ಬೆಂಗಳೂರು : ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆಯ 5 ಗ್ಯಾರಂಟಿ ಯೋಜನೆಗಳ ಪೈಕಿ ಒಂದಾದ ಗೃಹ ಜ್ಯೋತಿ ಯೋಜನೆ ಒಂದು ವರ್ಷ ಪೂರೈಸಿದೆ.
ರಾಜ್ಯದಲ್ಲಿ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಲವು ಅಡಚಣೆಗಳ ನಡುವೆಯೂ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ.
5 ಗ್ಯಾರಂಟಿ ಯೋಜನೆಗಳ ಪೈಕಿ ಪ್ರತಿ ಮನೆಗೆ 200 ಯೂನಿಟ್ ವಿದ್ಯುತ್ ಉಚಿತವಾಗಿ ನೀಡುವ ಗೃಹ ಜ್ಯೋತಿ ಯೋಜನೆಗೆ ಆಗಸ್ಟ್ 4ಕ್ಕೆ ಒಂದು ವರ್ಷ ಪೂರೈಸಿದೆ.
ಕಳೆದ ಒಂದು ವರ್ಷದಲ್ಲಿ ಗೃಹಜ್ಯೋತಿ ಯೋಜನೆಗೆ 8,100 ಕೋಟಿ ರೂ, ಮೊತ್ತದ ಉಚಿತ ವಿದ್ಯುತ್ ಪೂರೈಕೆ ಮಾಡಲಾಗಿದ್ದು, 11.65 ಕೋಟಿ ಕುಟುಂಬಗಳಿಗೆ ಇದರ ಲಾಭ ದೊರೆತಿದೆ.
85 ಲಕ್ಷ ಬಳಕದಾರರು ಶೂನ್ಯ ಬಿಲ್ಗೆ ಅರ್ಹತೆ ಪಡೆದಿದ್ದು, ಉಳಿದ ಕುಟುಂಬಗಳು ನಿಗದಿತಗಿಂತ ಹೆಚ್ಚು ಯೂನಿಟ್ ಬಳಸಿದ್ದರಿಂದ ಅಲ್ಪ ಮೊತ್ತದ ದಂಡ ಅಥವಾ ಶುಲ್ಕ ಪಾವತಿಸುತ್ತಿದ್ದಾರೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.