ಬೆಂಗಳೂರು| ಹಕ್ಕಿ ಜ್ವರ: ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟನೆ

Please follow and like us:
ಬೆಂಗಳೂರು: ಆರೋಗ್ಯ ಇಲಾಖೆಯು ರಾಜ್ಯದಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಾರ್ಗಸೂಚಿಯನ್ನು ಪ್ರಕಟಿಸಿದೆ. ಹಕ್ಕಿಜ್ವರದ ಗುಣಲಕ್ಷಣ ಇರುವವರೆಗೆ RTPCR ಟೆಸ್ಟ್ ಕಡ್ಡಾಯ ಎಂದು ಆರೋಗ್ಯ ಇಲಾಖೆ ಆಯುಕ್ತ ಶಿವಕುಮಾರ್ ಹೇಳಿದ್ದಾರೆ.

ಹಕ್ಕಿ ಜ್ವರ ರಾಜ್ಯದ ಹಲವು ಕಡೆ ಕಾಣಿಸಿಕೊಂಡ ಹಿನ್ನೆಲೆ ಎಚ್ಚರಿಕೆ ವಹಿಸಲಾಗಿದೆ.

ಹಕ್ಕಿಜ್ವರ ಕಂಡುಬಂದ 3 ಕಿಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸುವಂತೆ ಸೂಚನೆ ನೀಡಿದ್ದಾರೆ. ಹಾಗೂ ಸಾರ್ವಜನಿಕರು ಚೆನ್ನಾಗಿ ಬೇಯಿಸಿದ ಮಾಂಸವನ್ನು ಮಾತ್ರ ತಿನ್ನುವಂತೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಹೆಣ್ಣು ಮಕ್ಕಳಿಗೆ ಪೇಟೆ ಗಂಡೇ ಏಕೆ ಬೇಕು ?

* ಹಕ್ಕಿ ಜ್ವರ ಕಂಡುಬಂದ ಜಾಗದಿಂದ 3 ಕಿ.ಮೀ ಮಾಂಸ ಮಾರಾಟ ಮಾಡುವಂತಿಲ್ಲ.

* ಪೌಲ್ಟ್ರಿಯಲ್ಲಿ ಕೆಲಸ ಮಾಡುವವರಿಗೆ ಮುನ್ನೆಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ.

* ಜ್ವರ ಕಾಣಿಸಿಕೊಂಡವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

* ಕೋಳಿ ಮಾಂಸ ಧರಿಸುವಾಗ ಮಾಸ್ಕ್, ಗ್ಲೌಸ್ ಧರಿಸುವುದು ಕಡ್ಡಾಯ.

* ಹಕ್ಕಿಜ್ವರ ಬಂದವರಿಗೆ ಪ್ರತ್ಯೇಕ ವಾರ್ಡ್ ತೆರೆಯಬೇಕು.

ಇದನ್ನೂ ನೋಡಿ: CITU | ಶ್ರಮಜೀವಿಗಳ ಅಹೋರಾತ್ರಿ ಹೋರಾಟಕ್ಕೆ ಚಾಲನೆ

Please follow and like us:
Donate Janashakthi Media

Leave a Reply

Your email address will not be published. Required fields are marked *