ಗ್ರಾಮ ಪಂಚಾಯಿತಿ ಸಿಬ್ಬಂದಿ ಮೇಲೆ ಕ್ಷುಲ್ಲಕ ಕಾರಣಕ್ಕೆ ಹಲ್ಲೆ: ಗ್ರಾಮ ಪಂಚಾಯಿತಿ ನೌಕರರಿಂದ ಪ್ರತಿಭಟನೆ

ಗದಗ : ಕ್ಷುಲ್ಲಕ ಕಾರಣಕ್ಕೆ ಗ್ರಾಪಂ ನೌಕರನ ಮೇಲೆ, ಹಲ್ಲೆ ನಡೆಸಿದ ಘಟನೆ ಹಳ್ಳಿಕೇರಿ ಗ್ರಾಮ ಪಂಚಾಯಿತಿಯಲ್ಲಿ ನಡೆದಿದೆ. ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಹಳ್ಳಿಕೇರಿ ಗ್ರಾಮ ಪಂಚಾಯಿತಿಯ  ಕಾರ್ತಿಕ್‌ ಎಂಬುವವರಿಂದ ಕ್ಷುಲ್ಲಕ ಕಾರಣಕ್ಕೆ ಹಲ್ಲೆ ನಡೆಸಿರೋದಾಗಿ ಆರೋಪಿಸಲಾಗಿದೆ.

ಬಿಲ್‌ ಕಲೆಕ್ಟರ್‌ ಹನುಮಂತ ಹೊಸಮನಿ ಎಂಬುವರ ಮೇಲೆ ಹಲ್ಲೆ ಮಾಡಲಾಗಿದೆ.  ಜಿಲ್ಲೆಯಾದ್ಯಂತ ನಿರಂತರವಾಗಿ ಪಂಚಾಯಿತಿ ಸಿಬ್ಬಂದಿಗಳ ಮೇಲೆ ಹಲ್ಲೆ ದೌರ್ಜನ್ಯಗಳು ನಡೆಯುತ್ತಿವೆ.  ಇದರಿಂದ ಗ್ರಾಪಂ ನೌಕರರು ಬೇಸತ್ತು ಹೋಗಿದ್ದಾರೆ.  ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಹಲ್ಲೆ ಮಾಡಿದವರ ವಿರುದ್ಧ ಕಾನೂನು ಕ್ರಮ ಕೈಗೊಂಡು ಬಂಧಿಸಿ ಶಿಕ್ಷೆಕೊಡಬೇಕು ಎಂದು ಮುಂಡರಗಿ ತಾಲೂಕು ಪಂಚಾಯಿತಿ ಎದುರು ಕರ್ನಾಟಕ ರಾಜ್ಯ ಗ್ರಾಪಂ ನೌಕರರ ಸಂಘಟನೆಯ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

ಜಿಲ್ಲೆಯಾದ್ಯಂತ ಪದೇ ಪದೇ ಪಂಚಾಯಿತಿ ಸಿಬ್ಬಂದಿಗಳ ಮೇಲೆ ಹಲ್ಲೆ ದೌರ್ಜನ್ಯಗಳು ನಡೆಯುತ್ತಿದ್ದು ಇದರಿಂದ  ಕೆಲಸದಲ್ಲಿ ಸ್ಥಳದಲ್ಲಿ ನೌಕರರಿಗೆ ಭಯದ ವಾತಾವರಣ ಸೃಷ್ಟಿಯಾಗಿದೆ ಎಂದು ಪ್ರತಿಭಟನೆಕಾರರು ಆಕ್ರೋಶ ವ್ಯಕ್ತಪಡಿಸಿದರು.

ಗ್ರಾಮ ಪಂಚಾಯಿತಿ ನೌಕರರ ಸಂಘದ ಮುಖಂಡರು, ನೌಕರರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರೆ, ಕ್ರಮ ಜರುಗಿಸದೇ ಇದ್ದಲ್ಲಿ ಪ್ರತಿಭಟನೆಯನ್ನು ತೀವ್ರಗೊಳಿಸುವುದಾಗಿ ಎಚ್ಚರಿಸಿದ್ದಾರೆ.

 

Donate Janashakthi Media

Leave a Reply

Your email address will not be published. Required fields are marked *