ಗ್ರಾಮ ಪಂಚಾಯಿತಿ ನೌಕರರಿಗೆ ಕನಿಷ್ಠ ವೇತನ ನಿಗದಿಗೆ ಆಗ್ರಹ

ಬೆಂಗಳೂರು: ಗ್ರಾಮ ಪಂಚಾಯಿತಿ ನೌಕರರಿಗೆ ಕನಿಷ್ಠ ವೇತನ ನಿಗದಿಪಡಿಸಬೇಕು, ನಮ್ಮನ್ನು ಸರಕಾರಿ ನೌಕರರು ಎಂದು ಪರಿಗಣಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತಿ ನೌಕರರ ಸಂಘ(ಸಿಐಟಿಯು) ವತಿಯಿಂದ ನೌಕರರು ಧರಣಿ ನಡೆಸಿದರು.

ಬೆಂಗಳೂರು ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ರಾಜ್ಯದ ವಿವಿದೆಡೆಗಳಿಂದ ಆಗಮಿಸಿದ ಸಾವಿರಾರು ಸಂಖ್ಯೆಯ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಸಂಘದ ರಾಜ್ಯ ಅಧ್ಯಕ್ಷ ಎಂ ಬಿ ನಾಡಗೌಡ ಮಾತನಾಡಿ, ಗ್ರಾಮ ಪಂಚಾಯತ್‌ಗಳಲ್ಲಿ ಕಾರ್ಯನಿರ್ವಹಿಸುವವರನ್ನು ಸರ್ಕಾರಿ ನೌಕರರು ಎಂದು ಪರಿಗಣಿಸಬೇಕು. ಕರ ವಸೂಲಿಗಾರ, ಕ್ಲರ್ಕ್, ಡಾಟಾ ಎಂಟ್ರಿ ಆಪರೇಟರ್ ನಿರಗಂಟಗಳು, ಜವಾನ, ಸ್ವಚ್ಛತಾ ಕೆಲಸಗಾರರಿಗೆ ಕನಿಷ್ಠ ವೇತನ ರೂ. 25 ಸಾವಿರ ನಿಗದಿಪಡಿಸಬೇಕೆಂದು ಆಗ್ರಹಿಸಿದರು.

ಕರ್ನಾಟಕ ರಾಜ್ಯ ಗ್ರಾಮ ಪಂಚಾಯತಿ ನೌಕರರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ. ರಾಮಕೃಷ್ಣ ಮಾತನಾಡಿ, 2016ನೇ ಸಾಲಿನಲ್ಲಿ ಕರ ವಸೂಲಿಗಾರರು, ಕ್ಲರ್ಕ್‌, ಕ್ಲರ್ಕ್‌ ಕಂ ಡಾಟಾ ಎಂಟ್ರಿ ಆಪರೇಟರ್ ಗಳಿಗೆ ರೂ. 12,122, ಪಂಪ್‌ ಆಪರೇಟರ್, ವಾಟರ್‌ಮನ್‌ಗಳಗೆ ರೂ. 10,588. ಜವಾನ – ರೂ.10,010, ಸ್ವಚ್ಚತ್ತಾ ಕೆಲಸಗಾರರಿಗೆ  ರೂ. 12,870. ಕನಿಷ್ಠ ವೇತನ ನಿಗದಿಪಡಿಸಲಾಗಿದೆ. ನಮ್ಮ ಬೇಡಿಕೆ ಇರುವುದು, 2006ರ ರಾಜ್ಯದ ಸರಾಸರಿ ಗ್ರಾಹಕ ಬೆಲೆ ಸೂಚ್ಯಂಕದ ಅನುಗುಣವಾಗಿ ಗ್ರಾಮ ಪಂಚಾಯಿತಿಯಲ್ಲಿ ದುಡಿಮೆ ಮಾಡುತ್ತಿರುವ ಕರ ವಸೂಲಿಗಾರರು, ಕ್ಲರ್ಕ್, ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್‌ ಗಳಿಗೆ ರೂ. 38,021.68, ಪಂಪ್ ಆಪರೇಟರ್, ವಾಟರ್‌ಮನ್‌ಗಳಿಗೆ ರೂ. 33,006.50, ಜವಾನ – ರೂ. 28,750, ಸ್ವಚ್ಚತ್ತಾ ಕೆಲಸಗಾರರಿಗೆ ರೂ. 25 ಸಾವಿರ ನೀಡಬೇಕೆಂಬುದು ಸಂಘಟನೆಯ ಒತ್ತಾಯವಾಗಿದೆ ಎಂದರು.

ಕನಿಷ್ಟ ವೇತನ ಹೆಚ್ಚಳ ಮಾಡಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ಪ್ರತಿಭಟನೆಯಲ್ಲಿ ಸಂಘಟನೆಯ ರಾಜ್ಯಾಧ್ಯಕ್ಷ ಮಂಟನಗೌಡ, ರಾಜ್ಯ ಖಜಾಂಚಿ ಆರ್‌.ಎಸ್‌. ಬಸವರಾಜ, ಮುಖಂಡರಾದ ಗೋಪಾಲಕೃಷ್ಣ ಅರಳಿಹಳ್ಳಿ,  ಪಿಆರ್‌ ಭರತ್‌, ಸಿಐಟಿಯು ರಾಜ್ಯ ಕಾರ್ಯದರ್ಶಿ ಎಚ್‌ಎಸ್‌ ಸುನಂದ, ಜನವಾದಿ ಮಹಿಳಾ ಸಂಘದ ಪ್ರಧಾನ ಕಾರ್ಯದರ್ಶಿ ಸೇರಿದಂತೆ ಸಾವಿರಾರು ನೌಕರರು ಇದ್ದರು.

ಇಲ್ಲಿ ಕ್ಲಿಕ್‌ ಮಾಡಿ : ಜನಶಕ್ತಿ ಮೀಡಿಯಾ ವಾಟ್ಸ್‌ಪ್‌ ಗುಂಪು ಸೇರಲು ಈ ಲಿಂಕ್‌ ಕ್ಲಿಕ್‌ ಮಾಡಿ

 

Donate Janashakthi Media

Leave a Reply

Your email address will not be published. Required fields are marked *