ಬೆಂಗಳೂರು: ದೀಪಾವಳಿ ಹಬ್ಬದ ಆಚರಣೆಯ ಸಂದರ್ಭದಲ್ಲಿ ಹಸಿರು ಪಟಾಕಿ ಬಳಸಬೇಕು ಎಂದು ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ.
ಅತ್ತಿಬೆಲೆಯಲ್ಲಿನ ಪಟಾಕಿ ದುರುಂತದಲ್ಲಿ 17 ಜನ ಸಾವನ್ನಪ್ಪಿದ ಬಳಿಕ, ರಾಜ್ಯ ಸರ್ಕಾರ ಈ ಬಾರಿಯ ದೀಪಾವಳಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ.
ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಮಾರ್ಗಸೂಚಿಯನ್ನು ಉಲ್ಲೇಖಿಸಿ ಈ ಸುತ್ತೋಲೆ ಹೊರಡಿಸಿರುವ ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರು, ಎಲ್ಲ ಮಹಾನಗರಪಾಲಿಕೆಗಳು, ಸ್ಥಳೀಯ ಸಂಸ್ಥೆಗಳು ಕಡ್ಡಾಯವಾಗಿ ಅನುಸರಿಸಬೇಕು ಎಂದು ಸೂಚಿಸಿದ್ದಾರೆ.
ಸುಪ್ರೀಂ ಕೋರ್ಟ್ ಆದೇಶಗಳನ್ನು ಜಿಲ್ಲಾಧಿಕಾರಿಗಳು ಪೊಲೀಸ್ ವರಿಷ್ಠಾಧಿಕಾರಿಗಳು ಮತ್ತು ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ತಮ್ಮ ವ್ಯಾಪ್ತಿಯ ಅಧೀನ ಅಧಿಕಾರಿಗಳ ಗಮನಕ್ಕೆ ತಂದು, ಆದೇಶ ಪಾಲಿಸಲು ಕ್ರಮ ತೆಗೆದುಕೊಳ್ಳಬೇಕು.ಜಿಲ್ಲಾಧಿಕಾರಿಗಳು ಕಾರ್ಯಪಡೆಗಳನ್ನು ರಚಿಸಿ ಪಟಾಕಿ ಮಾರಾಟಗಾರರ ಗೋದಾಮುಗಳನ್ನು ಪರಿಶೀಲಿಸಬೇಕು. ಹಸಿರು ಪಾಟಕಿ ಹೊರತುಪಡಿಸಿ ಇತರ ಯಾವುದೇ ನಿಷೇಧಿತ ಪಟಾಕಿಗಳನ್ನು ದಾಸ್ತಾನು ಮಾಡಿದ್ದರೆ ಗೋದಾಮು ಮುಟ್ಟಗೋಲು ಹಾಕಬೇಕು. ಸಂಬಂಧಿಸಿದ ವ್ಯಕ್ತಿಗಳ ಮೇಲೆ ಕ್ರಿಮಿನಲ್ ಮೊಕದ್ದಮೆ ಹೂಡಬೇಕು ಎಂದೂ ಸುತ್ತೋಲೆಯಲ್ಲಿ ವಿವರಿಸಲಾಗಿದೆ.
ಇದನ್ನೂ ಓದಿ: ಪಟಾಕಿ ದುರಂತ : ಹಿಂದೆಯೂ ನಡೆದಿತ್ತು ,ರಾಜಕಾರಣಿಗಳ ಪ್ರಭಾವ ಬಳಸಿ ಮತ್ತೆ ಓಪನ್ ಮಾಡಿಸಿದ್ದ ಮಾಲೀಕ!
