ಮಧುಗಿರಿ| ವಾಹನ ಡಿಕ್ಕಿ ಹೊಡೆದು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸಾವು

ಮಧುಗಿರಿ: ಸೆಪ್ಟೆಂಬರ್‌ 25ರಂದು ಅಪರಿಚಿತ ವಾಹನ ಡಿಕ್ಕಿ ಹೊಡೆದು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಮೃತಪಟ್ಟಿರಿದ್ದಾರೆ. ತಾಲ್ಲೂಕಿನ ಕಸಬಾ ವ್ಯಾಪ್ತಿಯ ಕವಾಡಿಗರ ಪಾಳ್ಯದ ನಿವಾಸಿ ಹಾಗೂ ಚಿಕವಜ್ರ ಗ್ರಾ.ಪಂ ಉಪಾಧ್ಯಕ್ಷ ವೀರಭದ್ರಯ್ಯ (55) ಮೃತಪಟ್ಟವರು ಎಂದು ಗುರುತಿಸಲಾಗಿದೆ.

ಸೆಪ್ಟೆಂಬರ್‌ 23ರಂದು ಕವಾಡಿಗರ ಪಾಳ್ಯದಲ್ಲಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಅಪರಿಚಿತ ವಾಹನ ಡಿಕ್ಕಿಹೊಡೆದಿತ್ತು. ಗಾಯಗೊಂಡಿದ್ದ ವೀರಭದ್ರಯ್ಯ ರನ್ನು ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಗುರುವಾರ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ನಕಲಿ ವೈದ್ಯಕೀಯ ದಾಖಲೆ ಸಲ್ಲಿಕೆ; ಐವರ ಬಂಧನ

ಜಿಲ್ಲೆಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ನೋಡಿ: ಮೈಸೂರು ದಸರಾ | ʻನಾವು ಹಗೆಗಳಿಂದ ಅಲ್ಲ, ಪ್ರೀತಿಯಿಂದ ಬದುಕನ್ನು ಅರಳಿಸಬಹುದುʼ- ಬಾನು ಮುಷ್ತಾಕ್‌

Donate Janashakthi Media

Leave a Reply

Your email address will not be published. Required fields are marked *