ರಾಯಚೂರು: ಬೆಲೆ ಏರಿಕೆ ಅನುಗುಣವಾಗಿ ಕನಿಷ್ಠ ವೇತನ ನಿಗಧಿಪಡಿಸಬೇಕೆಂದು ಆಗ್ರಹಿಸಿ ಗ್ರಾಮ ಪಂಚಾಯತಿ ನೌಕರರು ಅನಿರ್ದಿಷ್ಟಾವಧಿ ಧರಣಿ ನಡೆಸಲು ಮುಂದಾಗಿದ್ದು, ಫೆಬ್ರವರಿ 14 ರಿಂದ ಬೆಂಗಳೂರಿನಲ್ಲಿ ಸಾವಿರಾರು ನೌಕರರು ಜಮಾವಣೆಗೊಳ್ಳಲಿದ್ದಾರೆ ಎಂದು ಸಿಐಟಿಯು ಸಂಯೋಜಿತ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ ನೌಕರರ ಸಂಘದ ಖಜಾಂಚಿ ಆರ್.ಎಸ್.ಬಸವರಾಜ ಹೇಳಿದರು.
ರಾಯಚೂರು ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಗ್ರಾಮ ಪಂಚಾಯತ್‌ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕರ ವಸೂಲಿಗಾರ, ಕ್ಲರ್ಕ್, ಡಾಟಾ ಎಂಟ್ರಿ ಆಪರೇಟರ್ ನಿರಗಂಟಗಳು, ಜವಾನ, ಸ್ವಚ್ಛತಾ ಕೆಲಸಗಾರರನ್ನು ಎಲ್ಲರನ್ನೂ ಏಕಕಾಲಕ್ಕೆ ಸರಕಾರಿ ನೌಕರರೆಂದು ಪರಿಗಣಿಸಬೇಕೆಂದು ಆಗ್ರಹಿಸಿರುವ ಆರ್ ಎಸ್ ಬಸವರಾಜ ಅವರು, ಜೀವನಾವಶ್ಯಕ ವಸ್ತುಗಳ ಬೆಲೆಗಳು ಏರುತ್ತಿರುವ ಹಿನ್ನೆಲೆಯಲ್ಲಿ ಕನಿಷ್ಠ ವೇತನ 25 ಸಾವಿರ ನಿಗಧಿಪಡಿಸಬೇಕೆಂದು ಆಗ್ರಹಿಸಿದರು.
ಇದನ್ನು ಓದಿ: ಕನಿಷ್ಠ ವೇತನ ನಿಗದಿಗಾಗಿ ಗ್ರಾಮ ಪಂಚಾಯತಿ ನೌಕರರ ಪ್ರತಿಭಟನೆ
2006ರ ರಾಜ್ಯದ ಸರಾಸರಿ ಗ್ರಾಹಕ ಬೆಲೆ ಸೂಚ್ಯಂಕದ ಅನುಗುಣವಾಗಿ ಗ್ರಾಮ ಪಂಚಾಯಿತಿಯಲ್ಲಿ ದುಡಿಮೆ ಮಾಡುತ್ತಿರುವ ಕರ ವಸೂಲಿಗಾರರು, ಕ್ಲರ್ಕ್, ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್ ಗಳಿಗೆ ರೂ. 38,021.68, ಪಂಪ್ ಆಪರೇಟರ್, ವಾಟರ್‌ಮನ್‌ಗಳಿಗೆ ರೂ. 33,006.50, ಜವಾನ – ರೂ. 28,750, ಸ್ವಚ್ಚತ್ತಾ ಕೆಲಸಗಾರರಿಗೆ ರೂ. 25 ಸಾವಿರ ನೀಡಬೇಕೆಂಬುದು ಸಂಘಟನೆಯ ಒತ್ತಾಯವಾಗಿದೆ.
ಆದರೆ, 2016ನೇ ಸಾಲಿನಲ್ಲಿ ಕರ ವಸೂಲಿಗಾರರು, ಕ್ಲರ್ಕ್, ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್ ಗಳಿಗೆ ರೂ. 12,122, ಪಂಪ್ ಆಪರೇಟರ್, ವಾಟರ್‌ಮನ್‌ಗಳಗೆ ರೂ. 10,588. ಜವಾನ – ರೂ.10,010, ಸ್ವಚ್ಚತ್ತಾ ಕೆಲಸಗಾರರಿಗೆ ರೂ. 12,870. ಕನಿಷ್ಠ ವೇತನ ನಿಗಧಿ ಮಾಡಿದ್ದಾರೆ.
ಇದನ್ನು ಓದಿ: ಗ್ರಾಮ ಪಂಚಾಯತಿ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಿಐಟಿಯು ವತಿಯಿಂದ ಪ್ರತಿಭಟನೆ
ಗ್ರಾಮ ಪಂಚಾಯತ್‌ಗಳಲ್ಲಿ ಕೆಲಸ ನಿರ್ವಹಿಸುವ ನೌಕರರು ನಿವೃತ್ತಿ ಅಥವಾ ಮರಣ ಹೊಂದಿದರೆ ಪ್ರತಿ ತಿಂಗಳು ಕನಿಷ್ಠ 6 ಸಾವಿರ ರೂಪಾಯಿ ಪಿಂಚಣಿ ವ್ಯವಸ್ಥೆ ಜಾರಿಗೆ ಬರಬೇಕು. ಗ್ರಾಮ ಪಂಚಾಯತ್‌ಗಳಗೆ ಎರಡನೇ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗೆ ಮಂಜೂರು ಮಾಡಿದ್ದು, ಸ್ವಾಗತ, ಆದರೆ ಈಗಾಗಲೇ ಗ್ರಾಮ ಪಂಚಾಯತ್‌ಗಳಲ್ಲಿ ಹೆಚ್ಚುವರಿಯಾಗಿ ಕಾರ್ಯನಿರ್ವಹಿಸುವ ಡಾಟಾ ಎಂಟ್ರಿ ಆಪರೇಟರ್ ಗಳನ್ನು ನೇಮಕ ಮಾಡಿಕೊಂಡು ಮುಂದುವರೆಸಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಅಶೋಕ ಧಣಿ, ಶರಣಬಸವ, ವೀರೇಶ ಚನ್ನಳ್ಳಿ, ಮಲ್ಲಿಕಾರ್ಜುನ ಇದ್ದರು.
ಇಲ್ಲಿ ಕ್ಲಿಕ್ ಮಾಡಿ : ಜನಶಕ್ತಿ ಮೀಡಿಯಾ ವಾಟ್ಸ್‌ಪ್ ಗುಂಪು ಸೇರಲು ಈ ಲಿಂಕ್ ಕ್ಲಿಕ್ ಮಾಡಿ