ಬೆಂಗಳೂರು: ಮಾರ್ಚ್ 10ರೊಳಗೆ ರಾಜ್ಯದ ಎಲ್ಲ ಗ್ರಾಮ ಪಂಚಾಯತ್‌ಗಳು ಜನಸ್ನೇಹಿ ಬಜೆಟ್ ಮಂಡಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ನಿರ್ದೇಶನ ನೀಡಿದ್ದಾರೆ.
ಇದನ್ನೂ ಓದಿ: ಆಗ್ರಾದಲ್ಲಿ ಟ್ರಕ್ ಗೆ ಬಸ್ ಡಿಕ್ಕಿ: ನಾಲ್ವರು ಸಾವು, 19 ಮಂದಿಗೆ ಗಾಯ
ಈ ಕುರಿತು ಪ್ರಕಟನೆ ನೀಡಿರುವ ಅವರು, ಕರ್ನಾಟಕ ಗ್ರಾಮ ಸ್ವರಾಜ್ ಹಾಗೂ ಪಂಚಾಯತ್ ಅಧಿನಿಯಮ 1993ರ ಪ್ರಕರಣ 241 ಉಪ ಪ್ರಕರಣ (1) ಅಡಿ ಗ್ರಾಮ ಪಂಚಾಯತ್‌ಗಳು ತಮಗೆ ಮುಂದಿನ ಆರ್ಥಿಕ ವರ್ಷದಲ್ಲಿ ವಿವಿಧ ಬಾಬ್ತುಗಳಡಿ ಲಭ್ಯವಾಗುವ ಅನುದಾನ ಹಾಗೂ ಕೈಗೊಳ್ಳಬೇಕಾದ ಅಭಿವೃದ್ಧಿ ಯೋಜನೆಗಳನ್ನೊಳಗೊಂಡಂತೆ ಆಯವ್ಯಯ ತಯಾರಿಸಿ ಮಾರ್ಚ್ 10ರೊಳಗೆ ಗ್ರಾ.ಪಂ. ಸಭೆಯಲ್ಲಿ ಮಂಡಿಸಿ ಅನುಮೋದನೆ ಪಡೆದುಕೊಳ್ಳಬೇಕು ಎಂದಿದ್ದಾರೆ.
ಇದನ್ನೂ ನೋಡಿ: ಇಂಗ್ಲೀಷ್ ಕಲಿಯೋಣ | “Wh” ಪ್ರಶ್ನೆಗಳ ರಚನೆ ಹೇಗೆ? | ತೇಜಸ್ವಿನಿ |#whquestions| Spokenenglish |Janashakthi