ಕಲಬುರಗಿ: ಜಿಎಸ್‌ಟಿ ಹೇರಿಕೆ ವಿರೋಧಿಸಿ ಮಹಿಳೆಯರು ರಸ್ತೆಯಲ್ಲೇ ರೊಟ್ಟಿ ಮಾಡಿ ಆಕ್ರೋಶ ವ್ಯಕ್ತಪಡಿಸಿ, ವಿನೂತನವಾಗಿ ಪ್ರತಿಭಟನೆ ನಡೆಸಿದ ಘಟನೆ ಕಲಬುರಗಿಯಲ್ಲಿ ನಡೆದಿದೆ. ರಾಜ್ಯದಲ್ಲಿ ಬೆಲೆ ಏರಿಕೆ ಬೆನ್ನಲ್ಲೆ, ಆಹಾರ ಪಾದಾರ್ಥಗಳ ಮೇಲೆ ಜಿಎಸ್‌ಟಿ ಹಾಕಿ ಜನರನ್ನು ಬೀದಿಗೆ ತಳ್ಳಿದೆ ಎಂದು ಪ್ರತಿಭಟನೆಕಾರರು ಆಕ್ರೋಶ ವ್ಯಕ್ತ ಪಡಿಸಿದರು.
ಅಖಿಲ ಭಾರತೀಯ ಮಹಿಳಾ ಒಕ್ಕೂಟದ ನೇತೃತ್ವದಲ್ಲಿ ನಗರದ ಸರ್ದಾರ್ ವಲ್ಲಭಭಾಯ್ ಪಟೇಲ್ ವೃತ್ತದಲ್ಲಿ ನೂರಾರು ಮಹಿಳೆಯರು ಗ್ಯಾಸ್ ಸಿಲಿಂಡರ್ ತಲೆ ಮೇಲೆ ಹೊತ್ತು ರಸ್ತೆ ಮೇಲೆಯೇ ರೊಟ್ಟಿ ಮಾಡುವ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆ ವೇಳೆ ಮಧ್ಯಪ್ರವೇಶಿಸಿದ ಪೊಲೀಸರು ಮಹಿಳೆಯರನ್ನು ತಡೆದು ಪ್ರತಿಭಟನೆ ನಡೆಸದಂತೆ ಮನವಿ ಮಾಡಿದರು.
ಜಿಎಸ್‌ಟಿ ಹೇರಿಕೆ : ರಸ್ತೆಯಲ್ಲೇ ರೊಟ್ಟಿ ಮಾಡಿ ಆಕ್ರೋಶ ವ್ಯಕ್ತಪಡಿಸಿದ ಮಹಿಳೆಯರು pic.twitter.com/H9YVHggdbd
— Janashakthi Media (@janashakthikw) July 20, 2022