ಬೆಂಗಳೂರು: ರಾಜ್ಯದ ವಿವಿಧ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಶಿಕ್ಷಕರು ಶಾಲೆಗಳಲ್ಲಿರುವ ಶಿಕ್ಷಕರ ಕೊರತೆಯನ್ನು ಸರಿದೂಗಿಸುತ್ತ ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಲು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಶಿಕ್ಷಣದ ಹಕ್ಕಿಗಾಗಿ ಜನಾಂದೋಲನಗಳ ಸಮನ್ವಯ (ಪಾಫ್ರೆ) ಸಂಚಾಲಕ ನಿರಂಜನಾರಾಧ್ಯ ವಿ.ಪಿ ಹೇಳಿದ್ದಾರೆ. ಸಂಕಷ್ಟ
ಪ್ರಾಮಾಣಿಕವಾಗಿ ದುಡಿಯುತ್ತಿರುವ ಅತಿಥಿ ಶಿಕ್ಷಕರಿಗೆ ನವೆಂಬರ್ 2025 ನಿಂದ ಫೆಬ್ರವರಿ 2026 ರವರೆಗಿನ ನಾಲ್ಕು ತಿಂಗಳ ವೇತನ ಬಿಡುಗಡೆಯಾಗಿರುವುದಿಲ್ಲ . ಅತಿಥಿ ಶಿಕ್ಷಕರು ವೇತನವಿಲ್ಲದೆ ದಿನನಿತ್ಯ ಜೀವನ ನಿರ್ವಹಣೆಗೆ ತುಂಬಾ ಕಷ್ಟಪಡುವಂತಾಗಿದೆ. ಸಂಕಷ್ಟ
ಇದನ್ನೂ ಓದಿ: ಮಾರುಕಟ್ಟೆ ಶ್ರದ್ಧೆಯೂ ಭರವಸೆಗಳ ನಂಬಿಕೆಯೂ
ಇದು ನೇರವಾಗಿ ಮಕ್ಕಳ ಕಲಿಕೆಯ ಮೇಲೆ ಪರಿಣಾಮ ಬೀರುತ್ತಿದ್ದು ಪರೀಕ್ಷೆ ಸಮಯವಾಗಿರುವುದರಿಂದ ,ಶಿಕ್ಷಕರು ಆತಂಕಕ್ಕೆ ಒಳಗಾಗಿದ್ದಾರೆ . ಇದು ಮಕ್ಕಳು ಮತ್ತು ಪಾಲಕರ ಮೇಲೆ ನೇರ ಪರಿಣಾಮ ಬೀರುತ್ತದೆ.
ಸನ್ಮಾನ್ಯ ಮುಖ್ಯಮಂತ್ರಿಗಳು ಈ ಶಿಕ್ಷಕರ ವೇತನವನ್ನು ಬಿಡುಗಡೆ ಮಾಡಲು ಸಂಬಂಧಿಸಿದವರಿಗೆ ಸೂಕ್ತ ನಿರ್ದೇಶನ ನೀಡಬೇಕೆಂದು ಶಿಕ್ಷಣದ ಹಕ್ಕಿಗಾಗಿ ಜನಾಂದೋಲನಗಳ ಸಮನ್ವಯ ಮನವಿ ಮಾಡುತ್ತದೆ ಎಂದರು.
ಇದನ್ನೂ ನೋಡಿ: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ – ಹಾಸನ | ಉದ್ಘಾಟನಾ ಕಾರ್ಯಕ್ರಮದಲ್ಲಿ ಸೇರಿದ ಜನಸ್ತೋಮ Janashakthi Media
