ನಾಳೆ ಗ್ರಾಮ ಪಂಚಾಯತಿಗಳಿಗೆ ಚುನಾವಣೆ; ಅ.31ಕ್ಕೆ ಫಲಿತಾಂಶ ಪ್ರಕಟ

ಬೆಂಗಳೂರು: ಕರ್ನಾಟದಲ್ಲಿ ವಿವದೆಡೆ ತೆರವಾಗಿದ್ದ ಹಾಗೂ ವಿವಿಧ ಕಾರಣಗಳಿಂದ ಖಾಲಿಯಾಗಿರುವ ಗ್ರಾಮ ಪಂಚಾಯತಿಗಳಿಗೆ ಸಾರ್ವತ್ರಿಕ ಚುನಾವಣೆಯ ಮತದಾನ ಪ್ರಕ್ರಿಯೆಯು ನಾಳೆ(ಅಕ್ಟೋಬರ್‌ 28) ನಡೆಯಲಿದೆ. ಈ ಹಿನ್ನೆಲೆ ಕ್ಷೇತ್ರ ವ್ಯಾಪ್ತಿಯಲ್ಲಿ ರಜೆ ಘೋಷಿಸಿ ಸರ್ಕಾರ ಆದೇಶ ನೀಡಿದೆ. ಅವಧಿ ಮುಗಿದ 252 ಗ್ರಾಮ ಪಂಚಾಯತಿ ಸ್ಥಾನಗಳಿಗೆ ಹಾಗೂ ವಿವಿಧ ಕಾರಣಗಳಿಂದ ತೆರವಾದ 187 ಸದಸ್ಯ ಸ್ಥಾನಗಳಿಗೆ ಮತದಾನ ನಡೆಯಲಿದೆ.

ಸಾರ್ವತ್ರಿಕ/ಉಪ ಚುನಾವಣೆ ನಡೆಯುವ ಪಂಚಾಯಿತಿ ಮತ ಕ್ಷೇತ್ರಗಳಲ್ಲಿನ ಸರ್ಕಾರಿ ಹಾಗೂ ಖಾಸಗಿ ಕಾಲೇಜುಗಳು, ಅನುದಾನಿತ ಹಾಗೂ ಅನುದಾನರಹಿತ ವಿದ್ಯಾಸಂಸ್ಥೆಗಳು, ಎಲ್ಲ ಶೈಕ್ಷಣಿಕ ಸಂಸ್ಥೆಗಳು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕಚೇರಿಗಳು, ರಾಷ್ಟ್ರೀಕೃತ ಹಾಗೂ ಇತರ ಬ್ಯಾಂಕುಗಳು, ಕೇಂದ ಹಾಗೂ ರಾಜ್ಯ ಸರ್ಕಾರದ ಕಾರ್ಖಾನೆಗಳು, ಉಳಿದ ಕೈಗಾರಿಕಾ ಸಂಸ್ಥೆಗಳು ಹಾಗೂ ಸಹಕಾರಿ ರಂಗದ ಸಂಘ ಸಂಸ್ಥೆ, ಔದ್ಯಮಿಕ ಸಂಸ್ಥೆಗಳಲ್ಲಿ ಖಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುತ್ತಿರುವ ಅರ್ಹ ಮತದಾರ ನೌಕರರಿಗೆ ಸೀಮಿತವಾದಂತೆ ಅಕ್ಟೋಬರ್‌ 28 ರಂದು ವೇತನ ಸಹಿತ ರಜೆ ಘೋಷಣೆ ಮಾಡಲಾಗಿದೆ.

ಗ್ರಾಮ ಪಂಚಾಯತಿಗಳ ಮತದಾನ ಪ್ರಕ್ರಿಯೆಯು ಅಕ್ಟೋಬರ್ 28ರಂದು ಬೆಳಗ್ಗೆ 7ಗಂಟೆಯಿಂದ ಸಂಜೆ 5ರವರೆಗೆ ನಡೆಯಲಿದೆ. ಮರು ಮತದಾನ ಅಗತ್ಯವಿದ್ದಲ್ಲಿ ಮಾತ್ರ ಅಕ್ಟೋಬರ್ 30ರಂದು ನಡೆಸಲಾಗುವುದು. ಮತ ಎಣಿಕೆ ಪ್ರಕ್ರಿಯೆ ಅಕ್ಟೋಬರ್ 31ರ ಬೆಳಗ್ಗೆ 8ಗಂಟೆಯಿಂದ ಆರಂಭವಾಗಲಿದೆ ರಾಜ್ಯ ಚುನಾವಣೆ ಆಯೋಗ ತಿಳಿಸಿದೆ.

