ಸಾವಿರಾರು ಅತಿಥಿ ಉಪನ್ಯಾಸಕರು ದಯಾಮರಣ ಕೋರಿ ರಾಷ್ಟ್ರಪತಿ, ರಾಜ್ಯಪಾಲರು ಹಾಗೂ ಮುಖ್ಯಮಂತ್ರಿಗೆ ಪತ್ರ ಬರೆಯುವ ಮೂಲಕ ಹೋರಟವನ್ನು ತೀವೃಗೊಳಿಸಿದ್ದಾರೆ.
ಅತಿಥಿ ಉಪನ್ಯಾಸಕರು ಕಳೆದ ಹಲವು ತಿಂಗಳುಗಳಿಂದ ರಾಜ್ಯಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದಾರೆ.ಈ ಪ್ರತಿಭಟನೆ ಮತ್ತಷ್ಟು ಕಾವು ಪಡೆದುಕೊಂಡಿದ್ದು, ಇದೀಗ ರಾಜ್ಯವ್ಯಾಪಿ ಸಾವಿರಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು ದಯಾಮರಣ ಕೋರಿ ಪತ್ರ ಬರೆಯುತ್ತಿದ್ದಾರೆ. ಒಂದೇ ಸೇವಾ ಭದ್ರತೆಯನ್ನು ನೀಡಿ ಅಥವಾ ಸೇವಾ ವಿಲೀನತೆ ನೀಡಿ ಇಲ್ಲದೇ ಹೋದಲ್ಲಿ ದಯಾಮರಣಕ್ಕೆ ಅನುಮತಿಸಿ ಎಂದು ರಾಷ್ಟ್ರಪತಿ, ರಾಜ್ಯಪಾಲರು ಹಾಗೂ ಶಿಕ್ಷಣ ಸಚಿವರನ್ನು ಕೋರುತ್ತಿದ್ದಾರೆ.
ಅತಿಥಿ ಉಪನ್ಯಾಸಕರಿಗೆ ನೀಡುತ್ತಿದ್ದ ವೇತನ ಹೆಚ್ಚಿಸುವ ನೆಪದಲ್ಲಿ ಅರ್ಧದಷ್ಟು ಶಿಕ್ಷಕರಿಗೆ ಕೆಲಸವಿಲ್ಲದಂತೆ ಮಾಡಿ,ಸರ್ಕಾರ ಇದುವರೆಗೂ ಕೆಲಸ ಮಾಡಿದ ಅತಿಥಿ ಉಪನ್ಯಾಸಕ ರನ್ನು ಸಾವಿನ ದವಡೆಗೆ ತಳ್ಳಿದೆ. ಸಮಸ್ಯೆ ಪರಿಹಾರದ ನೆಪದಲ್ಲಿಅತಿಥಿ ಉಪನ್ಯಾಸಕರನ್ನು ಮತ್ತಷ್ಟು ಸಂಕಷ್ಟಕ್ಕೆದೂಡಿದೆ. ಇದುವರಿಗಿದ್ದ 8 ಗಂಟೆಗಳ ಕಾರ್ಯಾಭಾರವನ್ನು 15 ಗಂಟೆಗಳಿಗೆ ಹೆಚ್ಚಿಸುವಮೂಲಕ ಸುಮಾರು 7500 ಸಾವಿರ ಅತಿಥಿಉಪನ್ಯಾಸಕಗೆ ಕೆಲಸವಿಲ್ಲದಂತೆ ಮಾಡಿದ್ದಾರೆ. ಇದುರಾಜ್ಯ ಸರ್ಕಾರದ ಸಂವಿಧಾನ ವಿರೋಧಿ ಧೋರಣೆಯಾಗಿದೆ. ಅದಕ್ಕಾಗಿ ಎಲ್ಲಾ ಶಿಕ್ಷಕರು ದಯಾಮರಣ ಕೋರಿ ರಾಷ್ಟ್ರಪತಿ ಗಳಿಗೆ ಮನವಿ ಸಲ್ಲಿಸುತ್ತಿರುವುದಾಗಿ ಅತಿಥಿ ಉಪನ್ಯಾಸಕರ ಸಂಘದ ಮುಂಖಂಡ ಜಿ.ಕೆ.ನಾಗಣ್ಣ ತಿಳಿಸಿದರು.
ಸರ್ಕಾರದ ಆದೇಶದ ಪ್ರಕಾರವಾಗಿ ಗಮನಿಸಿದಾಗ ಅನೇಕ ಅತಿಥಿ ಉಪನ್ಯಾಸಕರು ತಮ್ಮ ಕೆಲಸವನ್ನು ಕಳೆದುಕೊಳ್ಳುವ ಭೀತಿ ಎದುರಾಗಿದೆ. ಜೀವನ ನಡೆಸಲು ಅತ್ಯಂತ ಕಷ್ಟವಾಗಿದೆ ಎಂದು ತಮ್ಮ ಅಸಹಾಯಕತೆಯನ್ನು ವ್ಯಕ್ತಪಡಿಸಿದ್ದಾರೆ. ಇಬ್ಬರ ಸಂಬಳವನ್ನು ಕಿತ್ತುಕೊಂಡು ಒಬ್ಬರಿಗೆ ನೀಡುವುದು ಸರಿಯಲ್ಲ ಸರ್ಕಾರದ ಹೊಸ ಆದೇಶದಿಂದಾಗಿ ಅನೇಕ ಉಪನ್ಯಾಸಕರಿಗೆ ಬಹಳಷ್ಟು ತೊಂದರೆ ಉಂಟಾಗಿದೆ ಎಂದು ಅತಿಥಿ ಉಪನ್ಯಾಸಕ ಸಚಿನ್ ಕುಮಾರ್ ಆರೋಪಿಸಿದ್ದಾರೆ. ಸೋಮವಾರದಿಂದ ರಾಜ್ಯವ್ಯಾಪಿ ಪ್ರತಿಭಟನೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ.