ಬೆಂಗಳೂರು: ಗ್ಯಾರಂಟಿ ಯೋಜನೆಗಳು ಬಡವರ ಕಾರ್ಯಕ್ರಮಗಳಾಗಿದ್ದು, ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಬೆಂಗಳೂರಿನಲ್ಲಿ ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,ಗ್ಯಾರಂಟಿ ಯೋಜನೆಗಳನ್ನು ಇನ್ನಷ್ಟು ಪರಿಣಾಮಕಾರಿ ಅನುಷ್ಠಾನ ಮಾಡುತ್ತೇವೆಯೇ ವಿನಃ ನಿಲ್ಲಿಸುವ ಪ್ರಶ್ನೆಯೇ ಇಲ್ಲ. ಬಡವರ ಪರವಾದ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಬಗ್ಗೆ ಯೋಚನೆಯನ್ನೂ ಮಾಡುವುದಿಲ್ಲ ಎಂದು ಹೇಳಿದಿರು. ಇತ್ತೀಚೆಗೆ ಮಾಗಡಿ ಶಾಸಕರಾದ ಬಾಲಕೃಷ್ಣ ಅವರ ಕಾಂಗ್ರೆಸ್ ಲೋಕಸಭೆಯಲ್ಲಿ ಗೆಲುವು ಸಾಧಿಸದಿದ್ದರೆ, ಗ್ಯಾರಂಟಿಗಳನ್ನು ರದ್ದುಗೊಳಿಸಲಾಗುವುದು ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು. ” ಗ್ಯಾರಂಟಿ ಯೋಜನೆಗಳು ಬಡವರ ಕಾರ್ಯಕ್ರಮಗಳಾಗಿದ್ದು, ಅವುಗಳನ್ನು ಖಂಡಿತ ಮುಂದುವರೆಸಲಾಗುವುದು ” ಎಂದರು.
ಇದನ್ನೂ ಓದಿ : ಬಜೆಟ್ ಅಧಿವೇಶನ 2024 | ಅಭಿವೃದ್ಧಿ ಮುಂದುವರಿಯುತ್ತದೆ ಎಂದ ಪ್ರಧಾನಿ ಮೋದಿ
ಬಾಲಕೃಷ್ಣ ಹೇಳಿದ್ದೇನು?
ರಾಜ್ಯದ ಜನರಿಗೆ ಐದು ಗ್ಯಾರಂಟಿ ಯೋಜನೆಗಳನ್ನು ಕೊಟ್ಟರೂ, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನ ಪಡೆಯದಿದ್ದರೆ ಗ್ಯಾರಂಟಿಗಳನ್ನು ರದ್ದು ಮಾಡುವುದೇ ಒಳ್ಳೆಯದು. ಈ ಕುರಿತು, ಮುಖ್ಯಮಂತ್ರಿ ಅವರಿಗೂ ಹೇಳಿದ್ದೇನೆ’ ಎಂದು ಮಾಗಡಿ ಶಾಸಕ ಎಚ್.ಸಿ. ಬಾಲಕೃಷ್ಣ ಹೇಳಿದ್ದರು. ಜನಸ್ಪಂದನ ಸಭೆಯಲ್ಲಿ ಮಾತನಾಡಿದ ಅವರು, ‘ಬಿಜೆಪಿಯ ಧರ್ಮ ರಾಜಕಾರಣದ ಮಂತ್ರಾಕ್ಷತೆ ಬೇಕೋ ಅಥವಾ ಜನಸಾಮಾನ್ಯರ ಜೀವನ ಬದಲಿಸುತ್ತಿರುವ ಕಾಂಗ್ರೆಸ್‌ನ ಗ್ಯಾರಂಟಿ ಬೇಕೊ ಎಂದು ಜನ ಈ ಚುನಾವಣೆಯಲ್ಲಿ ತೀರ್ಮಾನ ಮಾಡಬೇಕು’ ಎಂದು ಹೇಳಿದ್ದರು.
ಅವರ ಈ ಹೇಳಿಕೆ ರಾಜ್ಯದಲ್ಲಿ ಸಂಚಲನ ಮೂಡಿಸಿತ್ತಲ್ಲದೆ ವಿಪಕ್ಷಗಳು ಅಸತ್ರವಾಗಿ ಪ್ರಯೋಗಿಸಲು ಸಜ್ಜಾಗಿದ್ದವು. ಸಿಎಂ ಈ ಉಹಾಪೋಹಗಳಿಗೆ ಅವಕಾಶ ನೀಡದೆ ಸ್ಪಷ್ಟತೆಯನ್ನು ನೀಡಿದ್ದಾರೆ.
ಈ ವಿಡಿಯೋ ನೋಡಿ : ರಾಜ್ಯ ಬಜೆಟ್ 2023 : ಗ್ಯಾರಂಟಿ ಲೆಕ್ಕಚಾರ ಏನು? ಎತ್ತ? Janashakthi Media