ಗುಜರಾತ್ ಚುನಾವಣಾ ಫಲಿತಾಂಶ ಕರ್ನಾಟಕಕ್ಕೆ ಪರಿಣಾಮ ‌ಬೀರುವುದಿಲ್ಲ: ಸಿದ್ದರಾಮಯ್ಯ

ಮೈಸೂರು: ಗುಜರಾತ್ ವಿಧಾನಸಭಾ ಚುನಾವಣಾ ಫಲಿತಾಂಶದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್‌ ಪಕ್ಷದ ನಾಯಕ ಸಿದ್ದರಾಮಯ್ಯ, ಗುಜರಾತ್‌ ವಿಧಾನಸಭೆ ಚುನಾವಣೆ ಫಲಿತಾಂಶ ಕರ್ನಾಟಕದಲ್ಲಿ ಮುಂಬರುವ ಚುನಾವಣೆಯ ಮೇಲೆ ಯಾವುದೇ ಪರಿಣಾಮವನ್ನು ಬೀರುವುದಿಲ್ಲ ಎಂದು ಹೇಳಿದರು.

ಒಂದು ರಾಜ್ಯದ ಚುನಾವಣಾ ಫಲಿತಾಂಶದ ಗಾಳಿ ಇನ್ನೊಂದು ರಾಜ್ಯಕ್ಕೆ ಬೀಸುವುದಿಲ್ಲ ಎಂದ ಅವರು, ಅಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂಬ ನಿರೀಕ್ಷೆ ಇತ್ತು. ಆಮ್ ಆದ್ಮಿ ಪಕ್ಷದವರು ಸ್ಪರ್ಧೆ ಮಾಡಿ ಕಾಂಗ್ರೆಸ್ ಮತಗಳನ್ನು ಕಬಳಿಸಿದರು. ಆ ಪಕ್ಷದವರು ಪಡೆದ ಮತಗಳೆಲ್ಲ ಕಾಂಗ್ರೆಸ್‌ನದ್ದೇ’ ಎಂದರು.

ಹಿಮಾಚಲ ಪ್ರದೇಶದಲ್ಲಿ ಆಡಳಿತ ವಿರೋಧಿ ಅಲೆ ಇತ್ತು. ಕಾಂಗ್ರೆಸ್‌ಗೆ ಹೆಚ್ಚಿನ ಸ್ಥಾನಗಳು ಲಭಿಸಿದೆ. ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸುತ್ತದೆ ಎನ್ನುವ ಮಾಹಿತಿ ನಮಗೆ ಇತ್ತು. ನಾನೇನು ಅಲ್ಲಿಗೆ ಹೋಗಿಲ್ಲ. ಆದರೆ ಮಾಹಿತಿ ಪ್ರಕಾರ ಕಾಂಗ್ರೆಸ್‌ ಪರವಾಗಿತ್ತು ಎಂದರು.

ಗುಜರಾತ್‌ ನಲ್ಲಿ ಆಮ್ ಆದ್ಮಿ ಪಕ್ಷ ಭಾರೀ ಪ್ರಮಾಣದಲ್ಲಿ ಹಣ ಖರ್ಚು ಮಾಡಿತು. ಬಿಜೆಪಿಯವರೇ ಆ ಪಕ್ಷಕ್ಕೆ ಹಣ ಒದಗಿಸಿದ್ದಾರೆ. ಕಾಂಗ್ರೆಸ್ ಮತ ವಿಭಜನೆಗಾಗಿ ಆಮ್ ಆದ್ಮಿ ಪಕ್ಷಕ್ಕೆ  ಬಿಜೆಪಿ ಹಣ ನೀಡಿತು. ದುಡ್ಡು ಖರ್ಚು ಮಾಡಿದರೂ ಆಮ್ ಆದ್ಮಿ ಪಕ್ಷ 6 ಸ್ಥಾನ ಪಡೆದಿದೆ’ ಎಂದು ಆರೋಪಿಸಿದರು.

ಇನ್ನು ಗುಜರಾತ್‌ ಫಲಿತಾಂಶದ ಪರಿಣಾಮ ಕರ್ನಾಟಕದ ಮೇಲೆ ಪ್ರಭಾವ ಬೀರಲಿದೆಯಾ ಎನ್ನುವುದರ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ, ಒಂದು ರಾಜ್ಯದ ಚುನಾವಣಾ ಫಲಿತಾಂಶ ಮತ್ತೊಂದು ರಾಜ್ಯಕ್ಕೆ ಬೀಸುವುದಿಲ್ಲ. ಪ್ರಭಾವ ಬೀರಿದ್ದಲ್ಲಿ, ದೆಹಲಿಯಲ್ಲಿ ಯಾಕೆ ಬಿಜೆಪಿ ಗೆದ್ದಿಲ್ಲ. ಮೋದಿ ಹವಾ ಎಲ್ಲೂ ಇಲ್ಲ. ಹವಾ ಇದ್ದಿದ್ದರೆ ದೆಹಲಿಯಲ್ಲೇ ಸೋಲುತ್ತಿದ್ದರೇಕೆ. ಎಲ್ಲಿ ಹೋಯಿತು ಮೋದಿ ಹವಾ?’ ಎಂದು ವ್ಯಂಗ್ಯವಾಗಿ ಕೇಳಿದರು.

ಕರ್ನಾಟಕದ ಬಿಜೆಪಿ ಸರ್ಕಾರ ಅತಿ ಭ್ರಷ್ಟ ಸರ್ಕಾರ. ಕಾಂಗ್ರೆಸ್ ಇಲ್ಲಿ ಶಕ್ತಿಯುತವಾಗಿದೆ. ಗುಜರಾತ್‌ಗೆ ಹೋಲಿಸಬಾರದು. ರಾಜ್ಯದಲ್ಲಿ ಸೋಲುತ್ತೇವೆ ಎಂಬುದು ಬಿಜೆಪಿಯವರಿಗೂ ಗೊತ್ತಿದೆ. ಜೆಡಿಎಸ್ ಜೊತೆ ಬಿಜೆಪಿ ತಂತ್ರಗಾರಿಕೆ ಮಾಡಬಹುದು. ಆದರೆ, ಅದು ನಡೆಯುವುದಿಲ್ಲ. ಕರ್ನಾಟಕದ ಆಡಳಿತ ಪರಿಸ್ಥಿತಿ ಬಹಳ ಕೆಟ್ಟದಾಗಿದೆ ಎಂದರು.

Donate Janashakthi Media

Leave a Reply

Your email address will not be published. Required fields are marked *