ಬೆಳಗಾವಿ: ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿ ಮೇಲೆ ಖಾಸಗಿ ಕಾಲೇಜಿನ ಅತಿಥಿ ಉಪನ್ಯಾಸಕ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿದ್ದೂ, ಈ ಸಂಬಂಧ ಪೊಲೀಸರು ಆರೋಪಿ ಉಪನ್ಯಾಸಕನನ್ನು ನವೆಂಬರ್ 29ರಂದು ಬಂಧಿಸಿದ್ದಾರೆ.
ನಾಗೇಶ್ವರ ದೇಮಿನಕೊಪ್ಪ ಎಂಬವರೇ ಅತ್ಯಾಚಾರ ಎಸಗಿರುವ ಆರೋಪಿ. ಈ ಸಂಬಂಧ ಪೋಕ್ಸೋ ಪ್ರಕರಣ ದಾಖಲಿಸಿಕೊಂಡಿರುವ ಕ್ಯಾಂಪ್ ಠಾಣೆ ಪೊಲೀಸರು, ಆರೋಪಿಯನ್ನು ಬಂಧನ ಮಾಡಿದ್ದಾರೆ.
ಇದನ್ನೂ ಓದಿ: ಶಿವಮೊಗ್ಗ | ತಾಜ್ಯ ನಿರ್ವಹಣೆಗೆ ಸಾರ್ವಜನಿಕರು ಸ್ವಚತಾ ಸಿಬ್ಬಂದಿಗೊಂಳಿಗೆ ಕೈ ಜೋಡಿಸಿ – ಸಂಪತ್ ಸಿ ಎಂ
ಆರೋಪಿ ಕಳೆದ ಎರಡು ವರ್ಷಗಳಿಂದ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ. ಈ ವಿಷಯ ಬಹಿರಂಗಪಡಿಸದಂತೆ ತನಗೆ ಜೀವ ಬೆದರಿಕೆ ಕೂಡ ಹಾಕಿದ್ದ ಎಂದು ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ಆರೋಪಿ ಉಪನ್ಯಾಸಕನನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಮುಂದಿನ ತನಿಖೆ ಕೈಗೊಂಡಿದ್ದೇವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಇದನ್ನೂ ನೋಡಿ: ‘ರೈತ, ಕಾರ್ಮಿಕ, ಜನ ವಿರೋಧಿ ಸರ್ಕಾರ ಉಳಿಯುವುದಿಲ್ಲ’ | ಕರಡು ದಹಿಸಿ ಆಕ್ರೋಶ Janashakthi Media
