ಆಂತರಿಕ ಕಚ್ಚಾಟದಿಂದ ಸರ್ಕಾರ ಶೀಘ್ರ ಪತನ: ಬಸವರಾಜ ಬೊಮ್ಮಾಯಿ

ಕಲಬುರಗಿ: ಆಂತರಿಕ ಕಚ್ಚಾಟದಿಂದ ಸರ್ಕಾರ ಶೀಘ್ರ ಪತನವಾಗಲಿದ್ದು, ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲವಾಗಿದೆ. ಒಂದು ವರ್ಷದ ಸಾಧನೆ ಶೂನ್ಯವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟೀಕಿಸಿದರು. ಆಂತರಿಕ

ವಿಧಾನ ಪರಿಷತ್ ಚುನಾವಣಾ ಪ್ರಚಾರದಂಗವಾಗಿ ಕಲಬುರಗಿಗೆ ಆಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಕಳೆದ ಒಂದು ವರ್ಷದ ಅವಧಿಯಲ್ಲಿ ರಾಜ್ಯ ಸರ್ಕಾರ  ಒಂದೇ ಒಂದು ಹೊಸ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿಲ್ಲ‌. ಶಾಸಕರಿಗೆ ಅನುದಾನ ಮರೀಚಿಕೆಯಾಗಿರುವುದು, ರಾಜ್ಯದಿಂದ ಮೊದಲು ಬರ ಪರಿಹಾರ ನೀಡದೇ ಕೇಂದ್ರ ಸರ್ಕಾರದ ಕಡೆಗೆ  ಬೊಟ್ಟು ಮಾಡಿರುವುದು, ರಾಜ್ಯದಲ್ಲಿ ಹೆಚ್ಚಿದ ಕೊಲೆಗಳು, ಎಲ್ಲೇ ಮೀರಿದ ಡ್ರಗ್ಸ್ ಮಾಫಿಯಾ, ಬಾಲ ಬಿಚ್ಚಿದ ರೌಡಿಗಳು, ಇದಕ್ಕೆ ರಾಜಕೀಯ ಕುಮ್ಮಕ್ಕು, ರೇವ್ ಪಾರ್ಟಿ ಮೇಲೆ ದಾಳಿ, ಕುಸಿದ ಶೈಕ್ಷಣಿಕ ರಂಗ, ನಾಯಕತ್ವಕ್ಕಾಗಿ ಮುಸುಕಿನ ಗುದ್ದಾಟ ಸರ್ಕಾರ ವಿಫಲತೆಗೆ ಸಾಕ್ಷಿಗಳಾಗಿವೆ ಎಂದು ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: ನನ್ನ ಸುತ್ತಮುತ್ತಲಿನ 40 ಜನರ ಫೋನ್ ಟ್ಯಾಪ್ ಆಗುತ್ತಿದೆ ಎಂದ ಹೆಚ್‌.ಡಿ.ಕುಮಾರಸ್ವಾಮಿ

ರಾಜ್ಯದ ಆರ್ಥಿಕ ಸ್ಥಿತಿಯಂತು ಹೇಳದಂತಿದೆ. ಬಜೆಟ್ ಘೋಷಣೆ ಕಾಮಗಾರಿಗಳ ಪರಿಶೀಲನೆ ಸಹ ಮಾಡಲಿಕ್ಕಾಗಿಲ್ಲ.‌ ಒಟ್ಟಾರೆ ರಾಜ್ಯ ಸರ್ಕಾರ ಅಭಿವೃದ್ಧಿಯಲ್ಲಿ ಹತ್ತು ವರ್ಷ ಹಿಂದಕ್ಕೆ ಹೋಗಿದೆ. ತಮ್ಮ ಅವಧಿಯಲ್ಲಿ ಪ್ರಾರಂಭಿಸಿದ ವಿವೇಕ ಕಾರ್ಯಕ್ರಮದಡಿಯ 9000 ಶಾಲಾ ಕೊಠಡಿಗಳ ನಿರ್ಮಾಣ ಅನುದಾನ ಕೊರತೆಯಿಂದ ಅರ್ಧಕ್ಕೆ ನಿಂತಿವೆ ಎಂದು ಬೊಮ್ಮಾಯಿ ಟೀಕಿಸಿದರು.

ಶೀಘ್ರ ಸರ್ಕಾರ ಪತನ:

ಮುಖ್ಯಮಂತ್ರಿಗಳೇ ರಾಜ್ಯದಿಂದ ಪಿಎಂ ಅಭ್ಯರ್ಥಿ ಯಾರೂ ಇಲ್ಲ‌ ಎಂದಿರುವುದಕ್ಕೆ ನಾಯಕತ್ವದ ಮುಸುಕಿನ ಗುದ್ದಾಟಕ್ಕೆ ಸಾಕ್ಷಿಯಾಗಿದೆ. ಹೀಗಾಗಿ ಶೀಘ್ರದಲ್ಲೇ ತನ್ನ ಆಂತರಿಕ ಕಚ್ಚಾಟದಿಂದ ರಾಜ್ಯ ಸರ್ಕಾರ ಪತನವಾಗಲಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಭವಿಷ್ಯ ನುಡಿದರು. ‌

ಲೋಕಸಭಾ ಚುನಾವಣೆಯಲ್ಲಿ  ರಾಜ್ಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ 25  ಸೀಟು ಗೆಲ್ಲುತ್ತದೆ. ಕಾಂಗ್ರೆಸ್ ಇನ್ನೇರಡು ಸೀಟುಗಳ ಹೆಚ್ಚಳಕ್ಕೆ ತೃಪ್ತಿ ಪಡಬೇಕಾಗುತ್ತದೆ. ಜನರು ಮೋದಿ ಅವರ ಕೈ ಬಲಪಡಿಸುವುನ್ನು ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ ಎಂದರು.

ಈ ಸಂದರ್ಭದಲ್ಲಿ ಸಂಸದ ಡಾ.‌ಉಮೇಶ ಜಾಧವ, ಶಾಸಕರಾದ ಬಸವರಾಜ ಮತ್ತಿಮಡು, ಡಾ. ಅವಿನಾಶ ಜಾಧವ್, ಬಿ.ಜಿ.ಪಾಟೀಲ್, ಶಶೀಲ್ ಜಿ ನಮೋಶಿ, ಮಾಜಿ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ, ರಾಜಕುಮಾರ ಪಾಟೀಲ್ ತೇಲ್ಕೂರ, ಬಿಜೆಪಿ ಜಿಲ್ಲಾಧ್ಯಕ್ಷ ಶಿವರಾಜ ಪಾಟೀಲ್ ರದ್ದೇವಾಡಗಿ, ನಗರಾಧ್ಯಕ್ಷ ಚಂದು ಪಾಟೀಲ್ ಹಾಜರಿದ್ದರು.

ಇದನ್ನೂ ನೋಡಿ: ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ | ಮೇ 30ರಂದು ಹಾಸನದಲ್ಲಿ ಬೃಹತ್‌ ಹೋರಾಟಕ್ಕೆ ನಿರ್ಧಾರ

Donate Janashakthi Media

Leave a Reply

Your email address will not be published. Required fields are marked *