ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್‌ನ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಗೃಹಲಕ್ಷ್ಮಿ ಯೋಜನೆಯ ಮೂಲಕ ಮುಂದಿನ ಐದು ವರ್ಷಗಳ ಕಾಲ ಮನೆ ಒಡತಿಯ ಬ್ಯಾಂಕ್ ಖಾತೆಗೆ ಪ್ರತಿ ತಿಂಗಳು 2,000 ರೂ. ಜಮೆ ಮಾಡಲಾಗುವುದು ಎಂದು ಘೋಷಿಸಿದ್ದಾರೆ. ಮುಂದಿನ ಆಗಸ್ಟ್ 15ರಿಂದ ಪ್ರತಿ ತಿಂಗಳು ರಾಜ್ಯದಲ್ಲಿರುವ ಬಿಪಿಎಲ್ ಹಾಗೂ ಎಪಿಎಲ್ ಕುಟುಂಬಗಳ ಮನೆ ಒಡತಿಯ ಖಾತೆಗೆ 2000 ರೂಪಾಯಿ ಹಣ ವರ್ಗಾವಣೆಯಾಗಲಿದೆ. ಆದರೆ ಫಲಾನುಭವಿಗಳಾಗಲು ಯಾವ್ಯಾವ ದಾಖಲೆ ಸಲ್ಲಿಸಬೇಕು ಎಂಬುವುದರ ಬಗ್ಗೆ ಗೃಹಲಕ್ಷ್ಮೀ ಯೋಜನೆಯ ಅರ್ಜಿ ನಮೂನೆ ಬಿಡುಗಡೆ ಮಾಡಲಾಗಿದೆ.
ಈಗಾಗಲೇ ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದು, ಯೋಜನೆಯ ಫಲಾನುಭವಿಯಾಗಲು ಅರ್ಜಿ ಸಲ್ಲಿಸುವ ಮೊದಲು ಮನೆ ಯಜಮಾನಿ ಯಾರೆಂಬುದನ್ನು ಮೊದಲು ಸ್ಪಷ್ಟಪಡಿಸಬೇಕು ಅವರಲ್ಲಿ ಬ್ಯಾಂಕ್ ಖಾತೆ ಹಾಗೂ ಆಧಾರ್ ಕಾರ್ಡ್ ಕಡ್ಡಾಯವಾಗಿ ಇರಬೇಕು ಎಂದು ಹೇಳಿದ್ದಾರೆ. ಅರ್ಜಿಯಲ್ಲಿ ಮೊದಲಿಗೆ ಹೆಸರು, ಆಧಾರ್ ಕಾರ್ಡ್, ವೋಟರ್ ಐಡಿ, ಪಡಿತರ ಚೀಟಿ, ಉದ್ಯೋಗ, ಪತಿಯ ಹೆಸರು, ಪತಿಯ ಆಧಾರ್ ಹಾಗೂ ವೋಟರ್ ಐಡಿ ಮುಂತಾದ ಮಾಹಿತಿಯನ್ನು ಕೇಳಲಾಗಿದೆ. ಅದರೊಂದಿಗೆ ಜಾತಿ, ಆಧಾರ್ ಜತೆ ಲಿಂಕ್ ಆಗಿರುವ ಮೊಬೈಲ್ ನಂಬರ್ ಬ್ಯಾಂಕ್ ಖಾತೆ ಮಾಹಿತಿಯನ್ನು ನಮೂದಿಸಲು ಜಾಗ ನೀಡಲಾಗಿದೆ. ಇತರೆ ಮೊಬೈಲ್ ನಂಬರ್, ಬ್ಯಾಂಕ್ ಖಾತೆಯ ಸಂಖ್ಯೆ, ಲಗತ್ತಿಸಬೇಕಾದ ದಾಖಲೆಗಳು.
ಇದನ್ನೂ ಓದಿ:ಕಾಂಗ್ರೆಸ್ 5 ‘ಗ್ಯಾರಂಟಿ’ ಜಾರಿ: ಯೋಜನೆಗಳ ಲಾಭ ಪಡೆಯೋದು ಹೇಗೆ? ಇಲ್ಲಿದೆ ಸಮಗ್ರ ವಿವರ!
ಈ ಅರ್ಜಿಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ – ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭಾವಚಿತ್ರ ಇರುವ ನಮೂನೆ. ಹೀಗೆ ಭೌತಿಕ ಅರ್ಜಿ ಸಲ್ಲಿಕೆ ಮಾದರಿಯನ್ನು ಬಿಡುಗಡೆ ಮಾಡಿದ ಮಹಿಳಾ & ಮಕ್ಕಳ ಅಭಿವೃದ್ಧಿ ಇಲಾಖೆ ಇನ್ನು ಕಂದಾಯ, ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಹಿರಿಯ ಅಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ ‘ಗೃಹಲಕ್ಷ್ಮೀ’ ಜಾರಿ ಸಂಬಂಧ ಜೂನ್ 08 (ಇಂದು) ಮಧ್ಯಾಹ್ನ 12.30ಕ್ಕೆ ಸಭೆ ನಡೆಸಲಿದ್ದಾರೆ.