ಬೆಂಗಳೂರು: ರಾಜ್ಯ ಸರ್ಕಾರ ಜಾರಿಗೊಳಿಸಿರುವ ಐದು ಗ್ಯಾರಂಟಿ ಯೋಜನೆಗಳು ಸ್ಥಗಿತಗೊಳ್ಳುವುದಿಲ್ಲ. ಯಥಾಸ್ಥಿತಿಯಲ್ಲಿ ಮುಂದುವರಿಯಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಈಗಾಗಲೇ ಲೋಕಸಭೆ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ರಾಜ್ಯದಲ್ಲಿ 15ರಿಂದ 20 ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲ್ಲುವ ನಿರೀಕ್ಷೆ ಹೊಂದಿತ್ತು. ಆದರೆ, ಒಂದು ಸ್ಥಾನದಿಂದ 9 ಸ್ಥಾನ ಗೆಲ್ಲುವ ಮೂಲಕ ಪಕ್ಷ ಉತ್ತಮ ಸಾಧನೆಯನ್ನೇ ಮಾಡಿದೆ. ಅಲ್ಲದೆ, 2019ಕ್ಕಿಂತ ಈ ಬಾರಿ ಶೇ.14ರಷ್ಟು ಮತ ಗಳಿಕೆ ಹೆಚ್ಚಾಗಿದೆ. ಇದೀಗ ಜನ ಮನ್ನಣೆ ಗ್ಯಾರಂಟಿ ಯೋಜನೆಗಳಿಗೆ ದೊರಕಿಲ್ಲ ಅನ್ನುವ ಕಾರಣಕ್ಕೆ ಕಾಂಗ್ರೆಸ್‌ನ ಕೆಲ ನಾಯಕರು ಅನೌಪಚಾರಿಕವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಗ್ಯಾರಂಟಿ ಯೋಜನೆಗಳ ಕುರಿತಂತೆ ಚರ್ಚೆ ನಡೆಸಿದ್ದಾರೆ ಎಂದು ತಿಳಿಸಿದರು.
ಇದನ್ನು ಓದಿ : ಸಿಎಂ ಸಿದ್ದರಾಮಯ್ಯ ಮತ್ತು ಸಿಗರೇಟಿನ ಕಥೆ
ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲಾಗದು ಎಂದು ನಮ್ಮ ಶಾಸಕರಿಗೆ ಧೈರ್ಯ ತುಂನಿ ಕಳುಹಿಸಿರುವೆ ಎಂದು ತಿಳಿಸಿದರು. ರಾಜ್ಯದ ಎಲ್ಲ ಆರ್ಥಿಕ ಸಂಪನ್ಮಲಗಳನ್ನು ಸರ್ಕಾರ ಗ್ಯಾರಂಟಿ ಯೋಜನೆ ಜಾರಿಗೆ ವ್ಯಯಿಸುತ್ತಿದೆ. ಇಷ್ಟಾಗಿಯೂ ಚುನಾವಣೆಯಲ್ಲಿ ನಿರೀಕ್ಷಿತ ಸಾಧನೆ ಆಗಿಲ್ಲ. ಇದರರ್ಥ, ಸ್ಕೀಂಗಳು ಜನರ ಮನಸ್ಸು ಗೆದ್ದಿಲ್ಲ. ಗ್ಯಾರಂಟಿಗಾಗಿ ಅಭಿವೃದ್ಧಿ ಹತೋಟಿಯಲ್ಲಿಡಲಾಗಿದೆ, ಶಾಸಕರ ಅನುದಾನಕ್ಕೆ ಕತ್ತರಿ ಹಾಕಲಾಗಿದೆ ಎಂದೆಲ್ಲ ವಿಪಕ್ಷ ಅಪಪ್ರಚಾರ ಮಾಡುತ್ತಿದೆ. ಈ ಬಗ್ಗೆ ಹೆಚ್ಚು ಚರ್ಚೆ ಬೇಡ ಯೋಜನೆಗಳು ನಿಲ್ಲುವುದಿಲ್ಲ ಎಂದರು.
ಇದನ್ನು ನೋಡಿ : ಬಿಜೆಪಿ ನಿದ್ದೆ ಗೆಡಿಸಿದ ಸಟ್ಟಾ ಬಜಾರ್ : INDIA ಮತ್ತು NDA ನಡುವೆ ತೀವ್ರ ಪೈಪೋಟಿ Janashakthi Media