ಬೆಂಗಳೂರು | ರಾಜ್ಯಪಾಲರ ನಡೆ ಅಸಂವಿಧಾನಿಕ ಹರಿಪ್ರಸಾದ್ ಆಕ್ರೋಶ

ಬೆಂಗಳೂರು : ವಿಧಾನಪರಿಷತ್ ಅಧಿವೇಶನದ ವೇಳೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸರ್ಕಾರ ನೀಡಿದ್ದ ಭಾಷಣವನ್ನು ಸಂಪೂರ್ಣವಾಗಿ ಓದದೆ ಸದನದಿಂದ ಹೊರನಡೆದ ಹಿನ್ನೆಲೆಯಲ್ಲಿ ವಿಧಾನಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ರಾಜ್ಯಪಾಲರು ಸರ್ಕಾರದ ಭಾಷಣವನ್ನು ಪೂರ್ಣವಾಗಿ ಓದಬೇಕೆಂದು ಆಗ್ರಹಿಸಿ ಅವರು ರಾಜ್ಯಪಾಲರನ್ನು ಅಡ್ಡಗಟ್ಟಿ ಭಾಷಣ ಮಾಡುವಂತೆ ಪಟ್ಟು ಹಿಡಿದ ಪ್ರಸಂಗ ನಡೆಯಿತು.

ಇದನ್ನೂ ಓದಿ : ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ರಾಜ್ಯಪಾಲರ ನಿರಾಕರಣೆ!

ರಾಜ್ಯಪಾಲರ ಈ ನಡೆ ಸಂವಿಧಾನಾತ್ಮಕ ಪರಂಪರೆಗೆ ವಿರುದ್ಧವಾಗಿದೆ ಎಂದು ಹರಿಪ್ರಸಾದ್ ಆರೋಪಿಸಿದರು. ಸರ್ಕಾರದ ನೀತಿಗಳು ಮತ್ತು ಕಾರ್ಯಕ್ರಮಗಳನ್ನು ಒಳಗೊಂಡ ಭಾಷಣವನ್ನು ಸದನದಲ್ಲಿ ಪೂರ್ಣವಾಗಿ ಮಂಡಿಸುವುದು ರಾಜ್ಯಪಾಲರ ಕರ್ತವ್ಯವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

ಈ ಘಟನೆಯಿಂದ ಸದನದಲ್ಲಿ ಕೆಲಕಾಲ ಗದ್ದಲ ಉಂಟಾಗಿದ್ದು, ಆಡಳಿತ ಮತ್ತು ರಾಜ್ಯಪಾಲರ ನಡುವಿನ ಸಂಬಂಧ ಮತ್ತೊಮ್ಮೆ ಚರ್ಚೆಗೆ ಬಂದಿದೆ. ರಾಜ್ಯಪಾಲರ ಪಾತ್ರ, ಸಂವಿಧಾನಾತ್ಮಕ ಜವಾಬ್ದಾರಿ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳ ಕುರಿತು ರಾಜಕೀಯ ವಲಯದಲ್ಲಿ ವ್ಯಾಪಕ ಚರ್ಚೆ ಆರಂಭವಾಗಿದೆ.

ಇದನ್ನೂ ನೋಡಿ : “ದುಡಿಯುವ ವರ್ಗದ ಆಕ್ರೋಶ: ಫೆಬ್ರವರಿ 12ಕ್ಕೆ ಸಾರ್ವತ್ರಿಕ ಮುಷ್ಕರ ಘೋಷಣೆ” Janashakthi Media

Donate Janashakthi Media

Leave a Reply

Your email address will not be published. Required fields are marked *