‘ಗೃಹ ಲಕ್ಷ್ಮೀ’ ಯೋಜನೆ ಎಂದಿಗೂ ಬಂದ್ ಆಗುವುದಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್‌ ಸ್ಪಷ್ಟನೆ

ಕಳೆದೆರಡು ತಿಂಗಳಿಂದ ಬರದಿರುವ ಗೃಹಲಕ್ಷ್ಮಿ ಯೋಜನೆ ಹಣ ಒಂದೇ ಬಾರಿ ಬ್ಯಾಂಕ್ ಖಾತೆಗೆ ಪಾವತಿ
ಬೆಂಗಳೂರು: ಪ್ರತಿ ತಿಂಗಳೂ ಮಹಿಳೆಯರಿಗೆ 2 ಸಾವಿರ ರೂ ಪಾವತಿಸುವ ‘ಗೃಹ ಲಕ್ಷ್ಮೀ’ ಯೋಜನೆ ಎಂದಿಗೂ ಬಂದ್ ಆಗುವುದಿಲ್ಲ. ಇದು ನಿತ್ಯ, ಸತ್ಯ, ನಿರಂತರ ವಾಗಿದೆ. ಬಾಕಿ ಇರುವ 2 ತಿಂಗಳ ಹಣ ಒಂದೇ ಸಲ ಖಾತೆಗೆ ಜಮೆ ಆಗಲಿದೆ ಎಂದು ಸುದ್ದಿಗಾರರೊಂದಿಗೆ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್‌, ಸ್ಪಷ್ಟಪಡಿಸಿದ್ದಾರೆ.

ಗೃಹಲಕ್ಷ್ಮೀ ಯೋಜನೆ ನಿತ್ಯ, ಸತ್ಯ, ನಿರಂತರವಾದುದು. ಕಳೆದ 2 ತಿಂಗಳಿನ ಬಾಕಿ ಹಣವನ್ನು ಒಂದೇ ಬಾರಿ ಖಾತೆಗೆ ಜಮಾ ಮಾಡಲಾಗುವುದು. ಲಿಂಗತ್ವ ಅಲ್ಪಸಂಖ್ಯಾತರಿಗೆ 3 ತಿಂಗಳ ಹಿಂದಷ್ಟೇ ಅರ್ಜಿ ಹಾಕಲು ಅವಕಾಶ ನೀಡಲಾಗಿತ್ತು. ಅವರಿಗೂ ಸಹ ಒಮ್ಮೆಲೇ ಹಣ ಪಾವತಿಯಾಗಲಿದೆ ಎಂದು ವಿವರಿಸಿದರು.

ಇದನ್ನೂ ಓದಿ: ಎಂ. ಜಿ. ಹೆಗಡೆಯವರ ಆತ್ಮಕಥೆ “ಚಿಮಣಿ ಬೆಳಕಿನಿಂದ” ಸೆ.22ರಂದು ಬಿಡುಗಡೆ

ಅಂಗನವಾಡಿಗಳಲ್ಲಿ ಮುಂದಿನ ತಿಂಗಳಿಂದ ಗಟ್ಟಿ ಬೆಲ್ಲ ವಿತರಣೆ: ಪಾಲಕರು ನಿರಾಕರಿಸಿದ ಕಾರಣ ಸಾವಯವ(ಆಗ್ರ್ಯಾನಿಕ್) ಬೆಲ್ಲದ ಬದಲಿಗೆ ಗಟ್ಟಿ ಬೆಲ್ಲವನ್ನೆ ಅಂಗನವಾಡಿ ಕೇಂದ್ರಗಳಲ್ಲಿ ನೀಡಲಾಗುವುದು. ಒಂದೂವರೆ ವರ್ಷದ ಹಿಂದಿನಿಂದಲೇ ಅಂಗನವಾಡಿ ಕೇಂದ್ರಗಳಲ್ಲಿ ಸಾವಯವ ಬೆಲ್ಲ ನೀಡಲಾಗುತ್ತಿತ್ತು. ಆದರೆ, ಪಾಲಕರು ವಿರೋಧಿಸಿದ ಕಾರಣ, ಅ.1ರಿಂದಲೇ ಗಟ್ಟಿ ಬೆಲ್ಲ ನೀಡುವುದಾಗಿ ಅವರು ತಿಳಿಸಿದರು.

