ಜುಲೈ 19 ರಿಂದ ಗೃಹಲಕ್ಷ್ಮೀ ಯೋಜನೆ ಅರ್ಜಿಸಲ್ಲಿಕೆ ಪ್ರಾರಂಭ

ಬೆಂಗಳೂರು: ಕಾಂಗ್ರೆಸ್‌ ಘೋಷಿದ್ದ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನಗೆ ಅರ್ಜಿ ಸಲ್ಲಿಸುವ ಪ್ರಕ್ರಿಯಿಯು ಜುಲೈ 19 ರಿಂದ ಪ್ರಾರಂಭವಾಗಲಿದೆ ಎಂದು ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದ್ದಾರೆ.ನಗರದಲ್ಲಿ ಸುದ್ದಿಗೋಷ್ಠಿಯೊಂದಿಗೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ರವರು ಬಾಪೂಜಿ ಸೇವಾ ಕೇಂದ್ರ ಅಥವಾ ಗ್ರಾಮ ಒನ್‌ ,ಕರ್ನಾಟಕ ಒನ್‌, ಬಿಬಿಎಂಪಿ ವಾರ್ಡ್‌ ಕಚೇರಿ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದರು.

ಇದನ್ನೂ ಓದಿ:ಗೃಹ ಲಕ್ಷ್ಮೀ ನೋಂದಣಿಗೆ: 500 ಮಹಿಳೆಯರಿಗೆ ಒಬ್ಬ ಪ್ರಜಾಪ್ರತಿನಿಧಿ ನೇಮಕ

ಅರ್ಜಿ ಸಲ್ಲಿಕೆಗೆ ಆಧಾರ್‌ ಕಾರ್ಡ್‌ ಲಿಂಕ್‌ ಆದ ಖಾತೆಗೆ ನೇರವಾಗಿ ವರ್ಗಾವಣೆಯಾಗಲಿದೆ ಎಂದು ಮಾಹಿತಿ ನೀಡಿದ್ದಾರೆ. ಕೇಂದ್ರ ಕಾಂಗ್ರೆಸ್‌ ನಾಯಕರಿಗೆ ನೀಡಲಾಗಿದೆ.ನಾಯಕರ ಒಪ್ಪಿಗೆ ಮೇರೆಗೆ ಆಗಸ್ಟ್‌ 17 ರಂದೆ ಖಾತೆಗೆ ಹಣ ವರ್ಗಾವಣೆಯಾಗಲಿದೆ. ಇಲ್ಲದಿದ್ದರೇ ಆಗಸ್ಟ್‌ 19 ಕ್ಕೆ ಹಣ ಜಮಾವಣೆಯಾಗಲಿದೆ ಎಂದು ಹೇಳಿದ್ದಾರೆ.  ಸೋಮವಾರ ದಂದು ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ತಿಳಿಸಿದರು.

ರಾಷ್ಟ್ರೀಯ ನಾಯಕರಿಂದ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡಲಾಗುವುದು.ರಾಷ್ಟ್ರೀಯ ನಾಯಕರಿಗೆ ಹೀಗಾಗಲೇ ಪತ್ರ ಬರೆಯಲಾಗಿದೆ. ನಾಯಕರು ಒಪ್ಪಿಕೊಂಡರೆ 17 ರಂದು ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಉದ್ಘಾಟನೆ ಮಾಡಲಾಗುವುದು.ಸೋನಿಯಾ ಗಾಂಧಿ ಅವರಿಗೆ ಅಹ್ವಾನ ನೀಡಲಾಗಿದೆ.ಇಂದು ಮಧ್ಯಾಹ್ನ ರಾಷ್ಟ್ರೀಯ ನಾಯಕರ ನಿರ್ಧಾರ ಖಚಿತವಾಗುತ್ತದೆ. ಜುಲೈ 19 ರಂದು ನಮ್ಮ ಪಕ್ಷದ ನಾಯಕರು ಸಮಯ ನೀಡಲಿಲ್ಲವೆಂದರೆ,ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರಿಂದ ಚಾಲನೆ ನೀಡಲಾಗುವುದು ಎಂದು ತಿಳಿಸಿದರು.ಅರ್ಜಿ ಸಲ್ಲಿಕೆಗೆ ಯಾವ ಕೊನೆಯ ದಿನಾಂದ ನಿಗದಿ ಮಾಡಿಲ್ಲ ಗೃಹಲಕ್ಷ್ಮೀ ಯೋಜನೆ ಅಡಿಯಲ್ಲಿ ಮನೆ ಯಜಮಾನಿಗೆ ತಿಂಗಳಿಗೆ 2000 ರೂ ಹಣ ಖಾತೆಗೆ ಜಮಾ ಆಗಲಿದೆ.ಎಂದು ಮಕ್ಕಳ ಹಾಗೂ ಮಹಿಳಾ ಕಲ್ಯಾಣ ಸಚಿಬೆ ಲಕ್ಷ್ಮೀ ಹೆಬ್ಬಾಳ್ಕರ್‌ ರವರು ತಿಳಿಸಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *