ಬೆಂಗಳೂರು : ಅವರು ವಿಶ್ವ ಸಂಸ್ಥೆಯು ಗೊತ್ತು ಮಾಡಿರುವ ಸುಸ್ಥಿರ ಅಭಿವೃದ್ಧಿ ಗುರಿಗಳನ್ನು ಸಾಧಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳು ಸಹಕಾರಿಯಾಗಿವೆ ಎಂದು ತಿಳಿಸಿದರು. ಬೆಂಗಳೂರು
ಇದನ್ನೂ ಓದಿ : ನವದೆಹಲಿ | ತಾಂತ್ರಿಕ ದೋಷದಿಂದ 228 ಪ್ರಯಾಣಿಕರನ್ನು ದೆಹಲಿಗೆಕರೆತಂದ ಏರ್ ಇಂಡಿಯಾ
ಬುಧವಾರ ಇಲ್ಲಿನ ಖಾಸಗಿ ಹೋಟೆಲ್ನಲ್ಲಿ ವಿತ್ತೀಯ ಕಾರ್ಯನೀತಿ ಸಂಸ್ಥೆಯು ಆಯೋಜಿಸಿದ್ದ ‘ಸರಕಾರಿ ಗ್ಯಾರೆಂಟಿ ಯೋಜನೆಗಳ ಸಂಶೋಧನಾ ಫಲಿತಾಂಶಗಳ’ ಸಾರ್ವಜನಿಕ ಪ್ರಸರಣ ಕಾರ್ಯಕ್ರಮ’ವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಹಸಿವು ಮುಕ್ತ, ಪೌಷ್ಟಿಕ ಆಹಾರವೂ ಸುಸ್ಥಿರ ಅಭಿವೃದ್ಧಿಯ ಗುರಿಯಾಗಿದ್ದು, ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಅಪೌಷ್ಟಿಕತೆ ಮಟ್ಟ ಸುಧಾರಿಸಿದೆ. ಯುವನಿಧಿ ಮೂಲಕ ಗುಣಮಟ್ಟದ ಶಿಕ್ಷಣವನ್ನು ಅರ್ಥಪೂರ್ಣವಾಗಿದೆ. ಬಡತನ ನಿರ್ಮೂಲನೆ ಸುಸ್ಥಿರ ಅಭಿವೃದ್ಧಿ ಗುರಿಗಳಲ್ಲಿ ಮೊದಲನೆಯದಾಗಿದ್ದು, ಕರ್ನಾಟಕ ದೇಶದಲ್ಲಿಯೇ ಅತ್ಯಂತ ಹೆಚ್ಚಿನ ತಲಾದಾಯ ಹೊಂದಿರುವ ರಾಜ್ಯವಾಗಿದೆ. ಗ್ಯಾರಂಟಿ ಯೋಜನೆಗಳಿಂದ ಇದು ಸಾಧ್ಯವಾಗಿದೆ. ಕೌಶಲ್ಯ ತರಬೇತಿ ಹಾಗೂ ಹಣಕಾಸಿನ ನೆರವು ಒದಗಿಸುವ ಮೂಲಕ ಶೇ.100ರಷ್ಟು ಉದ್ಯೋಗವನ್ನು ಖಾತ್ರಿ ಪಡಿಸಲಾಗುತ್ತಿದೆ ಎಂದು ಅವರು ತಿಳಿಸಿದರು.
ಇದನ್ನೂ ನೋಡಿ : ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ ನಡೆಸಿದ್ದು ಯಾಕೆ? ಬಲಾಢ್ಯ ಜಾತಿಗಳು ವಿರೋಧಿಸಿದ್ದು ಯಾಕೆ? ರಾಜೇಂದ್ರ ಚೆನ್ನಿ ವಿಶ್ಲೇಷಣೆ