ಕರ್ನಾಟಕದಲ್ಲಿರುವ 139 ಎಂಎಸ್‍ಪಿಟಿಸಿಗಳನ್ನು ಉನ್ನತೀಕರಿಸಲು ಹೊರಟ್ಟಿದ್ದೇವೆ. ಉತ್ತಮ ಲ್ಯಾಬ್ ಸೌಲಭ್ಯಗಳನ್ನು ಮಾಡಲು ಸಿದ್ಧತೆ ಮಾಡಿಕೊಂಡಿದ್ದೇವೆ. ಸುಪ್ರೀಂಕೋರ್ಟ್ ನಿರ್ದೇಶನದ ಮೇರೆಗೆ ಚೆನ್ನೈ ಮೂಲದ ಸಂಸ್ಥೆಯಿಂದ ಅಂಗನವಾಡಿ ಕೇಂದ್ರಗಳಿಗೆ ಆಹಾರ ಪೂರೈಕೆಯಾಗುತ್ತಿದೆ. 15 ವರ್ಷಗಳಿಂದಲೂ ಇದು ನಡೆದುಕೊಂಡು ಬರುತ್ತಿದೆ. ಇನ್ನು ಮುಂದೆ ಜಿಲ್ಲಾ ಮಟ್ಟದಲ್ಲೆ ಪೌಡರ್ ತಯಾರಿಸಲು ಸಿದ್ಧತೆ ಮಾಡಿಕೊಂಡಿದ್ದು, ಇದಕ್ಕೆ 200 ಕೋಟಿ ರೂ.ವೆಚ್ಚ ಮಾಡಲಾಗುತ್ತದೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

ಮಹಿಳೆಯರ ರಕ್ಷಣೆಗೆ ಸಮಿತಿ ರಚನೆಯಾಗಲಿ: ಚಿತ್ರರಂಗದ ಕಲಾವಿದೆಯರ ಜೊತೆ ಮಹಿಳಾ ಆಯೋಗ ಸಭೆ ಆಯೋಜಿಸಿರುವ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಖಂಡಿತಾ ಸಮಿತಿ ರಚನೆ ಆಗಬೇಕು. ನಾನು ಕೂಡ ಸಮಿತಿ ರಚನೆ ಆಗಲಿ ಅಂತ ಹೇಳುತ್ತೇನೆ. ಮುಖ್ಯಮಂತ್ರಿ ಈಗಾಗಲೇ ಮಾಹಿತಿ ಪಡೆದಿದ್ದಾರೆ. ಚಿತ್ರರಂಗ ಅಷ್ಟೇ ಅಲ್ಲ, ಯಾವ ಕ್ಷೇತ್ರದಲ್ಲೂ ಮಹಿಳೆಯರಿಗೆ ದೌರ್ಜನ್ಯ ಆಗಬಾರದು. ಈ ಬಗ್ಗೆ ನನ್ನ ಬಳಿ ಯಾವ ನಟಿಯರೂ ಬಂದು ಮಾತನಾಡಿಲ್ಲ ಎಂದು ಹೇಳಿದರು

ಇದನ್ನೂ ನೋಡಿ: ಸಿಜೆಐ ಮನೆಯ ಪೂಜೆಗೆ ಪ್ರಧಾನಿ ಮೋದಿ ಭಾಗವಹಿಸಿದ್ದು ಸರಿಯೇ? | ಚಂದ್ರಪ್ರಭ ಕಠಾರಿ Janashakthi Media

Donate Janashakthi Media

Leave a Reply

Your email address will not be published. Required fields are marked *