ವಿಜಯಪುರ ಪಾಲಿಕೆಗೆ ಮತದಾನ

ವಿಜಯಪುರ ಮಹಾನಗರ ಪಾಲಿಕೆಯ 35 ವಾರ್ಡುಗಳಿಗೆ ಸಾರ್ವತ್ರಿಕ ಚುನಾವಣೆ ಹಾಗೂ ನಗರದ ಸ್ಥಳಿಯ ಸಂಸ್ಥೆಗಳಲ್ಲಿ ವಿವಿಧ ಕಾರಣಗಳಿಗೆ ಖಾಲಿ ಇರುವ ಸ್ಥಾನಗಳಿಗೂ ನಾಳೆ(ಅಕ್ಟೋಬರ್‌ 28) ಮತದಾನ ನಡೆಯಲಿದೆ.

ಪಾಲಿಕೆಯ 35 ವಾರ್ಡ್‌ಗಳ ಪೈಕಿ ಬಿಜೆಪಿ 33 ಕ್ಷೇತ್ರಗಳಲ್ಲಿ ಸ್ಪರ್ಧಿಸಿದೆ. ಮುಸ್ಲಿಂ ಮತದಾರರು ಹೆಚ್ಚಾಗಿರುವ 20 ಹಾಗೂ 27ನೇ ವಾರ್ಡ್‌ನಲ್ಲಿ ಸ್ಪರ್ಧಿಸುತ್ತಿಲ್ಲ. ಕಾಂಗ್ರೆಸ್‌ ಪಕ್ಷ ಎಲ್ಲಾ 35 ಕ್ಷೇತ್ರಗಳಲ್ಲೂ ಸ್ಪರ್ಧಿಸಿದೆ. ಜೆಡಿಎಸ್‌ 20, ಎಎಪಿ 15, ಎಐಎಂಐಎಂ 4, ಜನತಾ ಪಕ್ಷ 3, ಕೆಆರ್‌ಎಸ್‌ 3 ಸ್ಥಾನ, ಎಸ್‌ಡಿಪಿಐ 2 ಹಾಗೂ ಬಿಎಸ್‌ಪಿ 1ರಲ್ಲಿ ಹಾಗೂ 58 ಅಭ್ಯರ್ಥಿಗಳು ಪಕ್ಷೇತರರಾಗಿ ಸ್ಪರ್ಧಿಸುತ್ತಿದ್ದಾರೆ.

ಒಟ್ಟು 303 ಮತಗಟ್ಟೆಗಳಲ್ಲಿ ಮತದಾನ ನಡೆಯಲಿದೆ. ಈ ಮತಗಟ್ಟೆಗಳ ಪೈಕಿ 48 ಅತೀ ಸೂಕ್ಷ್ಮ, 83 ಸೂಕ್ಷ್ಮ, 172 ಸಾಧಾರಣ ಮತಗಟ್ಟೆಗಳು ಎಂದು ಗುರುತಿಸಲಾಗಿದೆ. 1,46,736 ಪುರುಷರು, 1,47,327 ಮಹಿಳೆಯರು ಹಾಗೂ 110 ಇತರೆ ಮತದಾರರು ಮತದಾನದ ಹಕ್ಕನ್ನು ಪಡೆದಿದ್ದಾರೆ.

ರಾಜ್ಯ ಚುನಾವಣಾ ಆಯೋಗವು ಕರ್ನಾಟಕ ಪೌರ ನಿಗಮಗಳ (ಚುನಾವಣೆ) ನಿಯಮಗಳು, 1979ರ ನಿಯಮ 10 ಮತ್ತು ಕರ್ನಾಟಕ ಪೌರಸಭೆಗಳ ನಿಯಮಗಳು 1977ರ ನಿಯಮ 8ರ ಪ್ರಕಾರ ಚುನಾವಣೆ ನಡೆಯುವ ನಗರ ಸ್ಥಳೀಯ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಚುನಾವಣಾ ಅಧಿಕಾರಿಗಳು ಚುನಾವಣಾ ಅಧಿಸೂಚನೆಯನ್ನು ಪ್ರಪತ್ರದ ಮೂಲಕ ಹೊರಡಿಸಬೇಕು ಈ ಹಿಂದೆ ಸೂಚನೆ ನೀಡಿತ್ತು.

Donate Janashakthi Media

Leave a Reply

Your email address will not be published. Required fields are marked *