ಬೆಂಗಳೂರು: ನಗರದಲ್ಲಿ ಬಜೆಟ್ ಅಧಿವೇಶನ ಇಂದಿನಿಂದ ಆರಂಭವಾಗಲಿದೆ. ವಿಧಾನಸೌಧದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೊಟ್, ಜಂಟಿ ಅಧಿವೇಶನದ ಕುರಿತು ಭಾಷಣ ಮಾಡಿ, ರಾಜ್ಯ ಸರ್ಕಾರ ಜಿಎಸ್‌ಟಿ ಸಂಗ್ರಹದಲ್ಲಿ ಮುಂಚೂಣಿಯಲ್ಲಿದೆ ಎಂದು ತಿಳಿಸಿದರು. ಗ್ಯಾರಂಟಿ
ಸರ್ಕಾರ ಕಟ್ಟ ಕಡೆಯ ವ್ಯಕ್ತಿಯವರೆಗೂ ಯೋಜನೆ ತಲುಪಿಸಿದೆ. ಗ್ಯಾರೆಂಟಿಯಿಂದ ದಿವಾಳಿ ಆಗುತ್ತದೆ ಎಂದು ಹೇಳಿದ್ದರು. ಆದರೆ ಈ ಎಲ್ಲ ಆರೋಪಗಳನ್ನು ಸರ್ಕಾರ ಸುಳ್ಳು ಎಂದು ಸಾಬೀತು ಮಾಡಿದೆ. ಜಿಎಸ್‌ಟಿ ಸಂಗ್ರಹದಲ್ಲೂ ರಾಜ್ಯ ಮಂಚೂಣಿಯಲ್ಲಿದೆ.
ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ ಜನರಿಗೆ ಅನುಕೂಲವಾಗಿದೆ ರೈತರ ಪಂಪ್ಸೆಟ್ ಗಳಿಗೆ ಉಚಿತ ವಿದ್ಯುತ್ ವ್ಯವಸ್ಥೆ ಮಾಡಲಾಗಿದೆ. ಹಿಂದುಳಿದ ವರ್ಗಗಳಿಗೆ ಸಬ್ಸಿಡಿ ಇಂದ ಕುಟುಂಬಗಳಿಗೆ ಲಾಭವಾಗಿದೆ. ಆರ್ಥಿಕ ಸಾಮಾಜಿಕ ಮತ್ತು ಸಾಂಸ್ಕೃತಿಕ ಅಭಯ್ ಉದಯ ಆಗಿದೆ ಅಲ್ಲದೆ ಕತ್ತಲಿನಲ್ಲಿ ಇರುವವರಿಗೆ ಬೆಳಕು ತೋರಿಸುವ ಕೆಲಸ ಆಗಿದೆ ಎಂದು ತಿಳಿಸಿದರು.
ಇದನ್ನೂ ಓದಿ: ಮಾರ್ಚ್ 10ರೊಳಗೆ ಗ್ರಾಮ ಪಂಚಾಯತ್‌ಗಳು ಜನಸ್ನೇಹಿ ಬಜೆಟ್ ಮಂಡಿಸಿ: ಪ್ರಿಯಾಂಕ್ ಖರ್ಗೆ
ಉತ್ತಮ ಮಳೆಯಿಂದಾಗಿ ರೈತರಿಗೆ ಉತ್ತಮ ಫಸಲು ಬಂದಿದೆ. ಸರ್ಕಾರದ ಕಲ್ಯಾಣ ಯೋಜನೆಗಳಿಂದ ಆತ್ಮಹತ್ಯೆ ಸಂಖ್ಯೆ ಕಡಿಮೆಯಾಗಿದೆ. ರೈತರ ಆತ್ಮಹತ್ಯೆ ಸಂಖ್ಯೆಯಲ್ಲಿ ಗಣನೀಯವಾಗಿ ಇಳಿಕೆಯಾಗಿದೆ. ನಮ್ಮ ಸರ್ಕಾರ ವೇಗದ ಗತಿಯಲ್ಲಿ ಅಭಿವೃದ್ಧಿ ಕೆಲಸ ಮಾಡುತ್ತಿದೆ. ರಾಜ್ಯದ ಆಯವ್ಯಯ ವರದಿಯಾಗುತ್ತಿದೆ ರಾಜ್ಯದಲ್ಲಿ ಉತ್ತಮವಳಿಯಾಗಿದ್ದರಿಂದ ಉತ್ತಮ ಬೆಳೆ ಬಂದಿದೆ. ರಾಜ ಸರ್ಕಾರ ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ ಎಂದು ತಿಳಿಸಿದರು.
ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳ ತಡೆಗೆ, 5 ಲಕ್ಷ ರೂಪಾಯಿ ದಂಡ ವಿಧಿಸುವ ಸುಗ್ರೀವಾಜ್ಞೆ ಜಾರಿಗೆ ತರಲಾಗಿದೆ. ಕಿರು ಸಾಲ ವಸೂಲಾತಿ ಕಿರುಕುಳ ತಡೆಯಲು ಶಾಸನಾತ್ಮಕ ಕ್ರಮ ಕೈಗೊಳ್ಳಲಾಗಿದೆ. ಕಳೆದ 19 ತಿಂಗಳಲ್ಲಿ ಗಂಭೀರ ಕಾನೂನು ವ್ಯವಸ್ಥೆ ಸಮಸ್ಯೆ ಉದ್ಭವಿಸಿಲ್ಲ.
ಪೊಲೀಸ್ ಠಾಣೆಗಳು ಜನಸ್ನೇಹಿಯಾಗಿ ಕೆಲಸ ಮಾಡುತ್ತಿವೆ. ಪೊಲೀಸರು ಅಪರಾಧಿಗಳನ್ನು ಶೀಘ್ರ ಪತ್ತೆ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಹಾಗಾಗಿ ಈ ಪ್ರಕರಣಗಳಲ್ಲೂ ಇಳಿಕೆ ಕಾಣುತ್ತಿದೆ. ಮೂಲಸೌಕರ್ಯ ಒದಗಿಸುವುದರಲ್ಲೂ ಕರ್ನಾಟಕ ಮುಂಚೂಣಿಯಲ್ಲಿದೆ.
ಇದನ್ನೂ ನೋಡಿ: ಇಂಗ್ಲೀಷ್ ಕಲಿಯೋಣ | “Wh” ಪ್ರಶ್ನೆಗಳ ರಚನೆ ಹೇಗೆ? | ತೇಜಸ್ವಿನಿ |#whquestions| Spokenenglish |Janashakthi