ಅಧಿಕೃತ ಪರ್ಮನೆಂಟ್ ಲೈಸೆನ್ಸ್ ಹೊಂದಿದವರು ಮಾತ್ರ ಪಟಾಕಿ ಮಾರುವುದಕ್ಕೆ ಅವಕಾಶ ನೀಡಿದೆ. ತಾತ್ಕಾಲಿಕ ಅನುಮತಿ ಪಡೆದು ಮೈದಾನಗಳಲ್ಲಿ ಪಟಾಕಿ ಅಂಗಡಿ ಹಾಕುತ್ತಿದ್ದವರಿಗೆ ಸರ್ಕಾರ ಅನುಮತಿ ನೀಡಿಲ್ಲ. ಮೈದಾನಗಳಲ್ಲಿ ಪಟಾಕಿ ಮಾರಾಟ ಸಂಪೂರ್ಣ ನಿಷೇಧಿಸಲಾಗಿದೆ. ಗ್ರೀನ್ ಪಟಾಕಿಗಳನ್ನು ಮಾರುವುದಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ಎಲ್ಲ ಹಸಿರು ಪಟಾಕಿಗಳ ಮೇಲೆ ಮತ್ತು ಅವುಗಳ ಪ್ಯಾಕೆಟಿನ ಮೇಲೆ ಹಸಿರು ಪಟಾಕಿಯ ಚಿಹ್ನೆ ಮತ್ತು ಕ್ಯೂಆರ್ ಕೋಡ್ ಇರುತ್ತದೆ. ಸಂಬಂಧಪಟ್ಟ ಜಿಲ್ಲೆಯ ಪರಿಸರ ಅಧಿಕಾರಿಗಳಿಂದ ಈ ಚಿಹ್ನೆಯ ಬಗ್ಗೆ ಖಚಿತಪಡಿಸಿಕೊಳ್ಳಬೇಕು. ಚಿಹ್ನೆ ಇಲ್ಲದ ಯಾವುದೇ ಪಟಾಕಿ ಹಸಿರು ಪಟಾಕಿಯಾಗಿರುವುದಿಲ್ಲ. ಅವುಗಳನ್ನು ಮುಟ್ಟುಗೋಲು ಹಾಕಬೇಕು,ಯಾವುದೇ ಹಸಿರು ಪಟಾಕಿಗಳ ಪ್ಯಾಕೆಟ್‌ಗಳನ್ನು ರ‍್ಯಾಂಡಮ್ ಆಗಿ ಸಂಗ್ರಹಿಸಿ ನಿಗದಿತ ವಿಧಿ ವಿಧಾನಗಳ ಮೂಲಕ ಅವುಗಳ ಶಬ್ದದ ಮಟ್ಟ ಮಾಪನ ಮಾಡಬೇಕು. ನಿಗದಿತ ಗುಣಮಾಪನಗಳಿಗೆ ಸರಿಹೊಂದದೇ ಇದ್ದರೆ ತಕ್ಷಣ ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ತಿಳಿಸಲಾಗಿದೆ.
ಪಟಾಕಿ ಮಳಿಗೆಗಳನ್ನ ಪರಿಶೀಲಿಸಿ, ಗ್ರೀನ್ ಪಟಾಕಿ ಹೊರತುಪಡಿಸಿ ಬೇರೆ ಪಟಾಕಿ ಇದ್ದರೇ ಮುಟ್ಟುಗೋಲು ಹಾಕಿಕೊಂಡು ಕ್ರಮಿನಲ್ ಪ್ರಕರಣ ದಾಖಲಿಸಲಾಗುತ್ತದೆ. ಗ್ರೀನ್ ಪಟಾಕಿಗಳ ಪ್ಯಾಕೆಟ್ಗಳ ಮೇಲೆ ಚಿಹ್ನೆ ಇದ್ದು, ಕ್ಯುಆರ್ ಕೋಡ್ ಸಹ ಇರುತ್ತೆ.
ವಿಡಿಯೋ ನೋಡಿ: ಪ್ಯಾಲಿಸ್ತೇನ್ ಪರ ಪ್ರತಿಭಟನೆ ಮಾಡುವುದು ಅಪರಾಧವೆ? Janashakthi Media