ಉಡುಪಿ: ಕಾಂಗ್ರೆಸ್ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯು ಕಳೆದ ಎರಡು ಮೂರು ತಿಂಗಳಿಂದ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದು, ಇದೀಗ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪ್ರತಿಕ್ರಿಯೆ ನೀಡಿದ್ದು, ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಕತ್ತರಿ ಹಾಕುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಕತ್ತರಿ
ಗ್ಯಾರಂಟಿ ಯೋಜನೆಯ ಬಗ್ಗೆ ಯಾವುದೇ ಚರ್ಚೆಗಳು ನಡೆದಿಲ್ಲ. ಗ್ಯಾರಂಟಿ ಯೋಜನೆಗಳ ಬಗ್ಗೆ ಪುನರ್ ಪರಿಶೀಲನೆ ಕೂಡ ಮಾಡಲ್ಲ. ಐದು ಗ್ಯಾರಂಟಿಗಳು ಮೊದಲು ಹೇಗಿತ್ತು ಎಲ್ಲವೂ ಮುಂದುವರಿಯುತ್ತದೆ ಎಂದು ಹೇಳಿದರು.
ಇದನ್ನೂ ಓದಿ: ತುಂಗಭದ್ರಾ ಡ್ಯಾಂನ 19ನೇ ಗೇಟ್ ಚೈನ್ ಲಿಂಕ್ ಕಟ್: ಗೇಟ್ ಅಳವಡಿಕೆ ಕಾರ್ಯ ಚುರುಕು
ಗ್ಯಾರೆಂಟಿ ಯೋಜನೆಗಳ ಬಗ್ಗೆ ಯಾರು ಅನ್ಯತಾ ವ್ಯಾಖ್ಯಾನಿಸಬಾರದು ಚುನಾವಣೆಗಿಂತ ಮೊದಲು ಕೊಟ್ಟ ಭರವಸೆ ಜಾರಿಯಲ್ಲಿ ಇರುತ್ತದೆ. ಕ್ಯಾಬಿನೆಟ್ ನ ಒಕ್ಕೋರೆಲ್ಲ ಧನಿ ಒಂದೇ ಗ್ಯಾರಂಟಿ ಯೋಜನೆ ಮುಂದುವರಿಯಬೇಕು ಎಂಬುದು, ಅದರಂತೆಯೇ ಗ್ಯಾರಂಟಿ ಯೋಜನೆಗಳು ಮುಂದುವರೆಯುತ್ತೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.
ಚುನಾವಣಾ ದೃಷ್ಠಿಯಿಂದ ನಾವು ಗ್ಯಾರಂಟಿ ಯೋಜನೆಯನ್ನು ಜಾರಿಗೆ ತಂದಿಲ್ಲ, ಬದಲಿಗೆ ಮಹಿಳೆಯರ ಸಬಲೀಕರಣ ಬಡವರ ಉದ್ದಾರಕ್ಕಾಗಿ ಈ ಮಹತ್ವದ ಯೋಜನೆಯನ್ನು ರೂಪಿಸಿದ್ದೇವೆ.. ಮೊದಲೇ ಹೇಳಿದಂತೆ ರಾಜ್ಯ ಸರ್ಕಾರ ಅಧಿಕಾರದಲ್ಲಿರುವವರೆಗೆ ಗ್ಯಾರಂಟಿ ಯೋಜನೆಗಳನ್ನು ನೀಡುತ್ತೇವೆ ಎಂದು ಭರವಸೆ ನೀಡಿದರು.
ವಿವಿಧ ಯೋಜನೆ, ವಿವಿಧ ಗ್ಯಾರಂಟಿಯಿಂದ ಇಷ್ಟು ಹಣ ಬಂದಿದೆ. ಅಭಿವೃದ್ಧಿ ಅಂದರೆ ಬರಿ ರಸ್ತೆ ಮಾಡುವುದು ಅಲ್ಲ, ಮನುಷ್ಯನ ಜೀವನದಲ್ಲಿ ಮಂದಹಾಸ ತರುವುದೇ ಅಭಿವೃದ್ಧಿ ಎಂದರು. ವಿರೋಧ ಪಕ್ಷದವರಿಗೆ ಕೆಲಸ ಇಲ್ಲ ಭ್ರಮನಿರಸನಗೊಂಡಿದ್ದಾರೆ. ಬಿಜೆಪಿಯವರು ನಿರಾಶರಾಗಿ ಮಾತನಾಡುತ್ತಿದ್ದಾರೆ ಎಂದು ಬಿಜೆಪಿ, ಜೆಡಿಎಸ್‌ಗೆ ಟಾಂಗ್ ನೀಡಿದರು.
ಇದನ್ನೂ ನೋಡಿ: ರೀ ಕ್ಲೈಮ್ ಅವರ್ ನೈಟ್ಸ್…..ಬೇಕಿದೆ ಮಹಿಳೆಯರಿಗೆ ನಿಜ ಸ್ವಾತಂತ್ರ್ಯ Janashakthi Media