ಕ್ರೈಸ್ತ ಧರ್ಮಕ್ಕೆ ಹಿಂದೂ ಉಪಜಾತಿಗಳ ಸೇರ್ಪಡೆ ಮರುಪರಿಶೀಲಿಸುವಂತೆ ಸಿಎಂ ಸಿದ್ದರಾಮಯ್ಯಗೆ ರಾಜ್ಯಪಾಲ ಪತ್ರ

ಬೆಂಗಳೂರು: ಕ್ರೈಸ್ತ ಧರ್ಮಕ್ಕೆ ಹಿಂದೂ ಉಪಜಾತಿಗಳ ಸೇರ್ಪಡೆ ಕುರಿತಂತೆ ರಾಜ್ಯದಲ್ಲಿ ತೀವ್ರ ವಿವಾದ ಸೃಷ್ಟಿಸಿದೆ. ಇದರ ಮಧ್ಯೆ ವಿವಾದ ಕುರಿತಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮಧ್ಯ ಪ್ರವೇಶಿಸಿದ್ದು ಕ್ರೈಸ್ತ ಧರ್ಮಕ್ಕೆ ಹಿಂದೂ ಉಪಜಾತಿಗಳ ಸೇರ್ಪಡೆ ಕುರಿತಂತೆ ಮರುಪರಿಶೀಲಿಸುವಂತೆ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದಾರೆ.

ಮುಂಬರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಜಾತಿ ಜನಗಣತಿ ಪಟ್ಟಿಯಲ್ಲಿ ಕನಿಷ್ಠ 46 ಜಾತಿಗಳು ದ್ವಿ ಗುರುತುಗಳನ್ನು ಹೊಂದಿವೆ. ಕ್ರೈಸ್ತ ಬ್ರಾಹ್ಮಣ, ಕ್ರೈಸ್ತ ಒಕ್ಕಲಿಗ, ಕ್ರೈಸ್ತ ಕುರುಬ ಮೂಲಕ ಕ್ರೈಸ್ತ ಧರ್ಮಕ್ಕೆ ಹಿಂದೂ ಉಪಜಾತಿ ಸೇರ್ಪಡೆ ಮಾಡಲಾಗುತ್ತಿದೆ ಎಂದು ಆರೋಪಿಸಿ ರಾಜ್ಯ ಬಿಜೆಪಿ ನಾಯಕರು ಮತ್ತು ಇತರರ ನಿಯೋಗವು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರಿಗೆ ದೂರು ನೀಡಿದ್ದರು.

ಇದನ್ನೂ ಓದಿ: ಮುಲ್ಕಿ ಮೂಡಬಿದ್ರೆ ಅಭಿವೃದ್ಧಿ ಕಡಗಣೆಗೆ ಶಾಸಕ ಉಮನಾಥ್ ಕೋಟ್ಯಾನ್ ನೇರ ಹೊಣೆ – ಬಿಕೆ ಇಮ್ತಿಯಾಜ್

ಇದೀಗ ಜಾತಿಗಣತಿ ಕುರಿತಂತೆ ವಿವಾದ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ರಾಜ್ಯಪಾಲ ಥಾವರ್ ಚಂದ್ ಅವರು ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದು ಕ್ರೈಸ್ತ ಧರ್ಮಕ್ಕೆ ಹಿಂದೂ ಉಪಜಾತಿಗಳ ಸೇರ್ಪಡೆ ಕುರಿತಂತೆ ಮರುಪರಿಶೀಲಿಸುವಂತೆ ಸೂಚಿಸಿದ್ದಾರೆ.

ಕ್ರಿಶ್ಚಿಯನ್ ಧರ್ಮಕ್ಕೆ ಹಿಂದೂ ಉಪಜಾತಿಗಳ ಸೇರ್ಪಡೆಯಿಂದ ಸಾಮಾಜಿಕ ಧಕ್ಕೆ ಹಾಗೂ ದೀರ್ಘಾವಧಿಯ ಸಮಸ್ಯೆ ಉಂಟಾಗುತ್ತದೆ. ಹೀಗಾಗಿ ಪಟ್ಟಿಯಲ್ಲಿನ ಜಾತಿಗಳ ದ್ವಿ ಗುರುತನ್ನು ಪಟ್ಟಿಯಿಂದ ಕೈಬಿಡುವಂತೆ ಪತ್ರದಲ್ಲಿ ಸೂಚಿಸಿದ್ದಾರೆ. ‘ಜಾತಿ ಜನಗಣತಿ’ ಎಂದು ಕರೆಯಲ್ಪಡುವ ರಾಜ್ಯದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯು ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7 ರ ನಡುವೆ ನಡೆಯಲಿದ್ದು ದತ್ತಾಂಶ ಸಂಗ್ರಹದಲ್ಲಿ ಅಂದಾಜು 60 ಪ್ರಶ್ನೆಗಳನ್ನು ಕೇಳಲಾಗುತ್ತದೆ.

ಇದನ್ನೂ ನೋಡಿ: ಒಳ ಮೀಸಲಾತಿ ಜಾರಿ | ಸಮಾಧಾನವೇ! ಅಸಮಾಧಾನವೇ?? ದಲಿತ ನಾಯಕ ಮಾವಳ್ಳಿ ಶಂಕರ್‌ ಜೊತೆ ಮಾತುಕತೆ Janashakthi Media

Donate Janashakthi Media

Leave a Reply

Your email address will not be published. Required fields are marked *