಮಾನಿಸಲಾಗಿದೆ. ಕುಟುಂಬಕ್ಕೆ ಒಬ್ಬ ವ್ಯಕ್ತಿಯ ಮರಣಕ್ಕೆ ಪರಿಹಾರ ವಿತರಿಸಲಾಗುವುದು' : ಸಿಎಂ @BSYBJP pic.twitter.com/LuWDOhQEmt
— CM of Karnataka (@CMofKarnataka) June 14, 2021
ಕೋವಿಡ್ ಸೋಂಕಿನಿಂದ ಮೃತಪಟ್ಟು ಹಲವಾರು ಕುಟುಂಬಗಳು ಇಂದು ಬೀದಿಪಾಲಾಗಿದ್ದಾರೆ. ಇದನ್ನು ಮನಗಂಡು ಸರಕಾರ, ಒಂದು ಕುಟುಂಬದಲ್ಲಿನ ವಯಸ್ಕರು, ದುಡಿಯುವ ವ್ಯಕ್ತಿ ಸೋಂಕಿಗೆ ಮೃತಪಟ್ಟರೆ ಅಂತಹ ಕುಟುಂಬಕ್ಕೆ ಸರಕಾರದಿಂದ ಒಂದು ಲಕ್ಷ ರೂಪಾಯಿ ಆರ್ಥಿಕ ಸಹಾಯ ಮಾಡುತ್ತಿದೆ. ಇದು ಬಿಪಿಎಲ್ ಕಾರ್ಡು ಹೊಂದಿರುವವರಿಗೆ ಮಾತ್ರ ಅನ್ವಯವಾಗಲಿದೆ. ರಾಜ್ಯದಲ್ಲಿ 25 ರಿಂದ 30 ಸಾವಿರ ಇಂತಹ ಕುಟುಂಬಗಳಿವೆ ಎಂದರು.